ETV Bharat / state

ವಿಚಾರಣಾಧೀನ ಕೈದಿ ಮೇಲೆ ಹಲವು ಪ್ರಕರಣಗಳಿದ್ದರೆ ಜಾಮೀನು ನೀಡಲಾಗದು: ಹೈಕೋರ್ಟ್ - HIGH COURT

ಮೂರನೇ ಒಂದು ಭಾಗ ಶಿಕ್ಷೆ ಅನುಭವಿಸಿರುವ ವಿಚಾರಣಾಧೀನ ಕೈದಿಯನ್ನು ಬಿಎನ್ಎನ್ಎಸ್ ಸೆಕ್ಷನ್ 479(2) ಅಡಿ ಬಿಡುಗಡೆ ಮಾಡಲು ಆಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 27, 2024, 7:26 PM IST

ಬೆಂಗಳೂರು: ವಿಚಾರಣಾಧೀನ ಕೈದಿಯ ವಿರುದ್ಧದ ಅಪರಾಧ ಪ್ರಕರಣಕ್ಕೆ ನಿಗದಿಯಾಗಿರುವ ಒಟ್ಟು ಶಿಕ್ಷೆ ಪ್ರಮಾಣದಲ್ಲಿ ಮೂರನೇ ಒಂದು ಭಾಗದ ದಿನಗಳನ್ನು ಜೈಲಿನಲ್ಲಿ ಕಳೆದರೆ, ಜಾಮೀನು ಪಡೆಯಲು ಅರ್ಹನಾಗಿರುತ್ತಾನೆ ಎಂದು ಪ್ರತಿಪಾದಿಸುವ ನೂತನ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್‌ 479, ಆರೋಪಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದ ಸಂದರ್ಭದಲ್ಲಿ ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್‌ ತಿಳಿಸಿದೆ.

ನಕಲಿ ದಾಖಲೆ ಸೃಷ್ಟಿಸಿ ಠೇವಣಿದಾರರಿಗೆ 1,522 ಕೋಟಿ ರೂ. ಹಣ ವಂಚಿಸಿದ ಪ್ರಕರಣದಲ್ಲಿ 31 ತಿಂಗಳಿಂದ ಜೈಲಿನಲ್ಲಿರುವ ಕಾರಣಕ್ಕೆ ಬಿಎನ್‌ಎನ್‌ಎಸ್‌ ಸೆಕ್ಷನ್‌ 479 ಅನ್ನು ಆಧರಿಸಿ ಜಾಮೀನು ನೀಡುವಂತೆ ಕೋರಿ ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮತ್ತು ಶ್ರೀಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್‌ ಕೋ - ಆಪರೇಟಿವ್‌ ಲಿಮಿಟೆಡ್‌ ಅಧ್ಯಕ್ಷ ಕೆ.ರಾಮಕೃಷ್ಣ (73) ಅವರು ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್‌ ಅವರ ಪೀಠ, ಈ ಆದೇಶ ಮಾಡಿದೆ.

ನ್ಯಾಯಪೀಠದ ಆದೇಶದ ವಿವರ: ''ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಎರಡು ವರ್ಷ ಏಳು ತಿಂಗಳು ಕಳೆದಿರುವುದರಿಂದ ಬಿಎನ್‌ಎಸ್‌ಎಸ್‌ ಸೆಕ್ಷನ್‌ 479(1) ಆಧರಿಸಿ ಜಾಮೀನು ನೀಡಲು ಅರ್ಜಿದಾರರು ಕೋರಿದ್ದಾರೆ. ಆದರೆ, ಬಿಎನ್‌ಎಸ್‌ಎಸ್‌ ಸೆಕ್ಷನ್‌ 479 (2) ಪ್ರಕಾರ, ವ್ಯಕ್ತಿಯೋರ್ವನ ವಿರುದ್ಧ ಹಲವು ಪ್ರಕರಣ ದಾಖಲಾಗಿ, ಅದರಲ್ಲಿ ಒಂದಕ್ಕಿಂತ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ತನಿಖೆ, ವಿಚಾರಣೆ ಅಥವಾ ಕೋರ್ಟ್‌ ವಿಚಾರಣೆ ಬಾಕಿಯಿದ್ದರೆ, ಆ ಆತನನ್ನು ನ್ಯಾಯಾಲಯ ಜಾಮೀನು ಮೇಲೆ ಬಿಡುಗಡೆ ಮಾಡಬಾರದು ಎಂದು ಹೇಳುತ್ತದೆ. ಇನ್ನೂ ವಿಧಿಸಬಹುದಾದ ಗರಿಷ್ಠ ಜೈಲು ಶಿಕ್ಷೆ ಅವಧಿಯ ಅರ್ಧಕ್ಕಿಂತ ಹೆಚ್ಚು ಅವಧಿಯವರೆಗೆ ಒಬ್ಬ ವ್ಯಕ್ತಿಯನ್ನು ಬಂಧನದಲ್ಲಿ ಮುಂದುವರೆಸಿ ಆದೇಶಿಸಲು ಬಿಎನ್‌ಎಸ್‌ಎಸ್‌ ಸೆಕ್ಷನ್‌ 479(1) ನ್ಯಾಯಾಲಯಕ್ಕೆ ಅಧಿಕಾರ ನೀಡುತ್ತದೆ. ಹಾಗಾಗಿ, ಜಾಮೀನು ನೀಡಬೇಕಾದ ಸಂದರ್ಭದಲ್ಲಿ ಸೆಕ್ಷನ್‌ 479, 479(1) ಮತ್ತು 479(2) ಅನ್ನು ಜೊತೆಗೂಡಿ ಓದಬೇಕಾಗುತ್ತದೆ'' ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

