ETV Bharat / state

ವಿಜಯೇಂದ್ರ ದೆಹಲಿ ಪ್ರವಾಸ: ರಾಜ್ಯ ಚುನಾವಣಾ ಉಸ್ತುವಾರಿ ಜೊತೆ ಮೊದಲ ಸಭೆ - b y vijayendra

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ನೂತನ ಬಿಜೆಪಿ ಚುನಾವಣಾ ಉಸ್ತುವಾರಿಯನ್ನು ದೆಹಲಿಯಲ್ಲಿ ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

b-y-vijayendra-met-karnataka-bjp-election-in-charge-in-delhi
ವಿಜಯೇಂದ್ರ ದೆಹಲಿ ಪ್ರವಾಸ: ರಾಜ್ಯ ಚುನಾವಣಾ ಉಸ್ತುವಾರಿ ಜೊತೆ ಮೊದಲ ಸಭೆ
author img

By ETV Bharat Karnataka Team

Published : Feb 9, 2024, 3:18 PM IST

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಹತ್ವದ ಸಮಾಲೋಚನೆ ನಡೆಸಿದ್ದು, ವರಿಷ್ಠ ನಾಯಕರ ಭೇಟಿಯ ನಂತರ ರಾಜ್ಯಕ್ಕೆ ವಾಪಸಾಗಲಿದ್ದಾರೆ. ನವದೆಹಲಿ ಪ್ರವಾಸ ಕೈಗೊಂಡಿರುವ ಬಿ.ವೈ.ವಿಜಯೇಂದ್ರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ನೂತನ ಬಿಜೆಪಿ ಚುನಾವಣಾ ಉಸ್ತುವಾರಿ ಡಾ.ರಾಧಾ ಮೋಹನ್ ದಾಸ್ ಅಗರ್​ವಾಲ್ ಅವರನ್ನು ಭೇಟಿಯಾಗಿದ್ದಾರೆ.

ಚುನಾವಣಾ ಉಸ್ತುವಾರಿಯಾದ ಹಿನ್ನೆಲೆಯಲ್ಲಿ ಅವರಿಗೆ ಶುಭ ಕೋರಿದ ವಿಜಯೇಂದ್ರ, ಚುನಾವಣಾ ಸಿದ್ಧತೆಗಳ ವಿವರ ನೀಡಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಲೋಕಸಭಾ ಚುನಾವಣಾ ಪೂರ್ವ ಸಿದ್ಧತಾ ಕಾರ್ಯಾಗಾರ ನಡೆಸಿದ್ದು, ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗ ಜಿ.ವಿ.ರಾಜೇಶ್, ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರು ಹಾಗೂ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರು ಭಾಗವಹಿಸಿದ್ದರು. ಲೋಕಸಭಾ ಚುನಾವಣೆ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸುವ ಕುರಿತು ಸುದೀರ್ಘವಾಗಿ ಚರ್ಚಿಸಿದ್ದು, ಇದರ ವಿವರವನ್ನು ಚುನಾವಣಾ ಉಸ್ತುವಾರಿಗಳಿಗೆ ನೀಡಿದರು.

BY  Vijayendra met  karnataka BJP election in charge in delhi
ರಾಜ್ಯ ಚುನಾವಣಾ ಉಸ್ತುವಾರಿ ಜೊತೆ ಮೊದಲ ಸಭೆ

ನಂತರ ರಾಜ್ಯದಲ್ಲಿ ಲೋಕ ಸಮರವನ್ನು ಯಶಸ್ವಿಯಾಗಿ ಎದುರಿಸಿ ಎಲ್ಲಾ 28 ಸ್ಥಾನಗಳನ್ನೂ ಗೆಲ್ಲುವ ನಿಟ್ಟಿನ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಈಗ ಎನ್​ಡಿಎ ಸೇರಿರುವ ಹಿನ್ನೆಲೆಯಲ್ಲಿ ಮಿತ್ರಪಕ್ಷದ ಜೊತೆಗೂಡಿ ಚುನಾವಣೆ ಎದುರಿಸಲು ಬೇಕಾದ ಕಾರ್ಯತಂತ್ರ, ಜೆಡಿಎಸ್ ಜೊತೆ ಸಮನ್ವಯತೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ. ನಂತರ ರಾಜ್ಯಕ್ಕೆ ಭೇಟಿ ನೀಡಿ ಚುನಾವಣಾ ಜವಾಬ್ದಾರಿ ನಿರ್ವಹಣೆ ಆರಂಭಕ್ಕೆ ಮನವಿ ಮಾಡಿದರು.

ಇನ್ನು ರಾಷ್ಟ್ರೀಯ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನಿರೀಕ್ಷೆಯಲ್ಲಿರುವ ವಿಜಯೇಂದ್ರ ಇಂದು ಸಂಜೆ ಉಭಯ ನಾಯಕರ ಭೇಟಿ ಮಾಡಿ ರಾಜ್ಯಸಭಾ ಚುನಾವಣಾ ಅಭ್ಯರ್ಥಿ ಆಯ್ಕೆ ಕುರಿತು ಸಮಾಲೋಚನೆ ನಡೆಸುವರು. ಹೈಕಮಾಂಡ್ ಅಭಿಪ್ರಾಯವೇನಿದೆ ಎನ್ನುವ ಕುರಿತು ಚರ್ಚಿಸಿ ಹೊಸ ಅಭ್ಯರ್ಥಿಗೆ ಅವಕಾಶ ನೀಡಬೇಕೋ ಅಥವಾ ಹಾಲಿ ಸದಸ್ಯ ರಾಜೀವ್ ಚಂದ್ರಶೇಖರ್ ಅವರಿಗೇ ಮತ್ತೊಂದು ಬಾರಿ ಅವಕಾಶ ನೀಡಲಾಗುತ್ತದೆಯೋ ಎನ್ನುವ ಕುರಿತು ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಎರಡನೇ ಅಭ್ಯರ್ಥಿ ಕಣಕ್ಕಿಳಿಸುವ ವಿಚಾರದ ಬಗ್ಗೆಯೂ ಮಾತುಕತೆ ನಡೆಸಲಿದ್ದಾರೆ.

ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಜೂನ್ ನಲ್ಲಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಅಭ್ಯರ್ಥಿಗಳು ಚುನಾವಣಾ ತಯಾರಿ ಆರಂಭಿಸಿದ್ದಾರೆ. ಇದಕ್ಕೆ ಪೈಪೋಟಿ ನೀಡಿ ಸ್ಥಾನ ಗೆಲ್ಲಲು ಬಿಜೆಪಿಯೂ ಅಭ್ಯರ್ಥಿ ಆಯ್ಕೆ ಪೂರ್ಣಗೊಳಿಸಬೇಕಿದ್ದು, ಈ ಸಂಬಂಧ ಚರ್ಚೆ ನಡೆಸಿ ಅಭ್ಯರ್ಥಿಗಳ ಪಟ್ಟಿ ನೀಡಿ ಹೆಸರುಗಳ ಅಂತಿಮಗೊಳಿಸುವ ಸಂಬಂಧ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟಿಸಿ ರಾಜ್ಯದ ಮಾನ, ಮರ್ಯಾದೆ ಕಳೆದರು: ಯಡಿಯೂರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.