ETV Bharat / state

ದೊಡ್ಡಬಳ್ಳಾಪುರ: ಹಣ ಕೇಳಿದ ಸ್ನೇಹಿತನ ಹತ್ಯೆ, ಇಬ್ಬರು ಆರೋಪಿಗಳ ಬಂಧನ - MAN MURDER CASE

ಹಣದ ವಿಚಾರವಾಗಿ ಸ್ನೇಹಿತನನ್ನೇ ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು (ETV Bharat)
author img

By ETV Bharat Karnataka Team

Published : 15 hours ago

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಮೂರು ತಿಂಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯೊಬ್ಬ ಹಣದ ವಿಚಾರವಾಗಿ ಗೆಳೆಯರಿಂದಲೇ ಕೊಲೆಯಾದ ಪ್ರಕರಣ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಶೆಟ್ಟಿಹಳ್ಳಿ ನಿವಾಸಿ ದೇವರಾಜು ಕೊಲೆಯಾದ ವ್ಯಕ್ತಿ. ಈ ಪ್ರಕರಣವನ್ನು ಭೇದಿಸಿರುವ ಪೊಲೀಸರು, ರಾಜ್​ಕುಮಾರ್ ಮತ್ತು ಅನಿಲ್ ಎಂಬುವರನ್ನು ಬಂಧಿಸಿದ್ದಾರೆ.

ಉದ್ಯಮಿ ದೇವರಾಜು ಮಾಡುತ್ತಿದ್ದ ವ್ಯವಹಾರದಲ್ಲಿ ರಾಜ್​ಕುಮಾರ್ ಜೊತೆಗಾರನಾಗಿದ್ದ. ವ್ಯವಹಾರಕ್ಕೆಂದು ಸುಮಾರು 70 ಲಕ್ಷ ಹಣವನ್ನ ರಾಜ್​​ಕುಮಾರ್, ದೇವರಾಜು ಬಳಿಯಿಂದ ಪಡೆದಿದ್ದ. ಈ ಹಣವನ್ನು ವಾಪಸ್ ಕೊಡುವಂತೆ ದೇವರಾಜು ಪದೇ ಪದೆ ಕೇಳುತ್ತಿದ್ದ. ಇದರಿಂದ ರಾಜ್​ಕುಮಾರ್, ದೇವರಾಜುನನ್ನು​ ಕೊಲೆ ಮಾಡಲು ನಿರ್ಧರಿಸಿದ್ದ. ಅದರಂತೆ ಅಕ್ಟೋಬರ್ 14ರಂದು ದೇವರಾಜುನ ಮನೆಗೆ ಬಂದ ರಾಜ್​ಕುಮಾರ್, ಹಣ ಕೊಡುವುದಾಗಿ ಹೇಳಿ ಕಾರಿನಲ್ಲಿ ಗೌರಿಬಿದನೂರು ಕಡೆಗೆ ಕರೆದುಕೊಂಡು ಹೋಗಿ ಸ್ನೇಹಿತರ ಜೊತೆ ಸೇರಿ ಹತ್ಯೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನ ಪತ್ನಿ, ಸಂಬಂಧಿ ಪ್ರತಿಕ್ರಿಯೆ (ETV Bharat)

ನಂತರ ಶವವನ್ನು ದೊಡ್ಡಬಳ್ಳಾಪುರ ಹೊರವಲಯದ ಇನ್ಫೋಸಿಟಿಯಲ್ಲಿರುವ ತನ್ನ ನಿವೇಶನದಲ್ಲಿ ಗುಂಡಿ ತೋಡಿ ಮುಚ್ಚಿ ಹಾಕಿದ್ದ. ಪೊಲೀಸರಿಗೆ ಸಿಕ್ಕಿ ಬೀಳುವ ಭಯದಿಂದ ಶವವನ್ನು ಗುಂಡಿಯಿಂದ ಹೊರ ತೆಗೆದು ಡ್ರಮ್​ನಲ್ಲಿ ಹಾಕಿ ಸುಟ್ಟು ಹಾಕಿದ್ದ. ತದನಂತರ ಅರೆಬರೆಯಾಗಿ ಸುಟ್ಟ ಶವವನ್ನು ಮಧುರೆ ಕೆರೆಗೆ ಎಸೆದು ತನಗೇನು ಗೊತ್ತೇ ಇಲ್ಲ ಎಂಬುವಂತೆ ದೇವರಾಜು ಕುಟುಂಬಸ್ಥರೊಂದಿಗೆ ಸೇರಿ ಹುಡುಕಾಟದ ನಾಟಕವಾಡಿದ್ದ ಎಂದು ವಿವರಿಸಿದರು.

ಮೃತ ದೇವರಾಜು ಕುಟುಂಬಸ್ಥರು ಅಕ್ಟೋಬರ್ 17ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆಗಿಳಿದ ಪೊಲೀಸರು, ರಾಜ್​ಕುಮಾರ್​ನನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ದೇವನಹಳ್ಳಿ: ಹಿಟ್ ಅಂಡ್ ರನ್​, ಇಬ್ಬರು ವೃದ್ಧರು ಗಂಭೀರ ಗಾಯ ; ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.