''ಅರ್ಜಿದಾರರ ವಿರುದ್ಧ ಅಕ್ರಮ ಹಣ ವರ್ಗಾವಣೆ(ಪಿಎಂಎಲ್‌ಎ)ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅಡಿಯ ಪ್ರತ್ಯೇಕವಾಗಿ ಅಂದರೆ ಒಂದಕ್ಕಿಂತ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಹೂಡಿಕೆದಾರರ ಹಿತಾಸಕ್ತಿ ರಕ್ಷಣಾ ಕಾಯ್ದೆಯ ಸೆಕ್ಷನ್‌ 9 ಅಡಿಯೂ ಕೇಸ್‌ ದಾಖಲಾಗಿದೆ. ಆ ಪ್ರಕರಣಗಳ ಆರೋಪಗಳು ಒಂದಕ್ಕಿಂತ ಹೆಚ್ಚಿವೆ ಮತ್ತು ಒಂದಕ್ಕೊಂದು ವಿಭಿನ್ನವಾಗಿಯೂ ಇವೆ'' ಎಂದಿದೆ.

ಇದನ್ನೂ ಓದಿ: ಮೈಸೂರು: ತಾಯಿ, ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳ ಕೊಲೆ: ಅಪರಾಧಿಗೆ ಮರಣ ದಂಡನೆ ಶಿಕ್ಷೆ

''ಮುಖ್ಯವಾಗಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನ ಬರೋಬ್ಬರಿ 1,544 ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡ ಮತ್ತು ಕೇವಲ 24 ಮಂದಿಗೆ 882.85 ಕೋಟಿ ರೂ. ಹಣ ಮಂಜೂರು ಮಾಡುವ ಮೂಲಕ ಈ ವಂಚನೆ ಪ್ರಕರಣದ ರೂವಾರಿಯಾಗಿರುವ ಆರೋಪ ಅರ್ಜಿದಾರರ ಮೇಲಿದೆ. ಇಂತಹ ಸಂದರ್ಭದಲ್ಲಿ ಬಿಎನ್‌ಎಸ್‌ಎಸ್‌ ಸೆಕ್ಷನ್‌ 479 ಅಡಿ ರಿಲೀಫ್‌ ಪಡೆಯಲು ಸಾಧ್ಯವಿಲ್ಲ'' ಎಂದು ನ್ಯಾಯಪೀಠ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಠೇವಣಿದಾರರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಅರ್ಜಿದಾರರು, ಜಾಮೀನು ಕೋರಿ ಮೂರನೇ ಬಾರಿಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ಪರ ವಕೀಲರು, ''ಹಣ ಅಕ್ರಮ ವರ್ಗಾವಣೆ ನಿಯಂತ್ರಣ (ಪಿಎಂಎಲ್‌) ಕಾಯ್ದೆ ಸೆಕ್ಷನ್‌ 5 ಅಡಿ ಆರೋಪಿ ರಾಮಕೃಷ್ಣ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಅರ್ಜಿದಾರರು ಬಂಧನಕ್ಕೆ ಒಳಗಾಗಿ 2 ವರ್ಷ 7 ತಿಂಗಳು ಕಳೆದಿವೆ'' ಎಂದು ತಿಳಿಸಿದರು.

''ನೂತನವಾಗಿ ಜಾರಿಗೆ ಬಂದಿರುವ ಬಿಎನ್‌ಎಸ್‌ಎಸ್‌ ಸೆಕ್ಷನ್‌ 479 ಅನ್ವಯ ಒಟ್ಟಾರೆ ವಿಧಿಸಬಹುದಾದ ಗರಿಷ್ಠ ಶಿಕ್ಷೆಯಲ್ಲಿ 3/1ನೇ ಅವಧಿಯನ್ನು ವಿಚಾರಣಾಧೀನ ಕೈದಿಯಾಗಿ ಜೈಲು ವಾಸ ಪೂರೈಸಿದ್ದರೆ, ಅಂತಹ ಆರೋಪಿಯನ್ನು ಜಾಮೀನು ಮೇಲೆ ಬಿಡುಗಡೆ ಮಾಡಬಹುದು. ಈ ನಿಯಮವು 2024ರ ಜುಲೈ 1ರಂದು ಬಿಎನ್‌ಎಸ್‌ಎಸ್‌ ಜಾರಿಗೆ ಬರುವ ಮುನ್ನ ದಾಖಲಾಗಿದ್ದ ಎಲ್ಲ ಪ್ರಕರಣಗಳಿಗೂ ಅನ್ವಯಿಲಿದೆ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಅದರಂತೆ ರಾಮಕೃಷ್ಣ ಅವರಿಗೆ ಜಾಮೀನು ನೀಡಬೇಕು'' ಎಂದು ಕೋರಿದ್ದರು.

ಇದನ್ನೂ ಓದಿ: ಲಾಕಪ್‌ ಡೆತ್‌ ಪ್ರಕರಣ: ನಾಲ್ವರು ಪೊಲೀಸ್ ಸಿಬ್ಬಂದಿಗೆ 7 ವರ್ಷ ಸಜೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.