ETV Bharat / state

ಮೈಸೂರು: ಜನವರಿ 14 ರಿಂದ 19ರವರೆಗೆ ಬಹುರೂಪಿ ನಾಟಕೋತ್ಸವ - BAHUROOPI NATIONAL THEATRE FESTIVAL

ಬಹುರೂಪಿ ನಾಟಕೋತ್ಸವ-2025 ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

BAHUROOPI NATIONAL THEATRE FESTIVAL
ಪೂರ್ವ ಸಿದ್ಧತಾ ಸಭೆ (ETV Bharat)
author img

By ETV Bharat Karnataka Team

Published : Jan 3, 2025, 4:49 PM IST

ಮೈಸೂರು: ಜನವರಿ 14ರಿಂದ 19ರ ವರೆಗೆ ಕರ್ನಾಟಕ ಕಲಾ ಮಂದಿರದಲ್ಲಿ ರಾಷ್ಟ್ರೀಯ ಬಹುರೂಪಿ ನಾಟಕೋತ್ಸವ ನಡೆಯಲಿದೆ. ನಾಟಕೋತ್ಸವಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ ಯಶಸ್ವಿಗೊಳಿಸಲು ಸಹಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮನವಿ ಮಾಡಿದರು.

ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬಹುರೂಪಿ ನಾಟಕೋತ್ಸವ-2025ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೈಸೂರು ಜಿಲ್ಲೆಗೆ ರಂಗಾಯಣವು ಒಂದು ಹೆಮ್ಮೆ, ಮಾನ್ಯ ಮುಖ್ಯಮಂತ್ರಿಗಳ ತವರು ಜಿಲ್ಲೆ. ನಾಡಹಬ್ಬ ದಸರಾವನ್ನು ಮೈಸೂರು ಜಿಲ್ಲೆಯಲ್ಲಿ ಆಚರಿಸುವುದು ನಮ್ಮ ಜಿಲ್ಲೆಗೆ ಕೀರ್ತಿ. ನಾಟಕೋತ್ಸವದಲ್ಲಿ ನಾಗರಿಕ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಟಕಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ವತಿಯಿಂದ ಕಲಾಮಂದಿರ ಹಾಗೂ ರಂಗಾಯಣದ ಆವರಣದಲ್ಲಿ ಸ್ವಚ್ಛತೆ ಮಾಡಬೇಕು. ಶುದ್ಧ ಕುಡಿಯುವ ನೀರು, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ನಗರದ ಪ್ರಮುಖ ಸ್ಥಳಗಳಲ್ಲಿ ಸರ್ಕಾರದ ಯೋಜನೆಗಳಿಗೆ ಪ್ರಚಾರ ನೀಡಲು ವ್ಯವಸ್ಥೆ ಮಾಡಿರುವ ಡಿಜಿಟಲ್ ಸ್ಕ್ರೀನ್ ಮೂಲಕ ಉತ್ಸವದ ಪ್ರಚಾರ ಮಾಡಬೇಕು. ಬಹುರೂಪಿ ನಾಟಕೋತ್ಸವ ನಡೆಯುವುದರಿಂದ ಆ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಆಗದಂತೆ ಚೆಸ್ಕಾ ಅಧಿಕಾರಿಗಳು ಜಾಗ್ರತೆ ವಹಿಸಬೇಕು. ಉತ್ಸವದ ದಿನಗಳಲ್ಲಿ ಸಂಜೆ 6ರಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧ ಬಡಾವಣೆಗಳಿಗೆ ನಗರ ಸಾರಿಗೆ ಬಸ್ ಸೌಲಭ್ಯವನ್ನು ಕೆಎಸ್​​ಆರ್​​ಟಿಸಿ ವತಿಯಿಂದ ಒದಗಿಸಬೇಕು. ಶಾಲಾ ಕಾಲೇಜು ಶಿಕ್ಷಕರು ಹಾಗೂ ಮಕ್ಕಳು ನಾಟಕೋತ್ಸವದಲ್ಲಿ ಭಾಗವಹಿಸಲು ಅವರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು ಅವರು ಮಾತನಾಡಿ, ರಂಗಾಯಣ ಪ್ರಾರಂಭವಾಗಿ 35 ವರ್ಷಗಳು ಸಂದಿವೆ. ಬಹುರೂಪಿ ನಾಟಕೋತ್ಸವದಲ್ಲಿ 6 ದಿನಗಳ ಕಾಲ 24 ನಾಟಕಗಳು ಪ್ರದರ್ಶನ ಆಗುತ್ತವೆ. ಇವು ಬೇರೆ ಬೇರೆ ಭಾಷೆಯ ನಾಟಕಗಳಾಗಿವೆ. ಈ ಬಾರಿ ಮಕ್ಕಳಿಗಾಗಿ ಮಕ್ಕಳ ನಾಟಕೋತ್ಸವವನ್ನು ಒಂದು ವೇದಿಕೆಯಲ್ಲಿ ಮಾಡಲಾಗುತ್ತದೆ. ಎಲ್ಲ ಇಲಾಖೆಗಳು ಸಹಕಾರ ನೀಡುವ ಮೂಲಕ ನಾಟಕೋತ್ಸವ ಯಶಸ್ವಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಬಹುರೂಪಿ ನಾಟಕೋತವಕ್ಕೆ ಆಗಮಿಸುವ ಅತಿಥಿಗಳು, ಕಲಾತಂಡಗಳು ಹಾಗೂ ವಿದ್ವಾಂಸರನ್ನು ಕರೆತರಲು 4 ಮಿನಿ ಬಸ್​​ಗಳು ಹಾಗೂ 3 ಟಾಟಾ ಸುಮೊ ವಾಹನಗಳನ್ನು ಒದಗಿಸಬೇಕು. ಗಣ್ಯರ ವಾಸ್ತವ್ಯಕ್ಕಾಗಿ ವಸತಿ ಗೃಹಗಳನ್ನು ಲೋಕೋಪಯೋಗಿ ಇಲಾಖೆಯಿಂದ ಕಾಯ್ದಿರಿಸಬೇಕು. ಬಹುರೂಪಿ ವಸ್ತು ಪ್ರದರ್ಶನದಲ್ಲಿ ಕರಕುಶಲ ಮಳಿಗೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜವರೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಶಕ್ತಿ ಯೋಜನೆ ಅನುಷ್ಠಾನಕ್ಕಾಗಿ ಬೆಂಗಳೂರಿಗೆ ಭೇಟಿ ನೀಡಿದ ಆಂಧ್ರ ಸರ್ಕಾರದ ನಿಯೋಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.