ETV Bharat / state

ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ - Brutal Murder of Family Members - BRUTAL MURDER OF FAMILY MEMBERS

ನಗರಸಭೆ ಉಪಾಧ್ಯಕ್ಷೆ ಸುನಂದಾ ಪ್ರಕಾಶ್ ಬಾಕಳೆ ದಂಪತಿಯ ಪುತ್ರ ಸೇರಿ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ.

ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಪರಿಶೀಲನೆ ನಡೆಸುತ್ತಿರುವ ಪೊಲೀಸರು
author img

By ETV Bharat Karnataka Team

Published : Apr 19, 2024, 7:16 AM IST

Updated : Apr 19, 2024, 8:11 AM IST

ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಯಾರೋ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು. ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಕ್ಕಳನ್ನು ಕೊಲೆ ಮಾಡಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತರಲ್ಲಿ ಮೂವರು ಕೊಪ್ಪಳ ಮೂಲದವರಾಗಿದ್ದಾರೆ.

ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಲಾಗುತ್ತಿತ್ತು. ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನು ಕೊಲೆ ಮಾಡುತ್ತಿದ್ದರು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಕಣ್ಣೀರು ಹಾಕುತ್ತಿದ್ದಾರೆ. ಈ ಘಟನೆಯಿಂದ ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.

ಸುದ್ದಿ ತಿಳಿದು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಇಂಚಿಂಚು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.

ಕೊಲೆಯಾದ ಸ್ಥಳಕ್ಕೆ ಸಚಿವ ಹೆಚ್​ ಕೆ ಪಾಟೀಲ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಕಾಶ್ ಬಾಕಳೆ ಕುಟುಂಬಕ್ಕೆ ಧೈರ್ಯ ಹೇಳಿದ ಸಚಿವರು, ಇದೊಂದು ದುರ್ದೈವದ ಸಂಗತಿ, ಅಮಾನುಷ ಘಟನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಗಡುಕರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಡರಾತ್ರಿ ಪ್ರಕಾಶ ಬಾಕಳೆ ಮನೆಯಲ್ಲಿ ನಾಲ್ವರ ಕೊಲೆ ನಡೆದಿದೆ. ಸುದ್ದಿ ತಿಳಿದ ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದೇವೆ. ಕಾರ್ತಿಕ್ ಬಾಕಳೆ, ಪರಶುರಾಮ ಹಾದಿಮನಿ, ಪತ್ನಿ ಲಕ್ಷ್ಮೀ ಹಾದಿಮನಿ, ಪುತ್ರಿ ಆಕಾಂಕ್ಷಾ ಹಾದಿಮನಿ ಕೊಲೆಗೀಡಾದವರು ಎಂಬ ಮಾಹಿತಿ ಇದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ. ಕೊಲೆಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಕೊಲೆಗೈದ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು. ಬೆಳಗಿನ ಜಾವ 2 ರಿಂದ 3 ಗಂಟೆ ಒಳಗೆ ಈ ಘಟನೆ ನಡೆದಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳು ಹೇಗೆ ಬಂದರು ಎಂಬುದರ ಬಗ್ಗೆ ಕುಟುಂಬಸ್ಥರು ನೀಡಿದ ಮಾಹಿತಿ ಮೇರೆಗೆ ತನಿಖೆ ನಡೆಸಲಾಗುವುದು. ಸದ್ಯಕ್ಕೆ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸಿಟಿಟಿವಿ ಸೇರಿದಂತೆ ಇತರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಬಿ.ಎಸ್. ನೇಮಗೌಡ - ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ

ದುಷ್ಕರ್ಮಿಗಳು ಯಾರು, ಅವರು ಹೇಗೆ ಬಂದರು ಎಂಬ ಮಾಹಿತಿ ಗೊತ್ತಿಲ್ಲ. ಬೆಳಗಿನ ಜಾವ 3 ಗಂಟೆ ಬಾಗಿಲು ಬಡಿದ ಸದ್ದು ಕೇಳಿಸಿತು. ನಾನು ಎದ್ದು ಯಾರು ಅಂತ ಕೂಗಿದೆ. ಯಾರು ಪ್ರತಿಕ್ರಿಯಿಸಲಿಲ್ಲ. ಕಳ್ಳರು ಇರಬಹುದು ಎಂದು 100ಕ್ಕೆ ಫೋನ್​ ಮಾಡಿದೆ. ತಕ್ಷಣ ಅಕ್ಕ - ಪಕ್ಕದ ಜನರಿಗೂ ಫೋನ್​ ಮಾಡಿದೆ. ಅವರು ಬಂದು ನೋಡಿದರು. ಈ ವೇಳೆ ಯಾರು ಇರಲಿಲ್ಲ. ಬಳಿಕ ನನ್ನ ಪುತ್ರನಿಗೆ ಪೋನ್​ ಮಾಡಿದೆ. ಅವನು ಕರೆ ಸ್ವೀಕರಿಸಲಿಲ್ಲ. ಆ ಬಳಿಕ ಅನುಮಾನ ಬಂದಿದ್ದರಿಂದ ಅಳಿಯ ಪರಶುರಾಮ್​ ಹಾಗೂ ಅವರ ಪತ್ನಿ ಲಕ್ಷ್ಮೀಗೆ ಫೋನ್​ ಮಾಡಿದೆ. ಅವರು ಸಹ ಕರೆ ಸ್ವೀಕರಿಸಲಿಲ್ಲ. ಅನುಮಾನ ಹೆಚ್ಚಾಗಿದ್ದರಿಂದ ತಕ್ಷಣ ಸ್ಥಳೀಯ ಪೊಲೀಸರಿಗೆ ಫೋನ್ ಮಾಡಿದೆ. ಪೊಲೀಸರು ಬಂದು ನೋಡಿದಾಗ ಕೊಲೆ ನಡೆದಿರುವುದು ಗೊತ್ತಾಯಿತು. ನನ್ನ ಪುತ್ರ ಕಾರ್ತಿಕ್​, ಅಳಿಯ ಪರಶುರಾಮ್​, ಅವರ ಪತ್ನಿ ಲಕ್ಷ್ಮೀ, ಪುತ್ರಿ ಆಕಾಂಕ್ಷಾ ಕೊಲೆಗೀಡಾಗಿದ್ದು ಈ ಕೊಲೆಗೆ ಕಾರಣ ಗೊತ್ತಿಲ್ಲ. ​ಪ್ರಕಾಶ್ ಬಾಕಳೆ, ನಗರಸಭೆ ಉಪಾಧ್ಯಕ್ಷೆ ಪತಿ

ಇದನ್ನೂ ಓದಿ: ಹುಬ್ಬಳ್ಳಿ ಕಾಲೇಜು‌ ಕ್ಯಾಂಪಸ್​ನಲ್ಲಿ ಯುವತಿ ಕೊಲೆಗೆ ಪ್ರೇಮ ಪ್ರಕರಣ ಕಾರಣ: ಪೊಲೀಸ್ ಕಮೀಷನರ್ - College Girl Murder

Last Updated : Apr 19, 2024, 8:11 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.