ಬೆಳಗಾವಿ: ಅನ್ವರ್ ಮಾಣಿಪ್ಪಾಡಿ ಅವರ ವರದಿಯನ್ನು ಸಿಬಿಐ ತನಿಖೆ ಮಾಡಿಸುವಂತೆ ನಿನ್ನೆ ಮುಖ್ಯಮಂತ್ರಿಗೆ ಸದನದಲ್ಲಿ ಸವಾಲು ಹಾಕಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ವಿವಿಧ ಸಂಘಟನೆಗಳ ಅಹವಾಲು ಸ್ವೀಕರಿಸಿದ ನಂತರ ಬೆಳಗಾವಿ ಸುವರ್ಣ ಗಾರ್ಡನ್ನಲ್ಲಿಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಅನ್ವರ್ ಮಾಣಿಪ್ಪಾಡಿ ಅವರು ನನ್ನ ವಿಚಾರದಲ್ಲಿ ಏನು ಹೇಳಿದ್ದಾರೆ ಎಂಬುದನ್ನು ಒಪ್ಪುತ್ತೀರಿ. ಆದರೆ ಅನ್ವರ್ ಮಾಣಿಪ್ಪಾಡಿಯವರ ವರದಿ ಒಪ್ಪಲ್ಲ ಅಂದ್ರೆ ಹೇಗೆ? ಡಬಲ್ ಸ್ಟಾಂಡರ್ಡ್ ಯಾಕೆ? ಎಂದರು.
ನನ್ನ ಮೇಲಿರುವ ಆರೋಪ, ಅನ್ವರ್ ಮಾಣಿಪ್ಪಾಡಿಯವರ ವರದಿ, ಯಾರ್ಯಾರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಲ್ಲವೂ ತನಿಖೆಯಾಗಲಿ. ವಕ್ಫ್ನಲ್ಲಿ ಲೂಟಿ ಹೊಡೆದಿರುವುದು ಕಾಂಗ್ರೆಸ್ ಮುಖಂಡರು. ಹಾಗಾಗಿ ಸಮಗ್ರ ತನಿಖೆಯಾಗಬೇಕು ಎಂದು ನಾವು ಕೂಡಾ ಒತ್ತಾಯಿಸಿದ್ದೇವೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ 600 ಎಕರೆ ಕಬಳಿಸಿದ್ದಾರೆ ಎಂಬ ಆರೋಪದ ಕುರಿತು ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರಿಗೆ ಅದರ ಬಗ್ಗೆ ಗೊತ್ತಿದೆ. ಅವರೇ ಮಾತನಾಡಲಿ ಎಂದರು.
ಇದನ್ನೂ ಓದಿ: ₹150 ಕೋಟಿ ಆಮಿಷ ಆರೋಪ: ಸಿಬಿಐಗೆ ವಹಿಸಲು ವಿಜಯೇಂದ್ರ ಸವಾಲು: ಕಾಂಗ್ರೆಸ್ - ಬಿಜೆಪಿ ವಾಕ್ಸಮರ - ASSEMBLY SESSION