ETV Bharat / state

'ಪಂಚಮಸಾಲಿಗರಿಗೆ 2ಎ ಮೀಸಲಾತಿ ನೀಡಬಾರದು': ಸಿಎಂಗೆ ಹಿಂದುಳಿದ ಜಾತಿಗಳ ಒಕ್ಕೂಟದ ಮನವಿ

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬಾರದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಇಂದು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿತು.

ಸಿಎಂಗೆ ಹಿಂದುಳಿದ ಜಾತಿಗಳಿಗಳ ಒಕ್ಕೂಟ ಮನವಿ
ಸಿಎಂಗೆ ಹಿಂದುಳಿದ ಜಾತಿಗಳ ಒಕ್ಕೂಟದ ಮನವಿ (ETV Bharat)
author img

By ETV Bharat Karnataka Team

Published : 2 hours ago

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಿದೆ. ಕಾವೇರಿ ನಿವಾಸದಲ್ಲಿ ಇಂದು ಸಿಎಂ ಅವರನ್ನು ಭೇಟಿಯಾದ ಒಕ್ಕೂಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.

ಮನವಿ ಪತ್ರದ ವಿವರ: ಪಂಚಮಸಾಲಿ ಲಿಂಗಾಯತ ಸಮುದಾಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದುವರೆದಿದೆ. ಡಾ.ನಾಗನಗೌಡ ಸಮಿತಿ, ಎಲ್.ಜಿ.ಹಾವನೂರು ಆಯೋಗದ ವರದಿ, ವೆಂಕಟಸ್ವಾಮಿ ಹಿಂದುಳಿದ ವರ್ಗಗಳ 2ನೇ ಆಯೋಗದ ವರದಿ, ನ್ಯಾಯಮೂರ್ತಿ ಒ.ಚಿನ್ನಪ್ಪರೆಡ್ಡಿ ವರದಿ ಸೇರಿದಂತೆ ಎಲ್ಲಾ ವರದಿಗಳಲ್ಲೂ ಪಂಚಮಸಾಲಿ ಸಮುದಾಯವು ಮುಂದುವರೆದ ಸಮಾಜವೆಂದು ವರದಿ ಮಾಡಿವೆ.

ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ-2ಎ ಮೀಸಲಾತಿಯಲ್ಲಿ ಸೇರಿಸಿದಲ್ಲಿ ಹಾಲಿ ಇರುವ ಪ್ರವರ್ಗ-2ಎ ಯಲ್ಲಿ ಬರುವ ತೀರಾ ಹಿಂದುಳಿದ ಜಾತಿಗಳಾದ ಅಗಸ, ಸವಿತಾ ಸಮಾಜ, ತಿಗಳ, ಈಡಿಗ, ಕುರುಬ, ದೇವಾಂಗ ಸೇರಿದಂತೆ ಇತರೆ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಸಿಗುವುದಿಲ್ಲ. ಪಂಚಮಸಾಲಿ ಸಮುದಾಯವೇ ಎಲ್ಲಾ ಉದ್ಯೋಗ, ಶಿಕ್ಷಣ ಹಾಗೂ ರಾಜಕೀಯ ಮೀಸಲಾತಿಯನ್ನು ಪಡೆದುಕೊಳ್ಳುತ್ತದೆ. ಇದರಿಂದ ಪ್ರವರ್ಗ 2ಎರಲ್ಲಿ ಇರುವ ಜಾತಿಗಳಿಗೆ ಮೀಸಲಾತಿಯೇ ಸಿಗುವುದಿಲ್ಲ ಎಂದು ಒಕ್ಕೂಟ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: 'ಶಾಂತಿಯುತ ಹೋರಾಟ ಹತ್ತಿಕ್ಕಿ ಲಾಠಿ ಚಾರ್ಜ್ ನಡೆಸಿದ ಸರ್ಕಾರದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತೇವೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.