ETV Bharat / state

ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ: ಪಟ್ಟದ ಹಸು, ಆನೆ, ಕುದುರೆ, ಒಂಟೆಗಳಿಗೂ ಪೂಜೆ

ಅರಮನೆಯಲ್ಲಿ ರಾಜವಂಶಸ್ಥರ ಆಯುಧ ಪೂಜೆಯನ್ನು ಯದುವೀರ್‌ ಕೃಷ್ಣದತ್ತ ಚಾಮರಾಜ್‌ ಒಡೆಯರ್‌ ಅವರು ಆರಂಭಿಸಿದ್ದಾರೆ.

ಮೈಸೂರು ಅರಮನೆ
ಮೈಸೂರು ಅರಮನೆ (ETV Bharat)
author img

By ETV Bharat Karnataka Team

Published : Oct 11, 2024, 1:04 PM IST

ಮೈಸೂರು: ಅರಮನೆಯಲ್ಲಿ ರಾಜವಂಶಸ್ಥರ ಆಯುಧ ಪೂಜಾ ಕೈಕಂರ್ಯಗಳು ಆರಂಭವಾಗಿವೆ. ಅರಮನೆಯ ಪೂರ್ವಜರು ಬಳಸುತ್ತಿದ್ದ ಆಯುಧಗಳನ್ನು ಸ್ವಚ್ಛಗೊಳಿಸಿ, ಅವುಗಳನ್ನು ಮಂಗಳವಾದ್ಯದೊಂದಿಗೆ ಅರಮನೆಗೆ ತೆಗೆದುಕೊಂಡು ಹೋಗಲಾಯಿತು.

ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ (ETV Bharat)

ಬೆಳಗ್ಗೆಯಿಂದಲೇ ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ, ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿದ್ದು, ಪುರಾತನ ರಾಜವಂಶಸ್ಥರು ಬಳಸುತ್ತಿದ್ದ ಆಯುಧಗಳನ್ನು ಕೋಡಿ ಸೋಮೇಶ್ವರ ದೇವಾಲಯದ ಬಳಿ ತೆಗೆದುಕೊಂಡು ಹೋಗಿ ಸ್ವಚ್ಚಗೊಳಿಸಲಾಯಿತು. ಬಳಿಕ ರಾಜಪರಂಪರೆಯಂತೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಇಟ್ಟು ಪಟ್ಟದ ಆನೆ, ಪಟ್ಟದ ಹಸು ಜತೆಗೆ ಮಂಗಳವಾದ್ಯಗಳ ಮೂಲಕ ಆಯುಧಗಳನ್ನು ಕಲ್ಯಾಣ ಮಂಟಪಕ್ಕೆ ತೆಗೆದುಕೊಂಡು ಹೋಗಿ ಇಡಲಾಯಿತು.

9:05ಕ್ಕೆ ಚಂಡಿಕಾ ಹೋಮ, ಪೂರ್ಣಾಹುತಿಯಾಗಿದೆ. ಮಧ್ಯಾಹ್ನ 12.20 ಕ್ಕೆ ಕಲ್ಯಾಣ ಮಂಟಪದಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ್‌ ಒಡೆಯರ್‌ ಅವರಿಂದ ಆಯುಧ ಪೂಜೆ ಆರಂಭವಾಗಿದ್ದು, 12.45ಕ್ಕೆ ಪೂರ್ಣಗೊಳ್ಳಲಿದೆ. ಆ ನಂತರ ಆನೆ ಬಾಗಿಲಿನ ಒಳಗೆ ಪಟ್ಟದ ಹಸು, ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಒಂಟೆ, ಪಲ್ಲಕ್ಕಿ ಹಾಗೂ ರಾಜರ ಕಾರುಗಳಿಗೆ ಪೂಜೆ ಸಲ್ಲಿಸಲಾಗುತ್ತೆ.

ಇದನ್ನೂ ಓದಿ: ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ಹೇಗೆ ನಡೆಯುತ್ತದೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.