ETV Bharat / state

ವೈಯಕ್ತಿಕ ಟೀಕೆ; ಸಚಿವ ದಿನೇಶ್ ಗುಂಡೂರಾವ್ - ಡಾ. ಸಿ.ಎನ್. ಅಶ್ವತ್ಥನಾರಾಯಣ ನಡುವೆ ಜಟಾಪಟಿ - Assembly Session

ವಾಲ್ಮೀಕಿ ನಿಗಮದ ಹಗರಣ ಪ್ರಕರಣದ ಕುರಿತು ಸದನದಲ್ಲಿ ಚರ್ಚೆ ವೇಳೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ವಿಧಾನಸಭೆ ಕಲಾಪ
ವಿಧಾನಸಭೆ ಕಲಾಪ (ETV Bharat)
author img

By ETV Bharat Karnataka Team

Published : Jul 18, 2024, 5:39 PM IST

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ವಾದ, ವಿವಾದ ನಡೆದಿದೆ. ಸಚಿವ ದಿನೇಶ್ ಗುಂಡೂರಾವ್ ಅವರು, 'ನೀವು ಯಾವ ಡಾಕ್ಟರ್, ಇಷ್ಟು ಜೋರಾಗಿ ಕೂಗುತ್ತಿರಿ' ಎಂದು ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರನ್ನು ಕೆಣಕಿದರು. ಇದು ಮಾತಿನ ವಾಗ್ವಾದಕ್ಕೆ ಕಾರಣವಾದ ಪ್ರಸಂಗ ವಿಧಾನಸಭೆಯಲ್ಲಿ ಇಂದು ನಡೆಯಿತು.

ನೀವು ಯಾವ ಡಾಕ್ಟರ್ ಎಂದು ದಿನೇಶ್ ಗುಂಡೂರಾವ್ ಹೇಳಿದ ಪದಕ್ಕೆ ಸಿಟ್ಟಿಗೆದ್ದ ಅಶ್ವತ್ಥನಾರಾಯಣ ಅವರು, ನಿಮ್ಮ ಹಿನ್ನೆಲೆ ನೋಡಿಕೊಳ್ಳಿ, ವೈಯಕ್ತಿಕವಾಗಿ ಮಾತನಾಡಬಾರದು. ಮೊದಲು ನಿಮ್ಮ ಇಲಾಖೆ ಸರಿಪಡಿಸಿಕೊಳ್ಳಿ, ಆರೋಗ್ಯ ಇಲಾಖೆಯನ್ನು ಸರಿಯಾಗಿ ನಿಭಾಯಿಸಿ, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಿಂದ ಜನ ತತ್ತರಿಸುತ್ತಿದ್ದಾರೆ. ನನಗೂ ವೈಯಕ್ತಿಕವಾಗಿ ಮತನಾಡಲು ಬರುತ್ತದೆ ಎಂದು ಏರು ಧ್ವನಿಯಲ್ಲಿ ಹೇಳಿದರು. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಯಿತು.

ಕಾವೇರಿದ ವಾತಾವರಣ: ಆಡಳಿತ, ಪ್ರತಿಪಕ್ಷಗಳ ನಡುವೆ ಹಗರಣಗಳ ಸದ್ದು ಜೋರಾಗಿ ನಡೆದು ಇಡೀ ಸದನದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ಸಾರ್ವಜನಿಕ ಮಹತ್ವದ ವಿಷಯ ನಿಯಮ-69ರಡಿ ಇಂದು ಪ್ರತಿಪಕ್ಷದ ನಾಯಕ ಅಶೋಕ್ ಅವರು ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟರ ಹಣ ಲೂಟಿ ಮಾಡಲಾಗಿದೆ ಎಂದು ಸಿಎಂ ವಿರುದ್ಧ ನೇರ ವಾಗ್ದಾಳಿ ನಡೆಸಿದಾಗ ಆಡಳಿತ ಪಕ್ಷದ ಸಚಿವರು, ಶಾಸಕರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಆಡಳಿತದಲ್ಲಿ ನೀವು ಎಷ್ಟು ಹಗರಣ ಮಾಡಿದ್ದೀರಿ ಎಂದು ತಿರುಗೇಟು ನೀಡಿದರು.

ಪ್ರತಿಪಕ್ಷದ ಶಾಸಕರಾದ ಬಸವರಾಜ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ಇತರರು ಚರ್ಚೆಯಲ್ಲಿ ಭಾಗಿಯಾಗಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕುಂಠಿತವಾಗಿದೆ ಎಂದು ಟೀಕಿಸಿದರು. ಇದಕ್ಕೆ ಪ್ರತಿಯಾಗಿ ಸಚಿವರಾದ ಪ್ರಿಯಾಂಕ್ ಖರ್ಗೆ, ಹೆಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್, ಶಾಸಕ ನರೇಂದ್ರ ಸ್ವಾಮಿ, ಪ್ರಕಾಶ್ ಕೋಳಿವಾಡ ಸೇರಿದಂತೆ ಹಲವರು ಪ್ರತಿಪಕ್ಷದ ಶಾಸಕರ ಟೀಕೆಗೆ ಅಡ್ಡಿ ಉಂಟುಮಾಡಿ ತಿರುಗೇಟು ನೀಡಿದರು.

ಈಶ್ವರ್​ ಖಂಡ್ರೆ, ಬೆಲ್ಲದ್​ ಮಧ್ಯೆ ಮಾತಿನ ಚಕಮಕಿ: ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಕುರಿತು ಮಾತನಾಡುತ್ತಿದ್ದ ವೇಳೆ ಸಚಿವ ಈಶ್ವರ್ ಖಂಡ್ರೆ ಹಾಗೂ ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅವರ ನಡುವೆ ಮಾತಿನ ಚಕಮಕಿ ನಡೆಯಿತು.

ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವನ್ನಾಗಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಕುರಿತು ಚರ್ಚೆ ನಡೆಯುವ ಹಂತದಲ್ಲಿ ಅರವಿಂದ್ ಬೆಲ್ಲದ್ ಅವರ ಮಾತುಗಳಿಗೆ ಸಚಿವ ಈಶ್ವರ್ ಖಂಡ್ರೆ ಪದೇಪದೇ ಅಡ್ಡಿಪಡಿಸಿ, ಏರಿದ ಧ್ವನಿಯಲ್ಲಿ ವಾಗ್ದಾಳಿ ನಡೆಸುತ್ತಿದ್ದರು.

ಈ ಸಂದರ್ಭದಲ್ಲಿ ತಿರುಗೇಟು ನೀಡಿದ ಬೆಲ್ಲದ್, ಈಶ್ವರ್ ಖಂಡ್ರೆ ಅವರು ಲಿಂಗಾಯಿತ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಮ್ಮ ಬಿಜೆಪಿ ಸರ್ಕಾರ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ 100 ಕೋಟಿ ರೂಪಾಯಿ ನೀಡಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಅದನ್ನು 25 ಕೋಟಿ ರೂಪಾಯಿಗಳಿಗೆ ಕಡಿತ ಮಾಡಿದೆ. ಸಚಿವರು ಇದೇ ರೀತಿ ಜೋರು ಧ್ವನಿಯಲ್ಲಿ ಸಂಪುಟದಲ್ಲಿ ಮಾತನಾಡಿದರೆ ಅನುದಾನ ಕಡಿತವಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಈಶ್ವರ್ ಖಂಡ್ರೆ, ನಿಮ್ಮ ಸರ್ಕಾರ ಕೇವಲ ಘೋಷಣೆ ಮಾಡಿತ್ತು. ಆದರೆ ಒಂದು ರೂಪಾಯಿ ಕೂಡ ಖರ್ಚು ಮಾಡಿರಲಿಲ್ಲ. ಸಮುದಾಯದ ವಿಚಾರವಾಗಿ ಮಾತನಾಡುವ ನೈತಿಕತೆ ನಿಮಗೆ ಇಲ್ಲ ಎಂದು ಟೀಕಿಸಿದರು. ಚರ್ಚೆಯ ನಡುವೆ ಈಶ್ವರ್ ಖಂಡ್ರೆ ಅವರು ಈ ಮೊದಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಬೋರ್ವೆಲ್ ಕೊರಿಸುವ ಯೋಜನೆಯಲ್ಲಿ 441 ಕೋಟಿ ರೂಪಾಯಿ ಹಗರಣವಾಗಿದೆ. ಇದರಿಂದ ಮಂಜುರಾಗಿದ್ದ 15000 ಬೋರ್ವೆಲ್​ಗಳಲ್ಲಿ ಒಂದು ಫಲಾನುಭವಿಗಳಿಗೆ ತಲುಪಲಿಲ್ಲ. ಬಿಜೆಪಿಯವರು ಈಗ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಸದಸ್ಯ ಅರಗ ಜ್ಞಾನೇಂದ್ರ, ಸಚಿವರು ಗುರುತರ ಆರೋಪ ಮಾಡುತ್ತಿದ್ದಾರೆ. ತನಿಖೆ ಮಾಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು. ಸಚಿವರೆ ಆರೋಪ ಮಾಡುವುದು ಜವಾಬ್ದಾರಿಯ ಲಕ್ಷಣವಲ್ಲ ಎಂದು ಹೇಳಿದರು. ನಮ್ಮ ಸರ್ಕಾರ ಯಾರನ್ನು ರಕ್ಷಿಸುವುದಿಲ್ಲ ಎಲ್ಲವನ್ನು ತನಿಖೆ ಮಾಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಖಂಡ್ರೆ ಸವಾಲು ಹಾಕಿದರು.

ಎಲೆಕ್ಟ್ರೋಲ್ ಬಾಂಡ್ ಹಗರಣದ ಬಗ್ಗೆ ಬಿಜೆಪಿ ಅವರು ಮಾತನಾಡುತ್ತಿಲ್ಲ ಎಂದು ಖಂಡ್ರೆ ಆರೋಪಿಸಿದಾಗ ಬಸನಗೌಡ ಪಾಟೀಲ್ ಯತ್ನಾಳ್ ಅದನ್ನು ನೀವೇ ತನಿಖೆ ಮಾಡಿಸಿ ಎಂದು ಸವಾಲು ಹಾಕಿದರು. ಅದಲ್ಲದೆ, ಹಿಂದೆ ಕೋವಿಡ್​ನಲ್ಲಿ ನಡೆದ ಹಗರಣ, ತಾಂಡಾ, ಭೋವಿ, ವಾಲ್ಮೀಕಿ ನಿಗಮಗಳಲ್ಲಿ ನಡೆದ ಹಗರಣಗಳನ್ನು ತನಿಖೆ ಮಾಡಿಸಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ ನಡೆದಿರುವ ಅದಲು ಬದಲಿನ ಬಗ್ಗೆಯೂ ತನಿಖೆ ನಡೆಯಲಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕನ್ನಡಿಗರಿಗೆ ಮೀಸಲು ವಿಧೇಯಕದ ಬಗ್ಗೆ ಗೊಂದಲ ಇತ್ತು, ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ - Reservation for Kannadigas in job

ETV Bharat Logo

Copyright © 2024 Ushodaya Enterprises Pvt. Ltd., All Rights Reserved.