ETV Bharat / state

ಬೆಂಗಳೂರು: ಚರ್ಚ್ ಸ್ಟ್ರೀಟ್​ನಲ್ಲಿ ಇನ್ನು ಮುಂದೆ ಚಲನಚಿತ್ರಗಳ ಶೂಟಿಂಗ್​ಗೆ ನಿರ್ಬಂಧ - ನಿರ್ಬಂಧ

ಚಲನಚಿತ್ರಗಳ ಚಿತ್ರೀಕರಣದಿಂದಾಗಿ ಸಂಚಾರ ದಟ್ಟಣೆಯಾಗುತ್ತಿರುವ ಕಾರಣ ಇನ್ನು ಮುಂದೆ ಚಲನಚಿತ್ರಗಳ ಶೂಟಿಂಗ್ ಮಾಡುವಂತಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಸೂಚಿಸಿದ್ದಾರೆ.

BBMP Chief Commissioner Tushar Girinath
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​
author img

By ETV Bharat Karnataka Team

Published : Feb 28, 2024, 10:56 AM IST

ಬೆಂಗಳೂರು: ಜನರಿಂದ ತುಂಬಿರುವ ಚರ್ಚ್​ ಸ್ಟ್ರೀಟ್‌ನಲ್ಲಿ ಇನ್ನು ಮುಂದೆ ಚಲನಚಿತ್ರಗಳ ಶೂಟಿಂಗ್ ಮಾಡುವಂತಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಸೂಚನೆ ನೀಡಿದ್ದಾರೆ.

ಈ ಬಗ್ಗೆೆ ಮಾತನಾಡಿರುವ ಅವರು "ಚರ್ಚ್​ ಸ್ಟ್ರೀಟ್‌ನಲ್ಲಿ ಚಲನಚಿತ್ರಗಳ ಚಿತ್ರೀಕರಣದಿಂದಾಗಿ ಸಂಚಾರ ದಟ್ಟಣೆಯುಂಟಾಗುತ್ತಿದ್ದು, ಇದರಿಂದ ಗ್ರಾಹಕರಿಗೆ ಮತ್ತು ವ್ಯಾಪಾರಿಗಳಿಗೆ ಸೇರಿದಂತೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಜನನಿಬಿಡ ರಸ್ತೆಯಾಗಿರುವುದರಿಂದ ಸಿನಿಮಾ ಚಿತ್ರೀಕರಣದಿಂದಾಗಿ ಸಂಚಾರಕ್ಕೆ ಸಮಸ್ಯೆಯಾಗುತ್ತದೆ" ಎಂದು ಹೇಳಿದ್ದಾರೆ.

ಅಲ್ಲದೆ "ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಮತ್ತು ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್‌ಸಿ ಅನುಮತಿ ನೀಡಲು ಸಾಧ್ಯವಿಲ್ಲ, ಅದೊಂದು ಜನನಿಬಿಡ ರಸ್ತೆ, ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ" ಎಂದಿದ್ದಾರೆ.

ಅಲ್ಲಿನ ಹೋಟೆಲ್ ಉದ್ಯಮಿಯೊಬ್ಬರು ಮಾತನಾಡಿ, ಶೂಟಿಂಗ್ ಕೇವಲ ಸಂಚಾರಕ್ಕೆ ಅಡ್ಡಿಯಾಗುವುದಿಲ್ಲ, ವ್ಯಾಪಾರಕ್ಕೂ ನಿಧಾನಗತಿಯ ಸಂಚಾರದಿಂದ ಜನರು, ಇಲ್ಲಿಗೆ ಬರದೆ ಬೇರೆ ಬೇರೆ ಪ್ರದೇಶಗಳಿಗೆ ಹೋಗುತ್ತಾರೆ. ಇದರಿಂದ ನಮ್ಮ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾನುವಾರ ನೆರೆದಿದ್ದ ಸಿನಿಮಾ ಚಿತ್ರೀಕರಣ: ವಾರಾಂತ್ಯಗಳಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು ಖರೀದಿದಾರರಿಗೆ ಮುಖ್ಯ ಆಕರ್ಷಣೆಯಾಗಿರುವ ಚರ್ಚ್ ಸ್ಟ್ರೀಟ್‌ನಲ್ಲಿ ಕಳೆದ ಭಾನುವಾರ ಸಿನಿಮಾ ಚಿತ್ರೀಕರಣ ನಡೆದಿತ್ತು. ಇದರಿಂದ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಭಾರೀ ಸಮಸ್ಯೆಯಾಗಿತ್ತು. ಸೂಕ್ತ ಅನುಮತಿ ಪಡೆಯದೇ ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿತ್ತು. ಇವೆಲ್ಲವನ್ನು ಗಮನಿಸಿದ ಬಿಬಿಎಂಪಿ ಈ ಆದೇಶವನ್ನು ಹೊರಡಿಸಿದೆ.

ಇದನ್ನೂ ಓದಿ: 'ಕರಟಕ ದಮನಕ' ಚಿತ್ರದ ಕ್ಯಾರೆಕ್ಟರ್ ಟೀಸರ್ ರಿಲೀಸ್​: ಕಿಚ್ಚ ಸುದೀಪ್​ ಮೆಚ್ಚುಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.