ETV Bharat / state

ಬಾಗಲಕೋಟೆ ಜಾನಪದ ಕಲಾವಿದನನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಕರ್ನಾಟಕದ ಬಾಗಲಕೋಟೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ ಸಾಧನೆ ಕುರಿತು ಪ್ರಧಾನ ಮಂತ್ರಿ ನರೆಂದ್ರ ಮೋದಿ ಅವರು ತಮ್ಮ ಮನ್​ ಕೀ ಬಾತ್​ನಲ್ಲಿ ಉಲ್ಲೇಖಿಸಿದ್ದಾರೆ.

author img

By ETV Bharat Karnataka Team

Published : Feb 26, 2024, 10:28 AM IST

Updated : Feb 26, 2024, 12:42 PM IST

Folk singer Venkappa Ambaji Sugatekar
ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್
ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ ಸಂದರ್ಶನ

ಬಾಗಲಕೋಟೆ: ಶಾಲೆಗೆ ತೆರಳಿ ವಿದ್ಯಾಭ್ಯಾಸ ಮಾಡದಿದ್ದರೂ ಗ್ರಾಮೀಣ ವ್ಯಕ್ತಿಯೊಬ್ಬರು ಜಾನಪದ ಕಲೆಯ ಮೂಲಕ ಸಾಧನೆ ಮಾಡಿದ್ದಾರೆ. ಸುಮಾರು ಸಾವಿರಕ್ಕೂ ಅಧಿಕ ತತ್ವಪದ, ದೇವಿಯ ಮೇಲಿನ ಪದ ಹಾಗೂ ಇತರ ವಿಷಯಗಳ ಮೇಲೆ ಪದಗಳನ್ನು ಹಾಡಿ, ಹಲವು ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡು, ಈಗ ಪ್ರಧಾನ ಮಂತ್ರಿ ನರೆಂದ್ರ ಮೋದಿ ಅವರ ಮನ ಕೀ ಬಾತ್​ನಲ್ಲಿ ಪ್ರಶಂಸೆ ಪಡೆದುಕೊಳ್ಳುವ ಮೂಲಕ ಬಾಗಲಕೋಟೆ ವೆಂಕಟಪ್ಪ ಸುಗತೇಕರ ಗಮನ ಸೆಳೆದಿದ್ದಾರೆ.

ನವನನಗರದ ನಿವಾಸಿ ವೆಂಕಪ್ಪ ಸುಗತೇಕರ್​ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕೀ ಬಾತ್‌ ರೇಡಿಯೋ ಸರಣಿಯ 110ನೇ ಕಾರ್ಯಕ್ರಮದಲ್ಲಿ ಗುಣಗಾನ ಮಾಡಿದ್ದಾರೆ. ಕರ್ನಾಟಕದ ಬಾಗಲಕೋಟೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ ಸಾಧನೆ ಕುರಿತು ಮೆಚ್ಚುಗೆ‌ ಮಾತುಗಳನ್ನು ಆಡಿದ್ದಾರೆ. ಭಾರತದ ಸಂಸ್ಕೃತಿ, ಗಾಯನಗಳಿಗೆ ಲಕ್ಷಾಂತರ ಜನ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಬಾಗಲಕೋಟೆ ನಿವಾಸಿಯಾದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರು‌ ಸಾವಿರಕ್ಕೂ ಅಧಿಕ ಜನಪದ (ಗೊಂದಲಿ) ಹಾಡುಗಳನ್ನು ಹಾಡಿ ಜನಪ್ರಿಯರಾಗಿದ್ದಾರೆ

