ETV Bharat / state

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಬಿ.ಎಸ್.ಯಡಿಯೂರಪ್ಪ - B S Yediyurappa

ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣ ಸಂಬಂಧ ಮಾಜಿ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲೋಕಾಯುಕ್ತ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

B S Yeddyurappa
ಬಿ.ಎಸ್.ಯಡಿಯೂರಪ್ಪ (IANS)
author img

By ETV Bharat Karnataka Team

Published : Sep 21, 2024, 6:01 PM IST

ಬೆಂಗಳೂರು: ಮಠದಹಳ್ಳಿಯ ಗಂಗೇನಹಳ್ಳಿ ಬಡಾವಣೆಯಲ್ಲಿನ ಜಮೀನನ್ನ ಅಕ್ರಮವಾಗಿ ಡಿನೋಟಿಫಿಕೇಷನ್ ಆರೋಪ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರ ನೋಟಿಸ್ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ವಿಚಾರಣೆಗೆ ಹಾಜರಾದರು.

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರ ಚುರುಕುಗೊಂಡಿದೆ.

''ಇಂದು ಮಧ್ಯಾಹ್ನ ತನಿಖಾಧಿಕಾರಿಗಳ ಮುಂದೆ ಹಾಜರಾದ ಬಿಎಸ್​​ವೈ, ಸುಮಾರು 1 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ತನಿಖೆಗೆ ಅಗತ್ಯವಾದರೆ ಮತ್ತೆ ಕರೆದು ವಿಚಾರಣೆ ಕರೆಯಲಾಗುವುದು. ಅಲ್ಲದೆ, ಅಕ್ರಮ ಡಿನೋಟಿಫಿಕೇಷನ್​ಗೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಎಲ್ಲರಿಗೂ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುವುದು'' ಎಂದು ಹಿರಿಯ ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ಸಚಿವರು ಹೇಳಿದ್ದೇನು?: ಗಂಗೇನಹಳ್ಳಿಯ ಬಡಾವಣೆಯ 7/1ಬಿ, ಸಿ ಹಾಗೂ ಡಿ ಸರ್ವೆ ನಂಬರ್ ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧಿನಗೊಂಡಿದ್ದು, ಇದನ್ನು ಡಿನೋಟಿಫೈ ಮಾಡಿರುವ ಸಂಬಂಧ ಕಳೆದ 9 ವರ್ಷಗಳ ಹಿಂದೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವಿಳಂಬ ತನಿಖೆಗೆ ಸಚಿವ ಕೃಷ್ಣಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಮಠದಹಳ್ಳಿ ಗಂಗೇನಹಳ್ಳಿ ಬಡಾವಣೆ 7/1ಬಿ, ಸಿ ಹಾಗೂ ಡಿ ಸರ್ವೆ ನಂಬರ್​​ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧಿನಗೊಂಡಿದ್ದು, ಇದನ್ನು ಡಿನೋಟಿಫೈ ಮಾಡಬೇಕೆಂದು ರಾಜಶೇಖರಯ್ಯ ಎಂಬುವರು ಅರ್ಜಿ ಹಾಕಿದ್ದರು. ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಎಂಬುವರು ಅರ್ಜಿ ಕೊಡ್ತಾರೆ. 2007ರಲ್ಲಿ ಅರ್ಜಿ ಬಂದ ಅದೇ ದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಡಿನೋಟಿಫೈ ಮಾಡಲು ಸೂಚಿಸಿದ್ದರು ಎಂದು ಇತ್ತೀಚೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಆರೋಪಿಸಿದ್ದರು.

ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ. 30 ವರ್ಷಗಳ ಹಿಂದೆಯೇ ಈ ಜಮೀನೂ ಭೂಸ್ವಾಧೀನ ಆಗಿತ್ತು. ಯಾವುದು ಭೂ ಸ್ವಾಧೀನ ಆಗಿತ್ತೋ, ಆ ಜಮೀನಿಗೆ ಕುಮಾರಸ್ವಾಮಿ ತಮ್ಮ ಅತ್ತೆಯ ಹೆಸರಿಗೆ ಜಿಪಿಎ ಮಾಡಿಕೊಳ್ಳುತ್ತಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ. ಆದರೂ ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ. ಬಳಿಕ ಸರ್ಕಾರ ಬದಲಾಗಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ. ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ. ಆದರೆ, ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ 2009-10ರಲ್ಲಿ ಭೂಸ್ವಾಧೀನದಿಂದ ಕೈ ಬಿಡುತ್ತಾರೆ ಎಂದು ಕೃಷ್ಣಬೈರೇಗೌಡ ತಿಳಿಸಿದ್ದರು.

ಡಿನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವರಿಗೆ ಶುದ್ಧ ಕ್ರಯಪತ್ರ ಆಗುತ್ತದೆ. ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಅಲ್ಲವೇ?. ಇದು ನೇರವಾಗಿ ಕುಮಾರಸ್ವಾಮಿ ಆದೇಶದಿಂದಲೇ ಆಗಿದೆ. ಕುಮಾರಸ್ವಾಮಿ ಪುಟಫ್ ಮಾಡಿದ ಫೈಲ್​​ಗೆ ಯಡಿಯೂರಪ್ಪ ಸಹಿ ಮಾಡಿದ್ದಾರೆ. ಸಾರ್ವಜನಿಕ ಸ್ವತ್ತನ್ನು ತಂತ್ರಗಾರಿಕೆ ಮಾಡಿ ಲೂಟಿ ಮಾಡಿದ್ದಾರೆ ಎಂದು ದೂರಿದ್ದರು.

ಇದನ್ನೂ ಓದಿ: ಸಿಎಂ ಆಗಿದ್ದಾಗ ಹೆಚ್​ಡಿಕೆ, ಯಡಿಯೂರಪ್ಪರಿಂದ ಅಕ್ರಮ ಡಿನೋಟಿಫಿಕೇಷನ್ ಆಗಿದೆ: ಸಚಿವ ಕೃಷ್ಣಬೈರೇಗೌಡ, ಗುಂಡೂರಾವ್ ಆರೋಪ - ALLEGATION AGAINST HDK AND BSY

ETV Bharat Logo

Copyright © 2024 Ushodaya Enterprises Pvt. Ltd., All Rights Reserved.