ETV Bharat / state

ಪಕ್ಷದ ಹಿತರಕ್ಷಣೆ ಬಗ್ಗೆ ಆತಂಕಪಡಬೇಕಿಲ್ಲ, ಜೆಡಿಎಸ್ ಮುಖಂಡರಿಗೆ ಕುಮಾರಸ್ವಾಮಿ ಸಲಹೆ

author img

By ETV Bharat Karnataka Team

Published : Mar 11, 2024, 9:10 PM IST

ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ನಿಲ್ಲಿಸಬೇಕು ಎಂಬುದು ಬಿಜೆಪಿ ನಾಯಕರ ಒತ್ತಾಸೆ ಇದೆ. ನಮ್ಮ ಪಕ್ಷದ ನಾಯಕರು, ಮುಖಂಡರು ಸಹ ಅಭಿಲಾಷೆ ಹೊಂದಿದ್ದಾರೆ. ಎನ್​ಡಿಎ ಮೈತ್ರಿಕೂಟದ ಒಮ್ಮತ ಅಭ್ಯರ್ಥಿ ಆಗಬೇಕು ಎಂದು ಎರಡು ಪಕ್ಷಗಳು ಬಯಸಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

JDS leaders meeting
ಜೆಡಿಎಸ್ ಮುಖಂಡರ ಸಭೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನು ಕೆಲ ದಿನಗಳಷ್ಟೇ ಬಾಕಿ ಉಳಿದಿದೆ. ಆದರೆ, ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ಈಗಿನಿಂದ ಲೋಕಸಭೆ ಚುನಾವಣೆ ಅಖಾಡಕ್ಕೆ ಧುಮುಕಿದ್ದು, ಪಕ್ಷದ ಮುಖಂಡರ ಸರಣಿ ಸಭೆಗಳನ್ನು ಆಯೋಜಿಸುತ್ತಿದ್ದಾರೆ.

ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಇಂದು ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ಕರೆದಿದ್ದರು. ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಮನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ಸೇರಿ ಕ್ಷೇತ್ರದ ಅನೇಕ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು.

ಎಲ್ಲ ಮುಖಂಡರ ಅಭಿಪ್ರಾಯ ಆಲಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಮುಖಂಡರಿಗೆ ಕೆಲ ಸ್ಪಷ್ಟ ಸೂಚನೆಗಳನ್ನು ಕೊಟ್ಟರಲ್ಲದೇ, ನಮ್ಮ ಕಾರ್ಯಕರ್ತರು, ಮುಖಂಡರು ಪಕ್ಷದ ಹಿತರಕ್ಷಣೆ ಬಗ್ಗೆ ಆತಂಕ ಪಡಬೇಕಾಗಿಲ್ಲ. ಕಹಿ ಮರೆತು ಕೆಲಸ ಮಾಡೋಣ, ಹಿಂದೆ ಆಗಿರುವ ತಪ್ಪುಗಳನ್ನು ಸರಿ ಮಾಡಿಕೊಂಡು ಮುಂದೆ ಹೋಗೋಣ ಎಂದು ಸಲಹೆ ನೀಡಿದರು.

ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ: ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ. ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಇವತ್ತು ಕಾಂಗ್ರೆಸ್​ನವರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ. ನಾನು ಯಾವ ರೀತಿ ನಡೆದುಕೊಂಡಿದ್ದೇನೆ ಎನ್ನುವುದು ರಾಜ್ಯಕ್ಕೆ ಗೊತ್ತಿದೆ ಎಂದು ಮುಖಂಡರಿಗೆ ತಿಳಿಸಿದರು.

ಡಾ.ಸಿ ಎನ್ ಮಂಜುನಾಥ್ ಪರ ಮೈತ್ರಿ ಪಕ್ಷದ ಒಲವು: ಜಯದೇವ ಹೃದ್ರೋಗ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ನಿಲ್ಲಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರ ಒತ್ತಾಸೆ ಇದೆ. ನಮ್ಮ ಪಕ್ಷದ ನಾಯಕರು, ಮುಖಂಡರು ಅದೇ ಅಭಿಲಾಷೆ ಹೊಂದಿದ್ದಾರೆ. ಎನ್ ಡಿಎ ಮೈತ್ರಿಕೂಟದ ಒಮ್ಮತ ಅಭ್ಯರ್ಥಿ ಆಗಬೇಕು ಎರಡೂ ಪಕ್ಷಗಳು ಬಯಸಿವೆ. ಅವರು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಸಭೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದರು.

ಸಿ ಪಿ ಯೋಗೇಶ್ವರ್ ಅವರು ಎನ್​ಡಿಎ ಅಭ್ಯರ್ಥಿ ಆಗಬೇಕು ಎಂದು ನಾನು ಹೇಳಿದ್ದೇನೆ. ಸ್ವತಃ ಯೋಗೇಶ್ವರ್ ಅವರಿಗೂ ಹೇಳಿದ್ದೇನೆ. ಆದರೆ, ಯೋಗೇಶ್ವರ್ ಅವರು ಕೂಡ ಡಾ.ಮಂಜುನಾಥ್ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ ಎಂದು ಸಭೆಯಲ್ಲಿ ಹೇಳಿದರು.

