ETV Bharat / state

ಈಶ್ವರಪ್ಪನವರ ಮಗನಿಗೆ ಟಿಕೆಟ್​ ತಪ್ಪಲು ನಾನು ಕಾರಣ ಅಲ್ಲ: ಬಿ.ಎಸ್.​ಯಡಿಯೂರಪ್ಪ - B S Yediyurappa

ಈಶ್ವರಪ್ಪನವರು ನಮ್ಮ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ. ಕೇಂದ್ರ ಚುನಾವಣಾ ಸಮಿತಿಯ ತೀರ್ಮಾನದಂತೆ ಟಿಕೆಟ್ ಹಂಚಿಕೆಯಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬಿ.ಎಸ್.​ಯಡಿಯೂರಪ್ಪ
BS Yediyurappa
author img

By ETV Bharat Karnataka Team

Published : Mar 17, 2024, 6:50 AM IST

Updated : Mar 17, 2024, 7:06 AM IST

ಬಿ.ಎಸ್.​ಯಡಿಯೂರಪ್ಪ ಹೇಳಿಕೆ

ಶಿವಮೊಗ್ಗ: ಕೆ.ಎಸ್.ಈಶ್ವರಪ್ಪನವರ ಮಗನಿಗೆ ಟಿಕೆಟ್​ ಕೈ ತಪ್ಪಲು ನಾನು ಕಾರಣವಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ. ಮಾರ್ಚ್​ 18ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಶನಿವಾರ ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ಯಡಿಯೂರಪ್ಪ ಪರಿಶೀಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಸಂದರ್ಭದಲ್ಲಿ, ನಿಮ್ಮ ವಿರುದ್ಧ ಈಶ್ವರಪ್ಪನವರು ಕೋಪಗೊಂಡಿದ್ದಾರಲ್ಲವೇ ಎಂಬ ಪ್ರಶ್ನೆಗೆ, "ಈಶ್ವರಪ್ಪ ಸಿಟ್ಟಲ್ಲಿ ಹಾಗೆ ಮಾತನಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಎಂಬ ವಿಶ್ವಾಸವಿದೆ. ಅವರೂ ಕೂಡ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ" ಎಂದರು.

ಮುಂದುವರೆದು ಮಾತನಾಡಿ, "ಎಲ್ಲವೂ ಸರಿ ಹೋಗುತ್ತದೆ ಎಂದುಕೊಂಡಿದ್ದೇನೆ. ಅವರ ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಅವರೊಂದಿಗೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ. ಅವರನ್ನು ಮತ್ತೆ ಕರೆತರುವ ಪ್ರಯತ್ನವನ್ನು ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ಕೇಂದ್ರ ಚುನಾವಣಾ ಸಮಿತಿಯ ತೀರ್ಮಾನದಂತೆ ಟಿಕೆಟ್ ಹಂಚಿಕೆಯಾಗಿದೆ. ಈಶ್ವರಪ್ಪನವರು ನಮ್ಮ ಬಗ್ಗೆ ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ. ಇದರಲ್ಲಿ ನಮ್ಮ ಪಾತ್ರವಿಲ್ಲ" ಎಂದು ಹೇಳಿದರು.

26 ಸೀಟು ಗೆಲ್ಲುವ ವಿಶ್ವಾಸ- ಬಿಎಸ್​ವೈ: "ಕಲಬುರಗಿಯಲ್ಲಿ ಮೋದಿ ಕಾರ್ಯಕ್ರಮ ಯಶಸ್ವಿಯಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 28 ಅನ್ನೂ ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಎರಡು ಕ್ಷೇತ್ರಗಳು ಆಚೀಚೆ ಆದರೂ ಸಹ 26 ಸೀಟುಗಳನ್ನು ಗೆಲ್ಲುವುದಾಗಿ ತಿಳಿಸಿದ್ದೇನೆ. ಶಿವಮೊಗ್ಗದಲ್ಲಿ ಈಗಾಗಲೇ ಗೆದ್ದಾಗಿದೆ. ಅಂತರ ಎಷ್ಟು ಎಂದು ನೋಡಬೇಕು. ಮೋದಿ ಕಾರ್ಯಕ್ರಮ ಮುಗಿದ ನಂತರ ನನ್ನ ಅವಶ್ಯಕತೆ ಇರುವ ಕಡೆ ಮತ್ತು ಪಕ್ಷದ ಮುಖಂಡರು ಹೇಳುವ ಸ್ಥಳಗಳಿಗೆ ನಾನು ಹೋಗುತ್ತೇನೆ" ಎಂದರು.

ಇದನ್ನೂ ಓದಿ: ಹೆಚ್​ಡಿಕೆ ಮುಖ್ಯಮಂತ್ರಿ ಆಗಲು ನಮ್ಮ ಬಳಿ ಕೈ ಕಟ್ಟಿ ನಿಂತಿದ್ದರು: ಸಚಿವ ಚಲುವರಾಯಸ್ವಾಮಿ

Last Updated : Mar 17, 2024, 7:06 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.