ಚಾಮರಾಜನಗರ: ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆ ಐತಿಹಾಸಿಕ ದೇವಾಲಯವಾದ ಚಾಮರಾಜನಗರದ ಚಾಮರಾಜೇಶ್ವರ ದೇಗುಲದಲ್ಲಿ ಚಾಮುಂಡೇಶ್ವರಿ ದೇವಿಗೆ ನೂರಾರು ಮಹಿಳೆಯರು ನಿಂಬೆಹಣ್ಣಿನ ಆರತಿ ಬೆಳಗಿದರು.
![ಆಷಾಢ ಶುಕ್ರವಾರ](https://etvbharatimages.akamaized.net/etvbharat/prod-images/26-07-2024/kn-cnr-02-gajalakshmi-av-ka10038_26072024143800_2607f_1721984880_22.jpeg)
ಆಷಾಢ ಶುಕ್ರವಾರದಂದು ನಿಂಬೆಹಣ್ಣಿನ ಆರತಿ ಬೆಳಗಿದರೇ ಇಷ್ಟಾರ್ಥ ಸಿದ್ಧಿ, ಕಂಕಣ ಭಾಗ್ಯ ಕೂಡಿ ಬರಲಿದೆ ಎಂಬ ನಂಬಿಕೆ ಇದೆ. ಈಶ್ವರ ಅಭಿಷೇಕ ಪ್ರಿಯನಾದರೆ, ವಿಷ್ಣು ಅಲಂಕಾರ ಪ್ರಿಯ. ಆದೇ ರೀತಿ ಚಾಮುಂಡೇಶ್ವರಿ ದೇವಿ ಸ್ತೋತ್ರ ಪ್ರಿಯಳಾಗಿದ್ದಾಳೆ. ಆಷಾಢ ಮಾಸದಲ್ಲಿ ದೇವಿಯನ್ನು ಸ್ಮರಿಸಿ ಸ್ತೋತ್ರ ಹೇಳಿದರೆ ದೇವಿ ನಮ್ಮೆಲ್ಲಾ ಕಷ್ಟಗಳನ್ನು ದೂರ ಮಾಡುತ್ತಾಳೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಸಹಸ್ರಾರು ಮಹಿಳೆಯರು, ಯುವತಿಯರು ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.
![ಚಾಮರಾಜೇಶ್ವರ ದೇಗುಲ](https://etvbharatimages.akamaized.net/etvbharat/prod-images/26-07-2024/kn-cnr-02-gajalakshmi-av-ka10038_26072024143800_2607f_1721984880_1082.jpeg)
ಇನ್ನೂ ಕೆಲವರು ಸೇಬು, ನಿಂಬೆ, ಕಿತ್ತಲೆ ಸೇರಿದಂತೆ ವಿವಿಧ ಬಗೆಯ ಹಣ್ಣಿನ ಹಾರ ತಯಾರಿಸಿ ದೇವರಿಗೆ ಅರ್ಪಿಸುತ್ತಾರೆ. ನಿಂಬೆಹಣ್ಣಿಗೆ ಆಕರ್ಷಣಾ ಶಕ್ತಿ ಹೆಚ್ಚು. ಹೀಗಾಗಿ ನಿಂಬೆಹಣ್ಣನ್ನು ದೇವತಾ ಪಾದಕ್ಕೆ ಹಿಂಡಿ ಅದರ ಸಿಪ್ಪೆಯಿಂದ ದೀಪ ತಯಾರಿಸಿ, ಆರತಿ ಮಾಡಿದರೆ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ನಂಬಿಕೆ ತಲೆ ತಲಾಂತರದಿಂದ ನಡೆದುಕೊಂಡು ಬಂದಿದೆ.
![ಚಾಮರಾಜೇಶ್ವರ ದೇಗುಲ](https://etvbharatimages.akamaized.net/etvbharat/prod-images/26-07-2024/kn-cnr-02-gajalakshmi-av-ka10038_26072024143800_2607f_1721984880_710.jpeg)
ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ಗಜಲಕ್ಷ್ಮಿ ಅಲಂಕಾರವನ್ನು ಅರ್ಚಕ ನಾಗರಾಜ್ ದೀಕ್ಷಿತ್ ಮಾಡಿದ್ದರು.
ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ 3ನೇ ಆಷಾಢ ಶುಕ್ರವಾರ: ಮಹಾರಾಜರ ವರ್ಧಂತಿ ಹಿನ್ನೆಲೆ ವಿಶೇಷ ಉತ್ಸವ - WHAT IS THE ASHADA FRIDAY