ETV Bharat / state

ವೃದ್ಧ ದಂಪತಿ ಮೇಲೆ ಹಲ್ಲೆ ವಿಡಿಯೋ ವೈರಲ್: ಪಾದ್ರಿ ಹುದ್ದೆಯಿಂದ ತೆರವು - ವೃದ್ಧ ದಂಪತಿ ಮೇಲೆ ಹಲ್ಲೆ

ವೃದ್ಧ ದಂಪತಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ.

Etv Bharat
Etv Bharat
author img

By ETV Bharat Karnataka Team

Published : Mar 2, 2024, 10:03 PM IST

Updated : Mar 2, 2024, 10:25 PM IST

ಬಂಟ್ವಾಳ (ದಕ್ಷಿಣ ಕನ್ನಡ): ಪರಿಯಾಲ್ತಡ್ಕದ ವೃದ್ಧ ದಂಪತಿಗಳ ಮೇಲೆ ಪಾದ್ರಿಯೊಬ್ಬರು ಹಲ್ಲೆ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಯಾಲ್ತಡ್ಕದ ಕ್ರೈಸ್ಟ್ ಕಿಂಗ್ ಪ್ಯಾರಿಷ್ ನ ಪಾದ್ರಿ ಹಾಗೂ ವೃದ್ಧ ದಂಪತಿ ಮಧ್ಯೆ ಫೆ.29ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ.

ಮನೆಯ ಹೊರಗೆ ವೃದ್ಧ ದಂಪತಿ ಜೊತೆ ವಾಗ್ವಾದ ನಡೆಸಿದ ಬಳಿಕ ಹಲ್ಲೆ ನಡೆಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪರಿಯಲ್ತಡ್ಕದ ಮನೇಲ ಎಂಬಲ್ಲಿ ಕ್ರೈಸ್ಟ್ ದಿ ಕಿಂಗ್ ಪ್ಯಾರಿಶ್ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಮಂಗಳೂರು ಕೆಥೊಲಿಕ್ ಧರ್ಮಪ್ರಾಂತ್ಯ ವಿಷಾದ ವ್ಯಕ್ತಪಡಿಸಿದ್ದು, ಇದರಿಂದ ನೋವಾದವರಿಗೆ ಕ್ಷಮೆಯನ್ನು ಯಾಚಿಸಿದೆ. ಇದು ಕಾನೂನು ವ್ಯಾಪ್ತಿಗೆ ಬರುವ ಕಾರಣ, ಧರ್ಮಪ್ರಾಂತ್ಯ ಕಾನೂನಿಗೆ ತಲೆಬಾಗಿ ಎಲ್ಲ ಪ್ರಕ್ರಿಯೆಗಳಿಗೂ ಸಹಕಾರ ನೀಡಲಿದೆ. ಸತ್ಯಾಸತ್ಯತೆ ಕಂಡುಹಿಡಿಯಲು ಆಂತರಿಕ ವಿಚಾರಣೆಯನ್ನೂ ನಡೆಸುತ್ತೇವೆ. ತತಕ್ಷಣದ ಕ್ರಮವಾಗಿ ಸಂಬಂಧಪಟ್ಟ ಪಾದ್ರಿಯನ್ನು ತೆಗೆದುಹಾಕಲಾಗುವುದು ಮತ್ತು ಬೇರೆಯವರನ್ನು ನಿಯೋಜಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಎಸ್​​​ಪಿ ಹೇಳಿಕೆ: ಘಟನೆ ಕುರಿತು ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಪ್ರಕಟಣೆ ಹೊರಡಿಸಿದ್ದು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪರಿಯಾಲ್ತಡ್ಕ ಎಂಬಲ್ಲಿ ಧಾರ್ಮಿಕ ವ್ಯಕ್ತಿಯೊಬ್ಬರು ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ವಿಡಿಯೋದಲ್ಲಿ ಹಲ್ಲೆ ನಡೆಸುತ್ತಿರುವ ವ್ಯಕ್ತಿ ಹಾಗೂ ಹಲ್ಲೆಗೊಳಗಾದವರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಬಗ್ಗೆ ಈಗಾಗಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ ಪ್ರಕರಣ, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ

Last Updated : Mar 2, 2024, 10:25 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.