ನವದೆಹಲಿ/ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರು, ಪಕ್ಷದ ಸಂಘಟನಾತ್ಮಕ ಬೆಳವಣಿಗೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತ ಮಾಹಿತಿ ನೀಡಿದ್ದಾರೆ.
ಸಂಘಟನೆಯ ಕುರಿತು ನಿರಂತರ ಮಾರ್ಗದರ್ಶನ ನೀಡುತ್ತಾ ಬಂದಿರುವ ಅವರು, ಕರ್ನಾಟಕದ ಪ್ರಸ್ತುತ ಬೆಳವಣಿಗೆಯಲ್ಲಿ ಪಕ್ಷ ನಿರ್ವಹಿಸುತ್ತಿರುವ ರೀತಿ-ನೀತಿಗಳ ಕುರಿತು ಮೆಚ್ಚುಗೆ ಸೂಚಿಸಿದರು. ಪಕ್ಷ ಬಲವೃದ್ಧಿಗೆ ಪ್ರೇರಣೆ ತುಂಬುವ ಚೈತನ್ಯಶೀಲ ವ್ಯಕ್ತಿತ್ವದ ಅಮಿತ್ ಶಾ ಅವರ ಇಂದಿನ ಭೇಟಿ ನನ್ನಲ್ಲಿ ಅದಮ್ಯ ಉತ್ಸಾಹ ತುಂಬಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.
ನವದೆಹಲಿಯಲ್ಲಿಂದು ಕೇಂದ್ರ ಗೃಹ ಸಚಿವರಾದ ಮಾನ್ಯ @AmitShah ಜೀ ಅವರನ್ನು ಭೇಟಿಯಾಗಿ ಪಕ್ಷದ ಸಂಘಟನಾತ್ಮಕ ಬೆಳವಣಿಗೆಗಳ ಕುರಿತು ಚರ್ಚಿಸಲಾಯಿತು. ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತ ಮಾಹಿತಿ ವಿವರಗಳನ್ನು ನೀಡಲಾಯಿತು.
— Vijayendra Yediyurappa (@BYVijayendra) July 31, 2024
ಸಂಘಟನೆಯ ಕುರಿತು ನಿರಂತರ ಮಾರ್ಗದರ್ಶನ ನೀಡುತ್ತಾ ಬಂದಿರುವ ಅವರು ಕರ್ನಾಟಕದ ಪ್ರಸ್ತುತ ಬೆಳವಣಿಗೆಯಲ್ಲಿ ಪಕ್ಷ… pic.twitter.com/I9rxRUNcda
ಮೈಸೂರು ಪಾದಯಾತ್ರೆಯ ಬಗ್ಗೆ ವರಿಷ್ಠರಿಗೆ ಸಮಗ್ರ ವಿವರ ನೀಡಲು ಬಿ. ವೈ ವಿಜಯೇಂದ್ರ ಅವರು ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿದ್ದು, ಇಂದು ಅವರು ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರನ್ನು ಭೇಟಿ ಮಾಡಿ ಪಾದಯಾತ್ರೆ ಕುರಿತು ಹಾಗೂ ಜೆಡಿಎಸ್ ಬೆಂಬಲದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ.
ಮುಡಾದಲ್ಲಿ ನಡೆದಿರುವ ಹಗರಣದ ವಿರುದ್ಧ ಆ. 3 ರಿಂದ ಬಿಜೆಪಿ ನಡೆಸಲಿರುವ ಮೈಸೂರು ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂಬ ವಿಚಾರದ ಬಗ್ಗೆಯೂ ವರಿಷ್ಠರ ಜೊತೆ ವಿಜಯೇಂದ್ರ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ : ಮತ್ತೆ ಪಾದಯಾತ್ರೆ ರಾಜಕೀಯದ ಸದ್ದು: ಪ್ರಮುಖ ಪಾದಯಾತ್ರೆಗಳ ಹಿಂದಿರುವ ರಾಜಕೀಯ ಲಾಭ - ನಷ್ಟದ ಲೆಕ್ಕಾಚಾರವೇನು? - BJP JDS padayatra