ETV Bharat / state

ಬೆಂಗಳೂರು: ಅಪಾಯಕಾರಿ ವ್ಹೀಲಿಂಗ್ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದ ಪೊಲೀಸರು - ಬಾಣಸವಾಡಿ ಠಾಣೆ

ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ 100 ಫೀಟ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುವವರನ್ನು ಹೆಡೆಮುರಿ ಕಟ್ಟಲು ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸುತ್ತಿದ್ದ 3 ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಲಾಗಿದೆ.

bike Wheeling
ಬೈಕ್ ವೀಲಿಂಗ್
author img

By ETV Bharat Karnataka Team

Published : Feb 26, 2024, 4:14 PM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದ್ವಿಚಕ್ರ ವಾಹನದ ಮೇಲೆ ಅಪಾಯಕಾರಿ ವ್ಹೀಲಿಂಗ್ ಮಾಡಿ ಜನರಿಗೆ ಕಿರಿಕ್ ಉಂಟು ಮಾಡುತ್ತಿದ್ದ ಪುಂಡರಿಗೆ ವಾರಾಂತ್ಯದಲ್ಲಿ ಸಂಚಾರಿ ಪೊಲೀಸರು ಶಾಕ್ ನೀಡಿದ್ದಾರೆ.

ರೀಲ್ಸ್​​ ಕ್ರೇಜಿಗಾಗಿ ಪಡ್ಡೆ ಹುಡುಗರು ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುವುದಷ್ಟೇ ಅಲ್ಲದೇ ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುತ್ತಿದ್ದರು. ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುತ್ತಿದ್ದ​ ಆರೋಪಿಗಳಾದ ವೆಂಕಟರಮಣ. ಎಸ್ (20) ಸಂಜಯ್. ಸಿ (23) ಹಾಗೂ ಮತ್ತೊಬ್ಬ ಅಪ್ರಾಪ್ತ ಬಾಲಕನನ್ನು ಬಾಣಸವಾಡಿ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಶೇಷ ಕಾರ್ಯಾಚರಣೆ: ಬಾಣಸವಾಡಿ ಠಾಣೆ ವ್ಯಾಪ್ತಿ 100 ಫೀಟ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುವವರನ್ನು ಹೆಡೆಮುರಿ ಕಟ್ಟಲು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಬಳಸುತ್ತಿದ್ದ 3 ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳಾದ ಇಬ್ಬರು ಯುವಕರು ಹಾಗೂ ಮತ್ತೊಬ್ಬ ಅಪ್ರಾಪ್ತನ ಪೋಷಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಇದನ್ನೂಓದಿ:ಟೈರ್ ಸ್ಫೋಟಗೊಂಡು ಬುಲೆರೋ ಟೆಂಪೋ ಪಲ್ಟಿ: ಮೂವರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.