ETV Bharat / state

ಪ್ರಧಾನಿ ಭೇಟಿಯಾದ ಕ್ಷಣಗಳು ಪಕ್ಷ ಬಲವರ್ಧನೆಗೆ ಪ್ರೇರಣೆಯ ಕಿರಣಗಳು: ಬಿ.ವೈ.ವಿಜಯೇಂದ್ರ - VIJAYENDRA MEETS PM MODI

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೇರಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿ.ವೈ. ವಿಜಯೇಂದ್ರ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

vijayendra
ಬಿ.ವೈ.ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿ (BY Vijayendra X Post)
author img

By ETV Bharat Karnataka Team

Published : 3 hours ago

ಬೆಂಗಳೂರು/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಅಪೂರ್ವ ಕ್ಷಣಗಳು ಕರ್ನಾಟಕ ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಬುಧವಾರ ಭೇಟಿಯಾಗಿ ಆಶೀರ್ವಾದ ಪಡೆದುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿ ಅವರ ಕಾರ್ಯಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನವು ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ ಎಂದಿದ್ದಾರೆ.

ಇದನ್ನೂ ಓದಿ: ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ 'ಅತ್ಯುತ್ತಮ ಶಾಸಕ ಪ್ರಶಸ್ತಿ' ಪ್ರದಾನ

ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ತಿಳಿಸಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿ ಸೂಚಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಪಕ್ಷಕ್ಕೆ ಮೋದಿ ಎಂದು ಹೇಳುವುದು ಒಂದು ವ್ಯಸನ: ಅಮಿತ್ ಶಾಗೆ ಸಿಎಂ ಬಹಿರಂಗ ಪತ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.