ಹಾಸನ: ಬಿಜೆಪಿ ಮತ್ತು ಆರ್ಎಸ್ಎಸ್ ಮುಖಂಡ ಐನೆಟ್ ವಿಜಯ್ ಕುಮಾರ್ ಮತ್ತು ಅವರ ಅಂಗಡಿ ಮೇಲೆ 50 ಜನರ ತಂಡವೊಂದು ಏಕಾಏಕಿ ದಾಳಿ ಮಾಡಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ವಿಜಯ್ ಕುಮಾರ್ ಮತ್ತು ಅವರ ಸ್ನೇಹಿತರ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಅಂಗಡಿಯ ಗಾಜು ಮತ್ತು ಕಂಪ್ಯೂಟರ್ಗಳನ್ನು ಒಡೆದು ಹಾಕಿ ಪರಾರಿಯಾಗಿದ್ದಾರೆ.
ಎಂದಿನಂತೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ್ ಕುಮಾರ್ ಮೇಲೆ ಹಲ್ಲೆ ಮಾಡಿ, ಪೀಠೋಪಕರಣಗಳಿಗೆ ಹಾನಿ ಮಾಡಿದ್ದಾರೆ. ಹಲ್ಲೆ ತಡೆಯಲು ಮುಂದಾದ ವಿಜಯ್ ಕುಮಾರ್ ಸ್ನೇಹಿತರ ಮೇಲೂ ದಾಳಿ ಮಾಡಿದ್ದಾರೆ. ನಂತರ ಸ್ಥಳೀಯರು ಒಟ್ಟಾಗಿ ಹಿಡಿಯಲು ಮುಂದಾದಾಗ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿಜಯ್ ಕುಮಾರ್ ಮತ್ತು ಸ್ನೇಹಿತರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ಮೂರು ಪೊಲೀಸ್ ತಂಡ ರಚಿಸಲಾಗಿದೆ.
"ಅಂಗಡಿಯಲ್ಲಿ ಕುಳಿತಿದ್ದಾಗ ಏಕಾಏಕಿ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಪೀಠೋಪಕರಣಗಳಿಗೂ ಹಾನಿ ಮಾಡಿದ್ದಾರೆ. ಹಲ್ಲೆ ಮಾಡಿದವರ ಮುಖ ಪರಿಚಯವಿದೆ. ಆದರೆ ಹೆಸರು ಗೊತ್ತಿಲ್ಲ" ಎಂದು ವಿಜಯ್ ಕುಮಾರ್ ತಿಳಿಸಿದರು.
ಇದನ್ನೂ ಓದಿ: ಶಿವಮೊಗ್ಗ ಲೋಕಸಭೆಗೆ ಈಶ್ವರಪ್ಪ ನಾಮಪತ್ರ ಸಲ್ಲಿಕೆ: ಎದುರಾಳಿಗಳಿಗೆ ತಿರುಗೇಟು - Eshwarappa Nomination
ಈ ಕುರಿತು ಶಾಸಕ ಹೆಚ್.ಪಿ.ಸ್ವರೂಪ್ ಮಾತನಾಡಿ, "ಜೆಡಿಎಸ್ ಪಕ್ಷದ ಕಾರ್ಯಕರ್ತರ ಜತೆ ಆಸ್ಪತ್ರೆಗೆ ಬಂದು ವಿಜಯ್ ಕುಮಾರ್ ಆರೋಗ್ಯ ವಿಚಾರಿಸಿದ್ದೇನೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ವಿಜಯ್ ಕುಮಾರ್ ಅವರಿಂದ ಸದ್ಯ ಪೊಲೀಸರು ಹೇಳಿಕೆ ಪಡೆದುಕೊಳ್ಳುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ" ಎಂದು ತಿಳಿಸಿದರು.
ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಕೊನೆಗೂ ಕೋಲ್ಕತ್ತಾದಲ್ಲಿ ಇಬ್ಬರು ಮಾಸ್ಟರ್ ಮೈಂಡ್ಗಳ ಬಂಧನ - Rameshwaram Cafe blast