ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ 10ನೇ ಮೈಲಿಕಲ್ಲು ಬಳಿ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ಮಂಗಳೂರಿನತ್ತ ಈ ಖಾಸಗಿ ಬಸ್ ಹೋಗುತ್ತಿತ್ತು. ಫರಂಗಿಪೇಟೆಯ 10ನೇ ಮೈಲಿಕಲ್ಲು ಬಳಿ ಪಲ್ಟಿಯಾಗಿದೆ. ಸದ್ಯ ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರ ಹೆಸರು, ವಿಳಾಸದ ಮಾಹಿತಿ ಲಭ್ಯವಾಗಿಲ್ಲ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಘಟನೆಯ ತಕ್ಷಣ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.
ಇದನ್ನೂ ಓದಿ; ಕಾಳಿ ನದಿಯಿಂದ ಮೇಲೆ ಬಂದ ಲಾರಿ: ಯಶಸ್ವಿ ಕಾರ್ಯಾಚರಣೆ ಹಿಂದಿದೆ ಹಲವರ ಸಾಹಸ - Lorry Lifted From River