ಬೆಂಗಳೂರು : ಚನ್ನಪಟ್ಟಣದಲ್ಲಿ ಜೆಡಿಸ್ನವರು ಯಾರಿಗೆ ಬೇಕೋ ಅವರಿಗೆ ಟಿಕೆಟ್ ಘೋಷಣೆ ಮಾಡಿಕೊಳ್ತಾರೆ. ಈಗಾಗಲೇ ಅಮಿತ್ ಶಾ ಅವರೂ ಚನ್ನಪಟ್ಟಣದಲ್ಲಿ ಜೆಡಿಎಸ್ನವರು ಘೋಷಣೆ ಮಾಡ್ತಾರೆ ಅಂದಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರಿಗೆ ಯಾರು ಬೇಕೋ ಅವರ ಹೆಸರು ಘೋಷಣೆ ಮಾಡ್ತಾರೆ ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಜೆಪಿಯ ಇಬ್ಬರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇವೆ. ಇನ್ನೊಂದು ಜೆಡಿಎಸ್ನವರು ಅವರಿಗೆ ಯಾರು ಬೇಕೋ ಘೋಷಣೆ ಮಾಡಿಕೊಳ್ಳಬಹುದು ಕೇಂದ್ರ ಗೃಹ ಸಚಿವ ಅಂತಾ ಅಮಿತ್ ಶಾ ಹೇಳಿದ್ದಾರೆ. ಹಾಗಾಗಿ, ಜೆಡಿಎಸ್ನವರು ಅವರಿಗೆ ಯಾರ ಹೆಸರು ಬೇಕೋ ಅವರನ್ನ ಘೋಷಣೆ ಮಾಡುತ್ತಾರೆ. ಬಿಜೆಪಿ-ಜೆಡಿಎಸ್ ಒಟ್ಟಾಗಿ ಮೂರೂ ಕ್ಷೇತ್ರಗಳನ್ನು ಗೆಲ್ಲಲು ಶ್ರಮ ವಹಿಸುತ್ತೇವೆ ಎಂದಿದ್ದಾರೆ.
ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವ ಯೋಚನೆ ಇಲ್ಲ : ಸಿ. ಪಿ ಯೋಗೇಶ್ವರ್ ಸ್ಪರ್ಧೆ ತೀರ್ಮಾನವನ್ನು ದೆಹಲಿಯವರು ತೆಗೆದುಕೊಳ್ಳುತ್ತಾರೆ. ಅದರ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿ ತೀರ್ಮಾನ ಮಾಡಲು ಆಗಲ್ಲ. ಅಂತಿಮವಾಗಿ ದೆಹಲಿಯ ಹೈಕಮಾಂಡ್ ಏನು ಹೇಳುತ್ತದೋ ಅದರಂತೆ ಮಾಡುತ್ತೇವೆ. ಆದರೆ, ಬಿಜೆಪಿಯವರು ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವ ಯಾವುದೇ ಯೋಚನೆ ಇಲ್ಲ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರು ಯಾರನ್ನು ಬೇಕಾದರೂ ನಿಲ್ಲಿಸಲಿ ಅಂತಾ ಈಗಾಗಲೇ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ ಎಂದರು.
ಇದನ್ನೂ ಓದಿ : ಚನ್ನಪಟ್ಟಣ ಅಭ್ಯರ್ಥಿ ಕಗ್ಗಂಟು: ಇಂದು ಜೆಡಿಎಸ್-ಬಿಜೆಪಿ ಮತ್ತೊಂದು ಸುತ್ತಿನ ಸಭೆ, ಅಂತಿಮ ಘೋಷಣೆ