ETV Bharat / state

₹150 ಕೋಟಿ ಆಮಿಷ ಆರೋಪ: ಸಿಬಿಐಗೆ ವಹಿಸಲು ವಿಜಯೇಂದ್ರ ಸವಾಲು: ಕಾಂಗ್ರೆಸ್ - ಬಿಜೆಪಿ ವಾಕ್ಸಮರ - ASSEMBLY SESSION

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರಿಂದ 150 ಕೋಟಿ ರೂ. ಆಮಿಷ ಆರೋಪ ವಿಚಾರವು ಕಾಂಗ್ರೆಸ್ - ಬಿಜೆಪಿ ಸದಸ್ಯರ ನಡುವೆ ಮಾತಿನ ವಾಕ್ಸಮರಕ್ಕೆ ಕಾರಣವಾಯಿತು.

session
ಸದನದಲ್ಲಿ ಕೃಷ್ಣಬೈರೇಗೌಡ, ಬಿ.ವೈ.ವಿಜಯೇಂದ್ರ (ETV Bharat)
author img

By ETV Bharat Karnataka Team

Published : Dec 16, 2024, 2:19 PM IST

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮೇಲೆ ಮಾಡಿದ್ದ 150 ಕೋಟಿ ರೂ. ಆಮಿಷ ಆರೋಪ ವಿಧಾನಸಭೆಯಲ್ಲಿ ಇಂದು ಪ್ರಸ್ತಾಪವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ವಾಕ್ಸಮರಕ್ಕೆ ಕಾರಣವಾಯಿತು.

ಕಲಾಪ ಆರಂಭವಾಗುತ್ತಿದ್ಧಂತೆಯೇ ಸ್ಪೀಕರ್ ಯು.ಟಿ.ಖಾದರ್ ಅವರು, ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಅವಕಾಶ ಕೊಟ್ಟರು. ಈ ಸಂದರ್ಭದಲ್ಲಿ ಎದ್ದು ನಿಂತ ಪ್ರತಿಪಕ್ಷದ ನಾಯಕ ಆರ್​​.ಅಶೋಕ್ ಅವರು, ವಕ್ಫ್ ವಿಚಾರವನ್ನು ಪ್ರಸ್ತಾಪಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಮ್ಮ ಶಾಸಕ ಬಿ.ವೈ.ವಿಜಯೇಂದ್ರ ವಿರುದ್ಧ ಮೊನ್ನೆ ಸದನದಲ್ಲಿ ಆರೋಪ ಮಾಡಿದ್ದಾರೆ. ಆದರೆ, ಅವರು ಮಾತನಾಡುವುದಕ್ಕೆ ಮೊದಲೇ ನೋಟಿಸ್ ಕೊಡಬೇಕಿತ್ತು ಎಂದು ಪ್ರಶ್ನೆ ಮಾಡಿದರು.

₹150 ಕೋಟಿ ಆಮಿಷ ಆರೋಪ: ಸಿಬಿಐಗೆ ವಹಿಸಲು ವಿಜಯೇಂದ್ರ ಸವಾಲು: ಕಾಂಗ್ರೆಸ್ - ಬಿಜೆಪಿ ವಾಕ್ಸಮರ (ETV Bharat)

ಆಗ ಸಚಿವ ಪ್ರಿಯಾಂಕ್ ಖರ್ಗೆ ಎದ್ದು ನಿಂತು, ನಾನು ಆರೋಪ ಮಾಡಿಲ್ಲ, ಅನ್ವರ್​​ ಮಾಣಿಪ್ಪಾಡಿ ಆರೋಪ ಮಾಡಿದ್ದು, ಅದನ್ನೇ ನಾನು ಹೇಳಿದ್ದೇನೆ ಎಂದರು. ಆಗ ಪ್ರಿಯಾಂಕ್ ಖರ್ಗೆ ಆರೋಪದ ಬಗ್ಗೆ ಬಿಜೆಪಿ ನಾಯಕರು ಚರ್ಚೆಗೆ ಅವಕಾಶ ಕೇಳಿದರು. ಆದರೆ, ಚರ್ಚೆಗೆ ಅವಕಾಶ ನೀಡದ ಸ್ಪೀಕರ್ ಯು.ಟಿ.ಖಾದರ್ ಅವರು, ಇದರ ಬಗ್ಗೆ ಸ್ಪಷ್ಟನೆ ನೀಡುವಂತೆ ವಿಜಯೇಂದ್ರ ಅವರಿಗೆ ಸೂಚಿಸಿದರು.

