ETV Bharat / state

ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ ವಿಜಯೇಂದ್ರ: ಯತ್ನಾಳ್ ವಿರುದ್ಧ ಆಗುವುದೇ ಕ್ರಮ? - B Y VIJAYENDRA DELHI VISIT

ದೆಹಲಿಗೆ ತೆರಳಿರುವ ಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ವರಿಷ್ಠರಿಗೆ ಮನವಿ ಮಾಡುವ ಸಾಧ್ಯತೆಯಿದೆ.

vijayendra
ಬಿ‌.ವೈ.ವಿಜಯೇಂದ್ರ, ಜೆ.ಪಿ.ನಡ್ಡಾ (ಸಂಗ್ರಹ ಚಿತ್ರ, Vijayendra X Post)
author img

By ETV Bharat Karnataka Team

Published : Nov 30, 2024, 3:11 PM IST

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿರುವ ವಿಜಯೇಂದ್ರ, ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ರಾಜ್ಯ ಬಿಜೆಪಿಯೊಳಗಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ವಕ್ಫ್​ ನೋಟಿಸ್‌‍ ವಿರುದ್ಧ ಪಕ್ಷದ ಅನುಮತಿ ಪಡೆಯದೇ ಜನಜಾಗೃತಿ ಅಭಿಯಾನ ನಡೆಸುತ್ತಿರುವ ಯತ್ನಾಳ್‌ ಹಾಗೂ ಅವರ ತಂಡ ಪಕ್ಷಕ್ಕೆ ವಂಚಿಸುತ್ತಿದೆ. ಕೂಡಲೇ ಅವರಿಗೆ ಕಡಿವಾಣ ಹಾಕಬೇಕು ಮನವಿ ಮಾಡುವ ಸಾಧ್ಯತೆ ಇದೆ. ಜನಜಾಗೃತಿ ಅಭಿಯಾನದ ವೇಳೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಮಾತನಾಡುವ ಬದಲು ನಮ್ಮ ಕುಟುಂಬದ ವಿರುದ್ಧ ಟೀಕೆ ಮಾಡುತ್ತಾ ಪಕ್ಷಕ್ಕೆ ಮುಜುಗರ ಸೃಷ್ಟಿಸುತ್ತಿದ್ದಾರೆ. ಇದು ಆಡಳಿತಾರೂಢ ಕಾಂಗ್ರೆಸ್‌‍ಗೆ ಆಹಾರವಾಗಿ ಸಿಕ್ಕಿದೆ. ಹೀಗಾಗಿ, ಯತ್ನಾಳ್‌ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ವರಿಷ್ಠರಿಗೆ ದೂರು ನೀಡಲಿದ್ದಾರೆ ಎನ್ನಲಾಗುತ್ತಿದೆ.

ಈ ಬೆಳವಣಿಗೆಗಳ ನಡುವೆ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ಎರಡು ಬಣಗಳ ನಡುವೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಡಿಸೆಂಬರ್‌ 3ರಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್‌ ಚುಗ್‌ ರಾಜ್ಯಕ್ಕೆ ಬರಲಿದ್ದಾರೆ. ಪಕ್ಷದ ಸಂಘಟನಾ ಕಾರ್ಯಕ್ರಮದ ನಿಮಿತ್ತ ಅವರು ರಾಜ್ಯಕ್ಕೆ ಆಗಮಿಸಿಸುತ್ತಿದ್ದರಾದರೂ, ಈ ಭೇಟಿಯ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳ ಬಗ್ಗೆಯೂ ಮಾತುಕತೆ ನಡೆಸುವ ಸಾಧ್ಯತೆಗಳಿದೆ.

ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್‌ ಚುಗ್‌ ಅವರನ್ನು ನಾನು ವೈಯಕ್ತಿಕವಾಗಿ ಭೇಟಿ ಮಾಡುವುದಿಲ್ಲ. ಬದಲಾಗಿ, ನಮ್ಮ ಗುಂಪನ್ನು ಮಾತುಕತೆಗೆ ಕರೆದರೆ ಹೋಗುತ್ತೇನೆ ಎಂದು ಈಗಾಗಲೇ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ನನ್ನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇನೆ ಎಂದಾದರೆ ಕೈಗೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ಕೋರ್‌ ಕಮಿಟಿ ಸಭೆ?: ರಾಜ್ಯ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಶಮನ ಮಾಡುವ ನಿಟ್ಟಿನಲ್ಲಿ ಕೋರ್‌ ಕಮಿಟಿ ಸಭೆ ನಡೆಯಲಿದೆ. ಡಿಸೆಂಬರ್‌ 3 ಅಥವಾ 7ರಂದು ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಇದನ್ನೂ ಓದಿ: ವಿಜಯೇಂದ್ರ ಬೆನ್ನಿಗೆ ನಿಂತ ಮಾಜಿ ಶಾಸಕರ ಟೀಂ; ಯತ್ನಾಳ್ ವಿರುದ್ಧ ಕ್ರಮಕ್ಕೆ ಹೈಕಮಾಂಡ್ ಭೇಟಿಗೆ ನಿರ್ಧಾರ

ಎರಡೂ ಬಣಗಳ ನಡುವಿನ ಭಿನ್ನಮತದಿಂದ ಪಕ್ಷದ ಸಂಘಟನೆಯ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತಿದೆ, ಈ ನಿಟ್ಟಿನಲ್ಲಿ ಇದಕ್ಕೆ ಏನು ಪರಿಹಾರ ಕೈಗೊಳ್ಳಬೇಕು ಎಂಬ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಮಾಜಿ ಸಿಎಂ ಬಿ.ಎಸ್‌‍‌.ಯಡಿಯೂರಪ್ಪ ಸೇರಿದಂತೆ ಕೋರ್‌ ಕಮಿಟಿ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ದಾವಣಗೆರೆಯಲ್ಲಿ ಬೃಹತ್‌ ಸಮಾವೇಶ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ವಿಜಯೇಂದ್ರ ಬಣ ಮುಗಿಬಿದ್ದಿದೆ. ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ ಬಿ.ಸಿ.ಪಾಟೀಲ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಹಲವು ಮುಖಂಡರು ದೇವಸ್ಥಾನಗಳಿಗೆ ಭೇಟಿ ಕೊಡವ ಮೂಲಕ ಪ್ರವಾಸ ನಡೆಸುತ್ತಿದ್ದಾರೆ. ಇದರ ನಡುವೆ ವಿಜಯೇಂದ್ರ ಬಣ ದಾವಣಗೆರೆಯಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಮೂಲಕ ವಿಜಯೇಂದ್ರ ಪರ ಶಕ್ತಿ ಪ್ರದರ್ಶನ ನಡೆಸಲು ಸಿದ್ಧತೆ ನಡೆಸುತ್ತಿದೆ.

ಇದನ್ನೂ ಓದಿ: ಯತ್ನಾಳ್ ತಮ್ಮ ಪಕ್ಷದ ತಪ್ಪುಗಳನ್ನು ಹೊರಹಾಕಿದರೆ ಅದ್ಹೇಗೆ ಕಾಂಗ್ರೆಸ್ ಮುಖವಾಣಿ ಆಗ್ತಾರೆ? ತಿಮ್ಮಾಪುರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.