ETV Bharat / state

ಪಾಕ್​ ಪರ ಘೋಷಣೆ ಸಮರ್ಥಿಸಿಕೊಳ್ಳುತ್ತಿರುವವರೂ ದೇಶದ್ರೋಹಿಗಳೇ: ಬಿ.ವೈ.ವಿಜಯೇಂದ್ರ - r ashok tweet

ಪಾಕ್​ ಪರ ಘೋಷಣೆ ಬೆಂಬಲಿಸುವವರು ದೇಶದ್ರೋಹಿಗಳು ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಪಾಕ್​ ಪರ ಘೋಷಣೆ ಬೆಂಬಲಿಸಿದ ಸಚಿವರು, ಶಾಸಕರು ದೇಶದ್ರೋಹಿಗಳು: ಬಿ.ವೈ.ವಿಜಯೇಂದ್ರ

author img

By ETV Bharat Karnataka Team

Published : Mar 4, 2024, 10:39 PM IST

Updated : Mar 4, 2024, 10:49 PM IST

ಪಾಕ್​ ಪರ ಘೋಷಣೆ ಸಮರ್ಥಿಸಿಕೊಳ್ಳುತ್ತಿರುವವರೂ ದೇಶದ್ರೋಹಿಗಳೇ: ಬಿ.ವೈ.ವಿಜಯೇಂದ್ರ

ಬೆಳಗಾವಿ: ಪಾಕಿಸ್ತಾನದ ಪರ ಘೋಷಣೆ ಸಮರ್ಥಿಸಿಕೊಳ್ಳುವ ಹೇಳಿಕೆ ನೀಡುತ್ತಿರುವವರು ಕೂಡ ದೇಶದ್ರೋಹಿಗಳೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇನ್ನು ಡಿಜೆ ಹಳ್ಳಿ ಪ್ರಕರಣದಲ್ಲಿ ಅಮಾಯಕರು ಎಂದು ಹೇಳಿ ಎಫ್ಐಆರ್ ಹಿಂಪಡೆಯುವುದು ನಡೆಯುತ್ತಿದೆ. ಪಾಕಿಸ್ತಾನ ಪರ ಘೋಷಣೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ಒಂದು ವಾರ ತೆಗೆದುಕೊಂಡಿದ್ದಾರೆ. ಎಫ್ಎಸ್ಎಲ್ ವರದಿ ಬಹಿರಂಗ ಪಡಿಸಲಿಲ್ಲ.

ಮೊನ್ನೆ ಬಾಂಬ್ ಪ್ರಕರಣ ಸೇರಿ ಮತ್ತಿತರ ಘಟನೆಗಳು ಮರುಕಳಿಸುತ್ತಿವೆ. ಯಾವ ಸಚಿವರು ಏನು ಹೇಳಿಕೆ ಕೊಟ್ಟಿದ್ದಾರೆ ಎಂಬುದಕ್ಕಿಂತ ಹೆಚ್ಚಾಗಿ ರಾಜ್ಯದ ಜನ ಈ ಸರ್ಕಾರದ ನಡವಳಿಕೆ ಗಮನಿಸುತ್ತಿದ್ದಾರೆ. ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರಕ್ಕೆ ಈಗಲಾದರೂ ಬುದ್ಧಿ ಬಂದು ಮೂರು ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಇನ್ನು ಹೆಚ್ಚು ಜನರಿದ್ದಾರೆ. ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದರು.

ಜೆ.ಪಿ.ನಡ್ಡಾ ಬೆಳಗಾವಿ ಭೇಟಿ: ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಾಳೆ ಬೆಳಗ್ಗೆ ಬೆಳಗಾವಿಗೆ ಬರುತ್ತಾರೆ. ಚಿಕ್ಕೋಡಿಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಇದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರದಲ್ಲಿ ಗೆಲ್ಲಲು ಪ್ಲಾನ್​​ ಮಾಡಲಾಗಿದೆ ಎಂದ ವಿಜಯೇಂದ್ರ, ಮುಂದಿನ ವಾರ ಅಭ್ಯರ್ಥಿ ಆಯ್ಕೆ ಕುರಿತು ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಳಿಕ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದರು.

ವರದಿ ಬಿಡುಗಡೆಗೊಳಿಸಲು ಸರ್ಕಾರ ಹಿಂದೆಟು ಹಾಕುತ್ತಿರುವುದೇಕೆ: ಆರ್​ ಅಶೋಕ್​

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ, ಆರೋಪಿಗಳ ಬಂಧನವಾದರೂ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ಸರ್ಕಾರ ಬಿಡುಗಡೆಗೊಳಿಸಲು ಹಿಂದೇಟು ಹಾಕುತ್ತಿರುವುದು ಏಕೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಈ ಪ್ರಕರಣದ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂವರು ಆರೋಪಿಗಳನ್ನು ಬಂಧಿಸಿದೆ. ಎಫ್ಎಸ್ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ ಎಫ್ಎಸ್ಎಲ್ ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಎಂದು ಅಶೋಕ್ ಟ್ವೀಟ್ ಮಾಡಿದ್ದಾರೆ.

ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ ಐಪಿಸಿಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡುವ ಕುರಿತ ವರದಿ ಸಿಎಂಗೆ ನೀಡಲಾಗುವುದು: ಶಾಸಕ ಗೋಪಾಲಕೃಷ್ಣ ಬೇಳೂರು

Last Updated : Mar 4, 2024, 10:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.