ETV Bharat / state

ರಂಗೇರಿದ ಪದವೀಧರ ಕ್ಷೇತ್ರದ ಚುನಾವಣೆ ಕಣ: ಬಿಜೆಪಿ ಭದ್ರಕೋಟೆ ಛಿದ್ರಗೊಳಿಸಲು ಕಾಂಗ್ರೆಸ್​ ಭರ್ಜರಿ ತಯಾರಿ - Graduate Constituency Election - GRADUATE CONSTITUENCY ELECTION

ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಅ.ದೇವೇಗೌಡ ಸ್ಪರ್ಧಿಸಿದ್ದರೆ, ಕಾಂಗ್ರೆಸ್​ನಿಂದ 3ನೇ ಬಾರಿಗೆ ರಾಮೋಜಿಗೌಡ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.ಈ ಇಬ್ಬರು ಅಭ್ಯರ್ಥಿಗಳ ನಡುವೆ ಭರ್ಜರಿ ಪೈಪೋಟಿ ಏರ್ಪಟ್ಟಿದೆ

ಮೈತ್ರಿ ಅಭ್ಯರ್ಥಿ ಅ.ದೇವೆಗೌಡ, ಕಾಂಗ್ರೆಸ್​ ಅಭ್ಯರ್ಥಿ ರಾಮೋಜಿಗೌಡ
ಮೈತ್ರಿ ಅಭ್ಯರ್ಥಿ ಅ.ದೇವೆಗೌಡ, ಕಾಂಗ್ರೆಸ್​ ಅಭ್ಯರ್ಥಿ ರಾಮೋಜಿಗೌಡ (ETV Bharat)
author img

By ETV Bharat Karnataka Team

Published : May 17, 2024, 4:05 PM IST

ರಾಮನಗರ: ವಿಧಾನಪರಿಷತ್ ಪದವೀಧರ ಚುನಾವಣೆ ರಣಕಣ ರಂಗೇರುತ್ತಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಅ.ದೇವೆಗೌಡ ಹಾಗೂ ಕಾಂಗ್ರೆಸ್​ನಿಂದ 3ನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದ ರಾಮೋಜಿಗೌಡ ಅವರು ಕಣದಲ್ಲಿದ್ದು, ಭರ್ಜರಿ ಪೈಪೋಟಿ ಏರ್ಪಟ್ಟಿದೆ ? ಲೋಕಸಭಾ ಚುನಾವಣೆ ಬೆನ್ನಲೆ ಈಗ ವಿಧಾನ ಪರಿಷತ್ ಚುನಾವಣೆ ಕಣ ರಂಗು ಪಡೆದುಕೊಳ್ಳುತ್ತಿದೆ. ಬಿಜೆಪಿ - ಜೆಡಿಎಸ್ ಒಟ್ಟಾಗಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ಲೋಕಸಭೆ ಮಾದರಿಯಲ್ಲಿ ಏಕಾಂಗಿ ಹೋರಾಟಕ್ಕೆ ಸಜ್ಜುಗೊಂಡಿದೆ.

ಪದವೀಧರರ ಕ್ಷೇತ್ರದ ಚುನಾವಣೆ: ಒಂದು ಚುನಾವಣೆ ಮುಗಿಸಿ ರಿಲ್ಯಾಕ್ಸ್ ಮೂಡ್ ನಲ್ಲಿದ್ದ ರಾಜಕೀಯ ಪಕ್ಷದ ಕಾರ್ಯಕರ್ತರು ಇದೀಗ ಪದವೀಧರ ಕ್ಷೇತ್ರದ ಚುನಾವಣೆಗೆ ಸಜ್ಜಾಗಿದ್ದಾರೆ. ಈ ಚುನಾವಣೆಯಲ್ಲಿ ಮತದಾರರ ಸಂಖ್ಯೆ ತೀರ ವಿರಳವಾಗಿದ್ದರೂ, ಮತದಾರರೆಲ್ಲ ಪದವೀಧರರೇ ಆಗಿದ್ದಾರೆ. ಆಮಿಷಗಳಿಗಿಂತ ಹೆಚ್ಚಾಗಿ ವರ್ಚಸ್ಸು, ಕೆಲಸಗಳಷ್ಟೇ ವರ್ಕ್ ಆಗಲಿವೆ. ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಮಹೂರ್ತ ನಿಗದಿಯಾಗಿದ್ದು, ಜೂ.3 ರಂದು ಮತದಾನ ನಡೆಯಲಿದೆ. ಜೂ.6 ರಂದು ಮತ ಏಣಿಕೆ ನಡೆಯಲಿದೆ. ಪದವೀಧರ ಕ್ಷೇತ್ರ ಗೆಲ್ಲಲು ರಾಜಕೀಯ ಪಕ್ಷಗಳು ಇದೀಗ ತಯಾರಿ ಆರಂಭಿಸಿವೆ.

ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಮತ್ತು ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಮೈತ್ರಿ ಪಕ್ಷದ ನಡುವೆ ಮಾತುಕತೆ ನಡೆದಿದೆ. ಶಿಕ್ಷಕರ ಕ್ಷೇತ್ರ ಜೆಡಿಎಸ್‌ಗೆ, ಪದವೀಧರ ಕ್ಷೇತ್ರ ಬಿಜೆಪಿಗೆ ಹಂಚಿಕೆಯಾಗಿದೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್​ವು ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಈ ಎರಡು ಪಕ್ಷಗಳು ಮೈತ್ರಿಯಾದ ಬಳಿಕ ಎದುರಿಸುತ್ತಿರುವ 3ನೇ ಚುನಾವಣೆ ಇದಾಗಿದೆ. ಈಗಾಗಲೇ ಮೈತ್ರಿ ಪಕ್ಷಗಳು ಬೆಂಗಳೂರು ಶಿಕ್ಷಕರ ಕ್ಷೇತ್ರ, ಪದವೀಧರ ಚುನಾವಣೆಗೆ ಸಜ್ಜಾಗಿವೆ.

ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ರಾಮೋಜಿ ಗೌಡ ಅವರ ಹೆಸರನ್ನು ಕಾಂಗ್ರೆಸ್ ಪಕ್ಷ ಕೆಲ ತಿಂಗಳ ಹಿಂದೆಯೇ ಘೋಷಣೆ ಮಾಡಿದೆ. ಈಗಾಗಲೇ ಕ್ಷೇತ್ರದಲ್ಲಿ ರಾಮೋಜಿಗೌಡ ಬಿರುಸಿನ ಪ್ರಚಾರದಲ್ಲಿ ನಿರತವಾಗಿದ್ದಾರೆ. 2012 ಮತ್ತು 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದ ರಾಮೋಜಿಗೌಡ ಇದೀಗ ಮೂರನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಸಾಕಷ್ಟು ಸ್ಪರ್ಧೆಯೊಡ್ಡಿದ್ದರಾದರೂ ಬಿಜೆಪಿಯ ಅ ದೇವೇಗೌಡ ಗೆಲುವು ಸಾಧಿಸಿದ್ದರು. 2012 ರಲ್ಲಿ ರಾಮೋಜಿಗೌಡ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿತ್ತು.

ಆ.ದೇವೇಗೌಡ, ರಾಮೋಜಿಗೌಡ ನಡುವೆ ಬಿಗ್​ಫೈಟ್: ಕಳೆದ ಎರಡು ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದ ಅ.ದೇವೇಗೌಡ ಈ ಬಾರಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಮತ್ತೊಮ್ಮೆ ಅ.ದೇವೇಗೌಡ ಹಾಗೂ ರಾಮೋಜಿಗೌಡ ಎದುರಾಳಿಗಳಾಗಿ ಸೆಣೆಸಾಟ ನಡೆಸೋದು ಪಕ್ಕಾ ಆಗಿದೆ.

ಬಿಜೆಪಿ ಭದ್ರಕೋಟೆ: ಬೆಂಗಳೂರು ಪದವೀಧರರ ಕ್ಷೇತ್ರ ಬಿಜೆಪಿ ಪಕ್ಷದ ಭದ್ರಕೋಟೆ ಎನಿಸಿದೆ. 1988ರಲ್ಲಿ ಬಿಜೆಪಿ ಹಿರಿಯ ಮುಖಂಡ ರಾಮಚಂದ್ರೇಗೌಡ ಪದವೀಧರ ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಬಳಿಕ 1994, 2000,2006 , 2012ರ ಚುನಾವಣೆಯಲ್ಲಿ ಇವರು ಸತತ ಐದುಬಾರಿ ಗೆಲುವು ಸಾಧಿಸಿದ್ದರು.

2018 ರಲ್ಲಿ ವಯಸ್ಸಿನ ಕಾರಣದಿಂದಾಗಿ ಬಿಜೆಪಿಯಿಂದ ರಾಮಚಂದ್ರೇಗೌಡರ ಬದಲಾಗಿ ಅ.ದೇವೇಗೌಡರನ್ನು ಕಣಕ್ಕಿಳಿಸಲಾಗಿತ್ತು. ಸತತ ಸೋಲನ್ನು ಕಂಡಿದ್ದ ಅ.ದೇವೇಗೌಡರು ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ವಿಧಾನಸೌಧ ಪ್ರವೇಶಿಸಿದರು. ಕಳೆದ 36 ವರ್ಷಗಳಿಂದ ಈ ಕ್ಷೇತ್ರ ಬಿಜೆಪಿ ಹಿಡಿತದಲ್ಲಿರುವುದು ಮತ್ತೊಂದು ವಿಶೇಷವಾಗಿದೆ.

ಚುನಾವಣಾ ನೀತಿ ಸಂಹಿತೆ: ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಗಳಿಲ್ಲ. ಲೋಕಸಭಾ ಕ್ಷೇತ್ರದ ಚುನಾವಣೆಯ ನೀತಿ ಸಂಹಿತೆ ಜೂ.6ರ ವರೆಗೆ ಜಾರಿ ಇರಲಿದೆ. ಈ ನಡುವೆ ಪದವೀಧರ ಕ್ಷೇತ್ರದ ಚುನಾವಣೆ ಮುಗಿದು, ಜೂ.6ರಂದೇ ಫಲಿತಾಂಶ ಹೊರ ಬೀಳಲಿದೆ. ಹೀಗಾಗಿ ಜೂ.6ರ ಮಧ್ಯರಾತ್ರಿ ನೀತಿ ಸಂಹಿತೆ ಪೂರ್ಣಗೊಳ್ಳಲಿದೆ. ಹೀಗಾಗಿ ಈ ಚುನಾವಣೆಯು ಮತ್ತೊಂದು ನೀತಿ ಸಂಹಿತಿಯ ಕಾರಣಕ್ಕೆ ಅಭಿವೃದ್ಧಿ ಕೆಲಸಗಳಿಗೆ ಕಡಿವಾಣ ಬೀಳಲಿದೆ.

ಇದನ್ನೂಓದಿ:ಪರಿಷತ್​ ಚುನಾವಣೆ: ಕೊನೆಯ ದಿನ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ - Council Nominations

ETV Bharat Logo

Copyright © 2025 Ushodaya Enterprises Pvt. Ltd., All Rights Reserved.