ETV Bharat / state

ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆ; ಬಿಬಿಎಂಪಿಯಿಂದ ಜಾಗೃತಿ ಜಾಥಾ - International Plastic Bag Free Day - INTERNATIONAL PLASTIC BAG FREE DAY

ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆ ಅಂಗವಾಗಿ ಪಾಲಿಕೆಯಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಈ ಜಾಥಾದಲ್ಲಿ ನೂರಾರು ಜನರು ಭಾಗವಹಿಸಿದ್ದರು.

AWARENESS CAMPAIGN  CORPORATION  BBMP  BENGALURU
ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆ ಅಂಗವಾಗಿ ಪಾಲಿಕೆಯಿಂದ ಜಾಗೃತಿ ಜಾಥಾ... (ETV Bharat)
author img

By ETV Bharat Karnataka Team

Published : Jul 3, 2024, 1:40 PM IST

Updated : Jul 3, 2024, 4:04 PM IST

ಬಿಬಿಎಂಪಿಯಿಂದ ಜಾಗೃತಿ ಜಾಥಾ (ETV Bharat)

ಬೆಂಗಳೂರು: ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆಯ ಅಂಗವಾಗಿ, ಪೂರ್ವ ವಲಯ ಹೆಬ್ಬಾಳ ವಿಭಾಗದ ಮುನಿರೆಡ್ಡಿ ಪಾಳ್ಯ ವ್ಯಾಪ್ತಿಯಲ್ಲಿ ಪಾಸ್ಟಿಕ್ ನಿಷೇಧದ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.

ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಬಟ್ಟೆ ಚೀಲ ಅಥವಾ ಪೇಪರ್ ಚೀಲಗಳನ್ನು ಮಾತ್ರ ಬಳಸಲು ನಾಗರೀಕರು ಹಾಗೂ ವ್ಯಾಪಾರಿಗಳಲ್ಲಿ ಹೆಚ್ಚಾಗಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

awareness campaign  Corporation  BBMP  Bengaluru
ಪಾಲಿಕೆಯಿಂದ ಜಾಗೃತಿ ಜಾಥಾ (ETV Bharat)

ಬೀದಿ ಬದಿ ವ್ಯಾಪಾರಿಗಳು, ಅಂಗಡಿ-ಮುಂಗಟ್ಟುಗಳಲ್ಲಿ ಮಾರಾಟ ಮಾಡುವವರಿಗೆ ಯಾವ್ಯಾವ ಪ್ಲಾಸ್ಟಿಕ್ ನಿಷೇಧವಾಗಿದೆ, ಯಾವುದನ್ನು ಬಳಸಲು ಅನುಮತಿಯಿದೆ ಎಂಬುದರ ಭಿತ್ತಿಪತ್ರಗಳನ್ನು ನೀಡಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಬಟ್ಟೆ ಬ್ಯಾಗ್, ಪೇಪರ್ ಸ್ಟ್ರಾ ವಿತರಣೆ: ಜಾಗೃತಿ ಜಾಥಾ ಸಮಯದಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಅಂಗಡಿಗಳ ಬಳಿ ತೆರಳಿ ಭಿತ್ತಿಪತ್ರಗಳನ್ನು ವಿತರಿಸುವ ಜೊತೆಗೆ ಬಟ್ಟೆ ಚೀಲಗಳನ್ನು ವಿತರಿಸಿ ಇನ್ನು ಮುಂದೆ ಪ್ಲಾಸ್ಟಿಕ್ ಚೀಲಗಳನ್ನು ಬಳಸದೆ ಇದೇ ರೀತಿಯ ಬಟ್ಟೆ ಚೀಲಗಳನ್ನು ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಚೀಲಗಳನ್ನು ಬಳಸಬಾರದು ಎಂದು ಮನವಿ ಮಾಡಿದರು.

ಎಳನೀರು ಮಾರಾಟ ಮಾಡುವವರಿಗೆ ಪೇಪರ್ ಸ್ಟ್ರಾ ವಿತರಣೆ ಮಾಡಿ ಪ್ಲಾಸ್ಟಿಕ್​ನಿಂದ ತಯಾರಿಸಿದ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಬಳಸದಂತೆ ಮನವಿ ಮಾಡಿದರು. ಇದೇ ವೇಳೆ ಸಾರ್ವಜನಿಕರಿಗೆ ಮನೆಯಿಂದಲೇ ಕೈ ಚೀಲಗಳನ್ನು ತರಲು ಅಭ್ಯಾಸ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಬಟ್ಟೆ ಚೀಲಗಳನ್ನು ಖರೀದಿಸುವಂತೆ ಸಲಹೆ ನೀಡಿದರು.

ಮೊದಲು ಎಚ್ಚರಿಕೆ ನಂತರ ದಂಡ: ನಿಷೇಧಿತ ಪ್ಲಾಸ್ಟಿಕ್ ಬಳಸುವವರಿಗೆ ಪ್ಲಾಸ್ಟಿಕ್ ಚೀಲ ಬಳಸುತ್ತಿದ್ದರೆ ಮೊದಲು ಎಚ್ಚರಿಕೆ ನೀಡುತ್ತೇವೆ. ಮತ್ತೆ ಪ್ಲಾಸ್ಟಿಕ್ ಬಳಸುವುದು ಕಂಡುಬಂದರೆ ದಂಡ ವಿಧಿಸಲಾಗುವುದು. ಒಮ್ಮೆ ಬಳಸುವ ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಕಾರಕವಾಗಿದ್ದು, ಅದನ್ನು ನಾವೆಲ್ಲರೂ ಸೇರಿ ನಿಷೇಧಿಸೋಣ ಎಂದು ಅರಿವು ಮೂಡಿಸಿದರು.

ಈ ವೇಳೆ ವಲಯ ಆಯುಕ್ತೆ ಸ್ನೇಹಲ್, ವಲಯ ಜಂಟಿ ಆಯುಕ್ತೆ ಸರೋಜಾ, ಘನತ್ಯಾಜ್ಯ ವಿಭಾಗದ ಅಧೀಕ್ಷಕ ಅಭಿಯಂತರ ವಿಶ್ವನಾಥ್, ಆರೋಗ್ಯಾಧಿಕಾರಿಗಳು, ಮಾರ್ಷಲ್‌ಗಳು, ಸ್ಥಳೀಯ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು/ಸ್ಥಳೀಯರು ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಓದಿ: ಪಾತ್ರೆ, ಗ್ಲಾಸು, ಪ್ಲಾಸ್ಟಿಕ್ ಬಾಟಲಿಗಳ ಮೇಲಿರುವ ಸ್ಟಿಕ್ಕರ್‌ಗಳನ್ನು ಸುಲಭವಾಗಿ ತೆಗೆಯುವುದು ಹೇಗೆ ಗೊತ್ತಾ? - Tips to Remove Stickers

Last Updated : Jul 3, 2024, 4:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.