ETV Bharat / state

ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವು ಪ್ರಕರಣ; ಪಿಎಸ್ಐ ಸಸ್ಪೆಂಡ್

author img

By ETV Bharat Karnataka Team

Published : Mar 17, 2024, 3:01 PM IST

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ASI dies in horrific road accident  horrific road accident in Belagavi  horrific road accident
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವು ಪ್ರಕರಣ, ಪಿಎಸ್ಐ ಸಸ್ಪೆಂಡ್

ಬೆಳಗಾವಿ: ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸಸ್ಪೆಂಡ್ ಮಾಡಿ ಎಸ್ಪಿ ಡಾ.ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಯರಗಟ್ಟಿ ಪಟ್ಟಣದ ನಿವಾಸಿ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಕಾಂತ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದಕ್ಕೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

ಏನಿದು ಪ್ರಕರಣ: ಕರ್ತವ್ಯ ಮುಗಿಸಿ ಯರಗಟ್ಟಿಯಲ್ಲಿರುವ ಮನೆಗೆ ಬರುವಾಗ ರಸ್ತೆ ಅಪಘಾತವಾಗಿತ್ತು. ತಡರಾತ್ರಿ ಯರಗಟ್ಟಿಯ ಕೃಷ್ಣಾ ಬಡಾವಣೆ ಬಳಿ ಅತಿವೇಗದಿಂದ ಬೈಕ್ ಚಲಾಯಿಸುವಾಗ ಸಡನ್​ ಆಗಿ ಹಂಪ್ ಬಂದಿದೆ. ಈ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಆದರೆ, ಕಳೆದೊಂದು ತಿಂಗಳ ಹಿಂದಷ್ಟೇ ಎಲ್ಲ ಪೊಲೀಸರು ಹೆಲ್ಮೆಟ್ ಧರಿಸುವುದನ್ನು ಬೆಳಗಾವಿ ಎಸ್ಪಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದರು.

ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ಆರೋಪದ ಮೇರೆಗೆ ದೊಡವಾಡ ಠಾಣೆ ‌ಪಿಎಸ್ಐ ನಂದೀಶ ಅಮಾನತು ಮಾಡಿ ‌ಎಸ್‌ಪಿ ಡಾ.‌ ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ.

ಓದಿ: ಸೀಟ್ ಬೆಲ್ಟ್ ಧರಿಸದೇ 16,715 ಜನರು ಸಾವು! ರಾಷ್ಟ್ರೀಯ ಹೆದ್ದಾರಿಗಳ ರಕ್ತಸಿಕ್ತ ಚರಿತ್ರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.