ವಿಜಯೇಂದ್ರ ಸ್ಪಷ್ಟನೆ: ಈ ವೇಳೆ ಬಿ.ವೈ.ವಿಜಯೇಂದ್ರ ಮಾತನಾಡಿ, ''ನನ್ನ ಮೇಲೆ ಸದನದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನನ್ನ ಅನುಪಸ್ಥಿತಿಯಲ್ಲಿ ಗುರುತರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನನ್ನ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ. ಅದಕ್ಕೆ ನನಗೆ ಅವರ ಮೇಲೆ ಆಕ್ರೋಶವಿಲ್ಲ, ಬದಲಿಗೆ ಅನುಕಂಪ ಹುಟ್ಟುತ್ತಿದೆ. ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮನ್ನು ಮತ್ತು ತಮ್ಮ ಕುಟುಂಬವನ್ನು ರಕ್ಷಿಸಲು ಬೇರೆಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ'' ಎಂದು ಕಿಡಿಕಾರಿದರು.

session
ವಿಧಾನಸಭೆ ಕಲಾಪ (ETV Bharat)

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಕೃಷ್ಣಬೈರೇಗೌಡ, ''ಇಲ್ಲಿ ರಾಜಕೀಯ ಭಾಷಣ ಮಾಡಬೇಡಿ'' ಎಂದರು.

ಆಗ ಮುಂದುವರೆಸಿದ ವಿಜಯೇಂದ್ರ, ''ಹಿಂದಿನ ಅಲ್ಪಸಂಖ್ಯಾತರ ಆಯೋಗದ ಹೆಸರು ಹೇಳಿ ನನ್ನ ಮೇಲೆ ಆರೋಪ‌ ಮಾಡಲಾಗಿದೆ. ವಕ್ಫ್ ಆಸ್ತಿ ದುರುಪಯೋಗ ಕುರಿತು ಮಾಣಿಪ್ಪಾಡಿ ವರದಿ ಕೊಟ್ಟಿದ್ದರು. ನಂತರ ಉಪಲೋಕಾಯುಕ್ತ ನ್ಯಾ‌.ಆನಂದ್ ಅವರು ವರದಿ ಕೊಟ್ಟಿದ್ದರು. 2016ರಲ್ಲಿ ವಕ್ಫ್​​ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಉಪಲೋಕಾಯುಕ್ತರ ವರದಿ ಮುಚ್ಚಿ ಹಾಕಿದ್ದರು. ಅಲ್ಪಸಂಖ್ಯಾತರ ಆಯೋಗದ ಹಿಂದಿನ‌ ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದನ್ನು ಸಿದ್ದರಾಮಯ್ಯ ಸಚಿವ ಸಂಪುಟ ತಿರಸ್ಕರಿಸಿತು. ಸಿಎಂ ಸಿದ್ದರಾಮಯ್ಯ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸವಿದೆ'' ಎಂದರು.

''ನಾನು ಸಿಎಂಗೆ ಸವಾಲು ಹಾಕುತ್ತೇನೆ, 150 ಕೋಟಿ ರೂ. ಆಮಿಷ ಕುರಿತ ಆರೋಪವನ್ನು ಸಿಬಿಐಗೆ ವಹಿಸಲಿ, ಮುಡಾ ಪ್ರಕರಣವನ್ನು ಸಿಬಿಐಗೆ ಕೊಡಲಿ, ಜೊತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ವಹಿಸಲಿ'' ಎಂದು ವಿಜಯೇಂದ್ರ ಸವಾಲು ಹಾಕಿದರು.