ಹಾಗೆಯೇ, ಇವರು ಒಂದು ರೂಪಾಯಿಯನ್ನೂ ಪಡೆಯದೇ ಸಾವಿರಾರು ಜನರಿಗೆ ಜನಪದ ಹಾಡುಗಳನ್ನು ಹಾಡುವುದನ್ನು ಕಲಿಸಿದ್ದಾರೆ. ಇವರ ಸೇವೆ ಶ್ಲಾಘನೀಯವಾಗಿದೆ” ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 81 ವರ್ಷದ ವೆಂಕಪ್ಪ ಸುಗತೇಕರ್ ಅವರು 150ಕ್ಕೂ ಹೆಚ್ಚು ಕಥೆ ಹೇಳುವ ಸಾವಿರಕ್ಕೂ ಅಧಿಕ ಗೊಂದಳಿ ಹಾಡು ಹಾಡಿದ್ದಾರೆ. ಕಳೆದ 71 ವರ್ಷದಿಂದ ಗೊಂದಲಿ ಪದಗಳ ಮೂಲಕ ಸಮಾಜಕ್ಕೆ ತಮ್ಮ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಸರಕಾರದಿಂದ 2022 ರಲ್ಲಿ ಗೊಂದಳಿ ಪದ ಸೇವೆಗೆ ಜನಪದ ವಿವಿಯಿಂದ ಗೌರವ ಡಾಕ್ಟರೇಟ್ ಕೂಡಾ ಪಡೆದಿದ್ದಾರೆ.

ರಾಜ್ಯ ಸರಕಾರದಿಂದ ಈ ಹಿಂದೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ವೆಂಕಪ್ಪ ಅವರನ್ನು ಅರಸಿ ಬಂದಿವೆ. ಆಕಾಶವಾಣಿ, ದೂರದರ್ಶನ ಸೇರಿದಂತೆ ರಾಜ್ಯ, ಪರರಾಜ್ಯದಲ್ಲೂ ಸಾವಿರಾರು ಕಾರ್ಯಕ್ರಮ ನೀಡಿದ್ದಾರೆ. ಶಾಲೆಗೆ ಹೋಗಿ ಕಲಿಯದ ವೆಂಕಪ್ಪನವರು ವಂಶಪಾರಂಪರ್ಯವಾಗಿ ಬಂದ ಗೊಂದಳಿ ಪದಗಳನ್ನು ತಮ್ಮ ತಂದೆ ತಾಯಿಯಿಂದ ಕಲಿತುಕೊಂಡು‌ ಬಂದಿದ್ದಾರೆ.

ಇಂದಿನ ಆಧುನಿಕ ಯುಗದ ಮೊಬೈಲ್​ಗಳ ಭರಾಟೆ ಮಧ್ಯೆಯೂ ಇಂತಹ ಜಾನಪದ ಕಲೆಯನ್ನು ಬೆಳೆಸುತ್ತಾ ಬಂದಿದ್ದು, ತಮ್ಮ ಮಕ್ಕಳಿಗೆ ಹಾಗೂ ಮೊಮ್ಮಕ್ಕಳಿಗೆ ಗೊಂದಲಿ ಹಾಡುಗಳನ್ನು ಕಲಿಸುತ್ತಾ ಮುಂದಿನ ಪೀಳಿಗೆಗೆ ಬೆಳೆಸುತ್ತಿದ್ದಾರೆ. ದೆಹಲಿ, ಮಹಾರಾಷ್ಟ್ರ, ಆಂಧ್ರಪ್ರದೇಶದ ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಇವರು ಕಾರ್ಯಕ್ರಮ ನೀಡಿ,ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವೆಂಕಟಪ್ಪ ತಮ್ಮ ಸಾಧನೆಗೆ ಪ್ರಧಾನ ಮಂತ್ರಿ ಮೋದಿ ಅವರು ಶ್ಲಾಘಿಸಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ: 'ಮುಕ್ತ ದಿನ'ದಲ್ಲಿ ಖಗೋಳಶಾಸ್ತ್ರದ ವಿಸ್ಮಯಗಳನ್ನು ಕಣ್ತುಂಬಿಕೊಂಡ ವಿಜ್ಞಾನಾಸಕ್ತರು

Last Updated : Feb 26, 2024, 12:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.