ETV Bharat / state

ವಕೀಲರ ಅಭಿವ್ಯಕ್ತಿ ಸ್ವಾತಂತ್ರ್ಯ ನಿರ್ಬಂಧಿಸುವ ಆದೇಶಗಳನ್ನು ಭಾರತೀಯ ವಕೀಲರ ಪರಿಷತ್ ಹೊರಡಿಸಲಾಗದು: ಹೈಕೋರ್ಟ್ - HIGH COURT

ಭಾರತೀಯ ವಕೀಲರ ಪರಿಷತ್​ ವಕೀಲರ ಅಭಿವ್ಯಕ್ತಿ ಸ್ವಾತಂತ್ರ್ಯ ನಿರ್ಬಂಧಿಸುವಂತಹ ಆದೇಶಗಳನ್ನು ಹೊರಡಿಸಲಾಗದು ಎಂದು ಹೈಕೋರ್ಟ್​ ಆದೇಶಿಸಿದೆ.

high-court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Oct 8, 2024, 10:39 PM IST

ಬೆಂಗಳೂರು: ವಕೀಲರ ಅಭಿವ್ಯಕ್ತಿ ಸ್ವಾತಂತ್ರ್ಯ ನಿರ್ಬಂಧಿಸುವಂತಹ ಆದೇಶಗಳನ್ನು ಹೊರಡಿಸುವ ಅಧಿಕಾರ ಭಾರತೀಯ ವಕೀಲರ ಪರಿಷತ್‌ಗೆ ಇಲ್ಲ ಎಂದು ಹೈಕೋರ್ಟ್ ಇಂದು ಆದೇಶಿಸಿದೆ.

ಭಾರತೀಯ ವಕೀಲರ ಪರಿಷತ್ 2024ರ ಏ.12ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಹಿರಿಯ ನ್ಯಾಯವಾದಿ ಎಸ್.ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ವಕೀಲರು ಮಾತನಾಡುವುದು ಮೂಲಭೂತ ಹಕ್ಕು ಎಂದು ಹೇಳಿರುವ ನ್ಯಾಯಾಲಯ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ಆಗಿರುವ ಹಣ ದುರ್ಬಳಕೆ ಬಗ್ಗೆ ಧ್ವನಿ ಎತ್ತಿದ್ದ ವಕೀಲ ಎಸ್. ಬಸವರಾಜು ಅವರ ವಿರುದ್ಧ ಬಿಸಿಐ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿತು.

ಭಾರತೀಯ ವಕೀಲರ ಪರಿಷತ್ತಿನ ಅಧ್ಯಕ್ಷರು ಮೇಲ್ನೋಟಕ್ಕೆ ಯಾವುದೇ ವಕೀಲರ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವಂತಹ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಮಾಡಿರುವಂತೆ ಸಕ್ಷಮ ಸಿವಿಲ್ ನ್ಯಾಯಾಲಯ ಅಥವಾ ಸಾಂವಿಧಾನಿಕ ನ್ಯಾಯಾಲಯಗಳ ಅಧಿಕಾರವನ್ನು ಭಾರತೀಯ ವಕೀಲರ ಪರಿಷತ್‌ನ ಅಧ್ಯಕ್ಷರು ಕಿತ್ತುಕೊಳ್ಳಲು ಅನುಮತಿ ನೀಡಲಾಗುವುದಿಲ್ಲ ಎಂದು ಪೀಠ ತಿಳಿಸಿದೆ.

ಅಲ್ಲದೆ, ಬಿಸಿಐನ ಆದೇಶ ಯಾವುದೇ ವ್ಯಕ್ತಿಯ ವಿರುದ್ಧವಲ್ಲ. ಇಡೀ ವಕೀಲರ ಸಮುದಾಯದ ವಿರುದ್ಧವಾಗಿದೆ. ವಕೀಲರ ಕಾಯಿದೆ ಸೆಕ್ಷನ್ 7(1)(ಜಿ) ಪ್ರಕಾರ, ರಾಜ್ಯಗಳ ವಕೀಲರ ಷರಿಷತ್ತಿನ ಚಟುವಟಿಕೆಗಳ ಮೇಲೆ ಬಿಸಿಐ ನಿಗಾ ವಹಿಸಬಹುದಾಗಿದೆ. ಆದರೆ ಅದು ವಕೀಲರು ಮಾತನಾಡದಂತೆ ನಿರ್ಬಂಧಿಸುವ ಆದೇಶ ಹೊರಡಿಸುವ ಅಧಿಕಾರ ಬಿಸಿಐ ಅಧ್ಯಕ್ಷರಿಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ: ಹಿರಿಯ ನ್ಯಾಯವಾದಿ ಎಸ್.ಬಸವರಾಜ್, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಪ್ರಕರಣದ ಬಗ್ಗೆ ಪ್ರಕರಣ ದಾಖಲಿಸಿದ್ದರು. ಆ ವಿಚಾರವನ್ನು ಪದಾಧಿಕಾರಿಗಳು ಬಿಸಿಐ ಗಮನಕ್ಕೆ ತಂದಿದ್ದರು. ಆಗ ಬಿಸಿಐ ಹಣಕಾಸು ವಹಿವಾಟುಗಳ ಬಗ್ಗೆ ಸ್ವೀಕೃತಿಗಳು ಸೇರಿ ಎಲ್ಲಾ ದಾಖಲೆಗಳು 15 ದಿನಗಳಲ್ಲಿ ಒದಗಿಸುವಂತೆ ಕೆಎಸ್‌ಬಿಸಿ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು.

ಆ ಕುರಿತು ವಿಚಾರಣಾ ಪ್ರಕ್ರಿಯೆ ಬಾಕಿ ಇರುವಾಗಲೇ ಬಿಸಿಐ ಅಧ್ಯಕ್ಷರು, ಹಣ ದುರ್ಬಳಕೆ ಪ್ರಕರಣದ ಬಗ್ಗೆ ಪರಿಷತ್ತಿನ ಸದಸ್ಯರು ಸೇರಿದಂತೆ ಯಾವುದೇ ವಕೀಲರು ಸಾರ್ವಜನಿಕ ಹೇಳಿಕೆ ನೀಡಬಾರದು ಮತ್ತು ಎಲ್ಲೂ ಮಾತನಾಡಬಾರದು ಎಂದು ಆದೇಶ ಹೊರಡಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ: ದೇಶದ ಸಮಗ್ರತೆಗೆ ಧಕ್ಕೆಯಾದರೆ ವ್ಯಕ್ತಿ ಸ್ವಾತಂತ್ರಕ್ಕೆ ಮನ್ನಣೆ ನೀಡಲಾಗದು: ಹೈಕೋರ್ಟ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.