ಇದನ್ನೂ ಓದಿ: ವಿಜಯೇಂದ್ರ ನನಗೆ ₹150 ಕೋಟಿ ಆಫರ್ ಮಾಡಿರಲಿಲ್ಲ: ಅನ್ವರ್ ಮಾಣಿಪ್ಪಾಡಿ

ಆಗ ಕಾಂಗ್ರೆಸ್ ನಾಯಕರು ಎದ್ದು ನಿಂತು ಆಕ್ಷೇಪ ವ್ಯಕ್ತಪಡಿಸಿದಾಗ, ಸದನದಲ್ಲಿ ಮಾತಿನ ಚಕಮಕಿ, ಗದ್ದಲ ಉಂಟಾಯಿತು. ''ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಸಿಎಂ ಹಿಟ್ ಅಂಡ್ ರನ್ ಮಾಡುವುದು ಬೇಡ'' ಎಂದು ವಿಜಯೇಂದ್ರ ಕಿಡಿಕಾರಿದರು.

session
ವಿಧಾನಸಭೆ ಕಲಾಪ (ETV Bharat)

ಈ ಮಧ್ಯೆ ಮಾತನಾಡಲು ಸಚಿವ ಪ್ರಿಯಾಂಕ್ ಖರ್ಗೆ ಎದ್ದಾಗ ಸ್ಪೀಕರ್ ಅವಕಾಶ ನೀಡಲಿಲ್ಲ. ವಿಜಯೇಂದ್ರ ಅವರಿಂದ ಸ್ಪಷ್ಟನೆ ಬಂದಿದೆ. ಉತ್ತರ ಕರ್ನಾಟಕ ಭಾಗದ ಬಗ್ಗೆ ಚರ್ಚೆ ಮಾಡಿ ಎಂದು ಸೂಚಿಸಿದರು. ನಂತರ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆ ಆರಂಭವಾಯಿತು.

ಇದನ್ನೂ ಓದಿ: ಮಾಣಿಪ್ಪಾಡಿ ಮಾತನಾಡಿರುವುದು ವಿಡಿಯೋ ರೆಕಾರ್ಡ್​​ನಲ್ಲಿ ಇದೆ: ಸಿದ್ದರಾಮಯ್ಯ

ವಕ್ಫ್ ವಿಚಾರ ಮಾತನಾಡದಂತೆ ಬಿ.ವೈ.ವಿಜಯೇಂದ್ರ ಅವರು ನನ್ನ ಮೇಲೆ ಒತ್ತಡ ಹೇರಿದ್ದರು. ಅಲ್ಲದೆ, 150 ಕೋಟಿ ರೂ. ಲಂಚದ ಆಮಿಷವೊಡ್ಡಿದ್ದರು ಎಂದು ಸ್ವತಃ ಬಿಜೆಪಿ ಮುಖಂಡ ಅನ್ವರ್‌ ಮಾಣಿಪ್ಪಾಡಿ ಆರೋಪಿಸಿದ್ದಾರೆ. ವಿಜಯೇಂದ್ರ ಅವರು ಈ ಸಂಬಂಧ ಸ್ಪಷ್ಟೀಕರಣ ನೀಡಲಿ. ಅದನ್ನು ಬಿಟ್ಟು ರಾಜಕೀಯ ಭಾಷಣ ಮಾಡುತ್ತಾ ಸದನದ ಸಮಯ ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನಸಭೆಯಲ್ಲಿ ಇಂದು ಕಲಾಪ ಆರಂಭವಾಗುತ್ತಿದ್ದಂತೆ, ವಕ್ಫ್‌ ಹಗರಣಕ್ಕೆ ಸಂಬಂಧಿಸಿ ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟೀಕರಣ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಮಯ ಕೋರಿದ್ದರು. ಆದರೆ, ತಮಗೆ ನೀಡಿದ ಸಮಯದಲ್ಲಿ ಅವರು ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡುವುದರ ಬದಲು ಆಡಳಿತ ಪಕ್ಷದ ವಿರುದ್ಧ ಟೀಕಾಪ್ರಹಾರ ಆರಂಭಿಸಿದ್ದರು.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಕೃಷ್ಣ ಬೈರೇಗೌಡ, "ವಿಜಯೇಂದ್ರ ಅವರೇ…ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮೀಸಲಿಟ್ಟಿದ್ದ ಸಮಯಾವಕಾಶವನ್ನು ತಮಗೆ ನೀಡಲಾಗಿದೆ. ಹೀಗಾಗಿ ವಕ್ಫ್‌ ವಿಚಾರದಲ್ಲಿ ತಮ್ಮ ಮೇಲಿನ ಆರೋಪದ ಬಗ್ಗೆ ಸ್ಪಷ್ಟೀಕರಣವನ್ನಷ್ಟೇ ನೀಡಿ. ಅದನ್ನು ಬಿಟ್ಟು ರಾಜಕೀಯ ಭಾಷಣ ಮಾಡುತ್ತಾ ಸದನದ ಸಮಯ ಹಾಳು ಮಾಡಬೇಡಿ. ಒಂದು ವೇಳೆ ರಾಜಕೀಯ ಭಾಷಣ ಮಾಡಿಯೇ ಸಿದ್ಧ ಎಂಬುದಾದರೆ ನಮಗೂ ಸದನದಲ್ಲಿ ರಾಜಕೀಯ ಭಾಷಣ ಮಾಡಲು ಅವಕಾಶ ನೀಡಿ" ಎಂದು ಸಭಾಧ್ಯಕ್ಷರಲ್ಲಿ ತಮ್ಮ ತಕರಾರನ್ನು ದಾಖಲಿಸಿದರು.

