ETV Bharat / state

ಸುಲಿಗೆ, ದರೋಡೆ ಸಹಿತ 42 ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿ ಶೀಟರ್‌ ಬಂಧನ - Arrest of Rowdy Sheeter

ವಿವಿಧ ಜಿಲ್ಲೆಯಲ್ಲದೇ, ನೆರೆಯ ರಾಜ್ಯ ಗೋವಾದಲ್ಲೂ ಸುಲಿಗೆ, ಕಳ್ಳತನ ಸೇರಿದಂತೆ 42 ಪ್ರಕರಣದಲ್ಲಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಇಂದು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರೌಡಿ ಶೀಟರ್‌ ಬಂಧನ
ರೌಡಿ ಶೀಟರ್‌ ಬಂಧನ
author img

By ETV Bharat Karnataka Team

Published : Apr 23, 2024, 2:07 PM IST

ಬೆಂಗಳೂರು: ಸುಲಿಗೆ, ಕಳ್ಳತನ ಸೇರಿದಂತೆ 42 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ಠಾಣೆಯ ರೌಡಿಶೀಟರ್ 'ಅಜೀಜ್ ಆಸೀಫ್' ಬಂಧಿತ ಆರೋಪಿ.

2015ರಿಂದ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 36, ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 07 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ವಿರುದ್ಧ 2 ಪ್ರಕರಣಗಳು ಸೇರಿದಂತೆ ಗೋವಾ ರಾಜ್ಯದಲ್ಲಿಯೂ ಸಹ ಆರೋಪಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.

ಭಾರತಿನಗರ ಹಾಗೂ ಯಲಹಂಕ ಪೊಲೀಸ್ ಠಾಣೆಯಲ್ಲಿ ತಲಾ 1 ಕಳವು ಪ್ರಕರಣ ಮತ್ತು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ 2 ರಾಬರಿ ಪ್ರಕರಣ, ತುಮಕೂರು ಜಿಲ್ಲೆಯ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ 1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಮತ್ತು ತುಮಕೂರು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 2 ರಾಬರಿ ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿದ್ದವು.

ಆದರೂ ಸಹ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ವಿರುದ್ಧ ಜಾಮೀನು ರಹಿತ ವಾರಂಟ್​ ಜಾರಿಯಾಗಿತ್ತು. ಆರೋಪಿಯ ಕುರಿತು ಮಾಹಿತಿ ಸಂಗ್ರಹಿಸಿದ್ದ ಸಿಸಿಬಿ ಪೊಲೀಸರು ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಮ್ ಸ್ಟ್ರಾಂಗ್​ ರಸ್ತೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನ ಬಳಿ ವಿವಿಧ ಕಂಪನಿಯ ಒಟ್ಟು 12 ಮೊಬೈಲ್ ಪೋನ್‌ಗಳು, 4 ಚಿನ್ನದ ಕಾಸಿನ ತಾಳಿಗಳು, 1 ಮಾಂಗಲ್ಯ 2 ಚಿನ್ನದ ಗುಂಡುಗಳು, ಕೊಳವೆ ಆಕಾರದ ಗುಂಡುಗಳಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿತನ ವಿರುದ್ಧ ಬಾಕಿ ಇರುವ ಜಾಮೀನು ರಹಿತ ವಾರಂಟ್​​ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಐಡಿ ಕ್ರೈಂ ಬ್ರ್ಯಾಂಚ್'ನ ಅಧಿಕಾರಿಗಳು ಎಂದು ಬಂದಿದ್ದ ಮೂವರು ನಕಲಿಗಳ ಬಂಧನ - fake CID officers

ETV Bharat Logo

Copyright © 2024 Ushodaya Enterprises Pvt. Ltd., All Rights Reserved.