ETV Bharat / state

ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ: ಸಿಎಂ ಭರವಸೆ

author img

By ETV Bharat Karnataka Team

Published : Mar 11, 2024, 10:21 PM IST

ಅಂಗನವಾಡಿ ಮತ್ತು ವಿಶಿಷ್ಟ ಚೇತನರ ಸಂಘಟನೆಗಳ ನಿಯೋಗ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿತು.

Anganwadi organization delegation met CM Siddaramaiah
ಅಂಗನವಾಡಿ ಸಂಘಟನೆ ನಿಯೋಗ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಬೆಂಗಳೂರು: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಶಿಷ್ಟ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅಂಗನವಾಡಿ ಮತ್ತು ವಿಶಿಷ್ಟ ಚೇತನರ ಸಂಘಟನೆಗಳ ನಿಯೋಗ ವಿಧಾನಸೌಧದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ 11500, 10,000 ರೂ. ಹಾಗೂ ಸಹಾಯಕಿಯರಿಗೆ 6000 ರೂ ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಸಿಎಂ ಅವರಲ್ಲಿ ಒತ್ತಾಯಿಸಿದರು. ಕೇಂದ್ರದಿಂದ ಬರುತ್ತಿರುವ ಅನುದಾನ ಬರುತ್ತಿಲ್ಲವಾದ್ದರಿಂದ ಆಗುತ್ತಿರುವ ಸಮಸ್ಯೆಗಳನ್ನು ಕಾರ್ಯಕರ್ತೆಯರು ಮುಂದಿಟ್ಟು ಸರ್ಕಾರದ ನೆರವು ಕೋರಿದರು.

ಉಚಿತ ವಿದ್ಯುತ್: ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ. ಹೆಚ್ಚಿಸುವಂತೆ ಕೋರಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ತಮ್ಮ‌ಕುಟುಂಬಗಳಿಗೆ, ತಮ್ಮ ಸಮುದಾಯಕ್ಕೆ ಆಗಿರುವ ಅನುಕೂಲಗಳನ್ನು ವಿವರಿಸಿ ಮುಖ್ಯಮಂತ್ರಿಗಳಿಗೆ ಕಾರ್ಯಕರ್ತೆಯರು ಅಭಿನಂದಿಸಿದರು. ಮನೆ ಯಜಮಾನಿಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2,000 ರೂ ಅಂಗನವಾಡಿ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಮನೆ ನಿರ್ವಹಣೆ ಮಾಡುವ ಮಹಿಳೆಯರಿಗೆ ಸಹಾಯವಾಗಿದೆ. ಸರ್ಕಾರ ನಿಮ್ಮ ಪರವಾಗಿದೆ ಎಂದು ಭರವಸೆ ನೀಡಿದರು. ಶೇ 60 ರಷ್ಟು ಅಂಗನವಾಡಿ ಮಹಿಳೆಯರಿಗೂ ಗೃಹ ಲಕ್ಷ್ಮೀ ಯೋಜನೆಯ ಲಾಭ ದೊರೆಯುತ್ತಿದೆ. ಇತರ ಬೇಡಿಕೆಗಳ ಬಗ್ಗೆಯೂ ಪರಿಗಣಿಸಲಾಗುವುದು ಎಂದು ಸಿಎಂ ತಿಳಿಸಿದರು.

ಇದನ್ನೂಓದಿ:ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆಗೆ ನಿರ್ಬಂಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.