session
ವಿಧಾನಸಭೆ ಕಲಾಪ (ETV Bharat)

"ರಾಜಕೀಯ ಭಾಷಣ ಮಾಡುವುದಾದರೆ ನಾವೂ ಸಿದ್ದ. ಈ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಕಾಂಗ್ರೆಸ್‌ ನಾಯಕರ ಮನೆಗಳ ಮೇಲೆ ಮಾತ್ರ ದಾಳಿ ಮಾಡುತ್ತವೆ, ವಿಚಾರಣೆ ನಡೆಸುತ್ತವೆ. ಆದರೆ, ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ, ಸ್ವತಃ ಬಿಜೆಪಿ ನಾಯಕ ಅನ್ವರ್‌ ಮಾಡಿಪ್ಪಾಡಿ ಅವರು ವಿಜಯೇಂದ್ರ ಅವರ ವಿರುದ್ಧ 150 ಕೋಟಿ ರೂ. ಲಂಚದ ಆರೋಪ ಮಾಡಿದ್ದರು. ಆದರೆ, ಸಿಬಿಐ-ಇಡಿ ಈ ಬಗ್ಗೆ ಯಾಕೆ ತನಿಖೆ ಮಾಡಿಲ್ಲ. ಮೋದಿ ಗೆಳೆಯ ಅದಾನಿ 2500 ಕೋಟಿ ರೂ.ಲಂಚ ನೀಡಿದ್ದರು ಅಂತ ಅಮೆರಿಕ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಈ ಬಗ್ಗೆ ಸಿಬಿಐ-ಇಡಿ ತನಿಖೆ-ವಿಚಾರಣೆ ಏಕಿಲ್ಲ? ಬನ್ನಿ ಈ ಬಗ್ಗೆಯೂ ಚರ್ಚೆ ಮಾಡೋಣ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸವಾಲೆಸೆದರು.

"ಸದನ ಇರುವುದು ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದಕ್ಕೇ ವಿನಃ ರಾಜಕೀಯ ಭಾಷಣ ಮಾಡುತ್ತಾ ಕಲಾಪದ ಸಮಯವನ್ನು ಹಾಳು ಮಾಡುವುದಕ್ಕಲ್ಲ. ಶೀಘ್ರದಲ್ಲೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ, ಕಳಸ ಬಂಡೂರಿ, ಕೃಷ್ಣ ತುಂಗಭದ್ರಾ ಸೇರಿದಂತೆ ಇಲ್ಲಿನ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಬೇಕಿದೆ. ಹೀಗಾಗಿ ದಯವಿಟ್ಟು ಮೊದಲು ನಿಮ್ಮ ಸ್ಪಷ್ಟೀಕರಣ ನೀಡಿ" ಎಂದು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.