ನಿನ್ನೆ ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ. ಡಾ ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ನನ್ನ ಸಹೋದರಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಅಳ್ತಾ ಕೂತಿದ್ದಾರೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ಆ ಕಿರಾತಕರನ್ನು ಮಣಿಸಲೇಬೇಕು. ಇದು ನನ್ನ ಗುರಿ ಎಂದು

ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ. ರಾಮನಗರ ಜನರು ನಿಖಿಲ್​​ರನ್ನು ಸೋಲಿಸಿದ್ದಾರೆ ಎಂದು ನಾನು ದೋಷ ಕೊಡಲ್ಲ. ನಮ್ಮದೇ ತಪ್ಪುಗಳಿಂದ ನಿಖಿಲ್ ಸೋತಿದ್ದಾರೆ, ಆ ತಪ್ಪುಗಳನ್ನು ಸರಿ ಮಾಡೋಣ ಎಂದು ಹೇಳಿದರು‌.

ಡಿಕೆಶಿ ಮೇಲೆ ಕಿಡಿ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಣ್ಣೀರು ಹಾಕೋದು ಅವರ ಕುಟುಂಬಕ್ಕೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಅವರಿಗೆ ಆತ್ಮಸಾಕ್ಷಿ ಅನ್ನೋದು ಇದೆಯಾ? ಎಂದು ಕಿಡಿಕಾರಿದ ಮಾಜಿ ಸಿಎಂ ಎಚ್​ಡಿಕೆ , ಏನೆಲ್ಲಾ ಮಾಡಿದ್ದಾರೆ, ಏನೆಲ್ಲಾ ಕೆಡುಕು ಮಾಡಿದ್ದಾರೆ ಎನ್ನುವುದು ಈ ರಾಜ್ಯಕ್ಕೆ ಗೊತ್ತಿದೆ. ನಾವು ಹಾಗೆ ಮಾಡಿದ್ದೇವೆಯಾ? ಖಂಡಿತಾ ಇಲ್ಲ ಎಂದರು. ಇಡೀ ವಿಶ್ವವೇ ಮೋದಿ ಅವರನ್ನು ಗೌರವಿಸುತ್ತದೆ. ಅಂತಹ ಮೋದಿ ಅವರು ದೇವೇಗೌಡರು ಬಂದರೆ ಎಷ್ಟು ಗೌರವ ಕೊಡುತ್ತಾರೆ ಎನ್ನುವುದನ್ನು ಇಡೀ ದೇಶವೇ ನೋಡಿದೆ. ಯಾವ ರೀತಿ ಅವರು ದೇವೇಗೌಡರನ್ನು ಆದರಿಸುತ್ತಾರೆ ಎಂಬುದನ್ನು ಆ ವ್ಯಕ್ತಿ ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದರು.

ಮಾಗಡಿ ಬಾಲಕೃಷ್ಣಗೆ ತಿರುಗೇಟು:ನಮ್ಮ ಪಕ್ಷದಿಂದಲೇ ಬೆಳೆದು ಹೋದ ಮಾಗಡಿ ನಾಯಕನ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್​​​​ಡಿಕೆ ಅವರು, ಗೌಡರ ಮನೆಯಲ್ಲಿ ಅಳಿಯನನ್ನೇ ಹರಕೆ ಕುರಿ ಮಾಡಲು ಹೊರಟಿದ್ದಾರೆ ಎಂದು ಹೇಳಿದ್ದಾರೆ. ಆ ವ್ಯಕ್ತಿಗೆ ಸತ್ಯ ಗೊತ್ತಿಲ್ಲ. ಮಂಜುನಾಥ್ ಅವರು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಲಕ್ಷಾಂತರ ಬಡ ಜನರ ಹೃದಯ ಕಾಪಾಡಿದ್ದಾರೆ.ದೇಶದಲ್ಲಿಯೇ ಅವರ ಸೇವೆಯನ್ನು ಕೊಂಡಾಡುತ್ತಾರೆ. ಅಂತಹ ವ್ಯಕ್ತಿ ದೆಹಲಿಗೆ ಹೋದರೆ ಇಡೀ ದೇಶಕ್ಕೆ ಸೇವೆ ಮಾಡಬಹುದು. ಅವರನ್ನು ಹರಕೆಯ ಕುರಿ ಮಾಡುತ್ತಿಲ್ಲ, ನಾವು, ಎಲ್ಲರೂ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣಗೆ ತಿರುಗೇಟು ನೀಡಿದರು.

ಇದನ್ನೂಓದಿ:ಸರ್ಕಾರ ಬೀಳಿಸಲು ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ: ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.