ETV Bharat / state

ನ.25, 26ರಂದು ಬಸವನಗುಡಿ ಕಡಲೆಕಾಯಿ ಪರಿಷೆ: ವ್ಯಾಪಾರಸ್ಥರಿಗೆ ಸುಂಕ ವಿನಾಯಿತಿ - KADALEKAYI PARISHE

ಬಸವನಗುಡಿ ಕಡಲೆಕಾಯಿ ಪರಿಷೆ ನವೆಂಬರ್ 26, 26ರಂದು ನಡೆಯಲಿದೆ. ಈ ಬಾರಿ ಪರಿಷೆ ಮಳಿಗೆಗಳ ವ್ಯಾಪಾರಸ್ಥರಿಂದ ಯಾವುದೇ ಸುಂಕ ಪಡೆಯುವುದಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಕಡಲೆಕಾಯಿ ಪರಿಷೆ Kadalekayi parishe bengaluru
ಬಸವನಗುಡಿ ಕಡಲೆಕಾಯಿ ಪರಿಷೆಯ ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Nov 17, 2024, 10:37 AM IST

ಬೆಂಗಳೂರು: ಇದೇ ಮೊದಲ ಬಾರಿಗೆ ಬಸವನಗುಡಿ ಕಡಲೆಕಾಯಿ ಪರಿಷೆಯ ಮಳಿಗೆಗಳಲ್ಲಿ ವ್ಯಾಪಾರ ಮಾಡುವವರಿಂದ ಯಾವುದೇ ರೀತಿಯ ಸುಂಕ ಪಡೆಯದೇ ಇರಲು ಮುಜರಾಯಿ ಇಲಾಖೆ ತೀರ್ಮಾನಿಸಿದೆ. ನವೆಂಬರ್ 25 ಮತ್ತು 26ರಂದು ದೊಡ್ಡ ಗಣಪತಿ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಪರಿಷೆಯ ಪೂರ್ವಭಾವಿ ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನದಂತೆ ಸುಂಕ ಪಡೆಯದಿರಲು ನಿರ್ಧರಿಸಲಾಗಿದೆ.

ಪ್ರತೀ ವರ್ಷ ಟೆಂಡರ್ ಕರೆಯಲಾಗುತ್ತಿತ್ತು. ಟೆಂಡರ್‌ದಾರರು ಅಂಗಡಿಗಳಿಂದ ಬಲವಂತವಾಗಿ ಹೆಚ್ಚು ಸುಂಕ ವಸೂಲಿ ಮಾಡುತ್ತಿದ್ದರು ಎನ್ನುವ ಆರೋಪ ಕೇಳಿಬರುತ್ತಿತ್ತು. ಆದ್ದರಿಂದ ಈ ಬಾರಿ ಸುಂಕ ವಸೂಲಾತಿ ಟೆಂಡರ್ ಕೈಬಿಡಲು ಹಾಗೂ ವ್ಯಾಪಾರಸ್ಥರಿಂದ ಸುಂಕ ವಸೂಲಿ ಮಾಡದಂತೆ ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಅನಧಿಕೃತವಾಗಿ ಸುಂಕ ವಸೂಲಿ ಮಾಡಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಪರಿಷೆಯಲ್ಲಿ ಎನ್‌ಜಿಒ ಸಹಯೋಗದೊಂದಿಗೆ ಪ್ಲಾಸ್ಟಿಕ್ ವಿರುದ್ಧ ಜನ ಜಾಗೃತಿ ಕಾರ್ಯ ಮಾಡಲಾಗುತ್ತಿದೆ. ಅದಕ್ಕಾಗಿ 'ಪರಿಷೆಗೆ ಬನ್ನಿ, ಕೈ ಚೀಲ ತನ್ನಿ' ಎಂದು ಘೋಷವಾಕ್ಯದೊಂದಿಗೆ ಪ್ಲಾಸ್ಟಿಕ್ ಚೀಲ ನಿಷೇಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಬಿಬಿಎಂಪಿ ವತಿಯಿಂದ ಮಾರ್ಷಲ್‌ಗಳನ್ನು ನಿಯೋಜಿಸಲು ಮತ್ತು ಪರಿಷೆಗೆ ಪಾಲ್ಗೊಳ್ಳುವ ಜನರ ಆರೋಗ್ಯ ದೃಷ್ಟಿಯಿಂದ ತುರ್ತು ಚಿಕಿತ್ಸೆ ವಾಹನ ಹಾಗೂ ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ದೊಡ್ಡ ಗಣಪತಿ ದೇವಸ್ಥಾನದ ರಸ್ತೆಯಿಂದ ರಾಮಕೃಷ್ಣ ಆಶ್ರಮದ ರಸ್ತೆಯವರೆಗೆ ಮತ್ತು ಗೋಕುಲೆ ಇನ್‌ಸ್ಟಿಟ್ಯೂಟ್ ರಸ್ತೆಯ ಮಧ್ಯದಲ್ಲಿ ಬ್ಯಾರಿಕೇಡ್, ಸುತ್ತ ಮುತ್ತ ಹೆಚ್ಚಿನ ಸಿಸಿಟಿವಿ, ಬೀದಿ ದೀಪಗಳ ಅಳವಡಿಕೆ ಹಾಗೂ ದುರಸ್ತಿಯಲ್ಲಿರುವ ವಿದ್ಯುತ್ ದೀಪಗಳನ್ನು ಸರಿಪಡಿಸಬೇಕು ಎಂದು ಬಿಬಿಎಂಪಿ ಹಾಗೂ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ದೇವಾಲಯದ ಒಳ ಹಾಗೂ ಹೊರ ಭಾಗದಲ್ಲಿ ದೀಪಾಲಂಕಾರ, ಕುಡಿಯುವ ನೀರು, ನಿರಂತರ ವಿದ್ಯುತ್ ಮತ್ತು ಸಾರ್ವಜನಿಕ ಶೌಚಾಲಯ ವ್ಯವಸ್ಥೆ ಮಾಡಬೇಕು. ಕಡಲೆ ಕಾಯಿ ಪರಿಷೆಯ ಪ್ರಯುಕ್ತ ಲಕ್ಷಾಂತರ ಜನರು ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ವ್ಯವಸ್ಥೆಗಾಗಿ ಪೊಲೀಸ್ ಇಲಾಖೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕಾಗುತ್ತದೆ ಹಾಗೂ ದೇವಾಲಯದ ಸುತ್ತ ಮುತ್ತ ಮತ್ತು ಜನ ಸಂಚಾರ ಇರುವ ಕಡೆ ದ್ವಿಚಕ್ರ ಮತ್ತು ಭಾರಿ ವಾಹನಗಳ ನಿಲುಗಡೆ ನಿಷೇಧಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದೊಡ್ಡ ಬಸವಣ್ಣ ದೇವಾಲಯದ ಹೊರ ಆವರಣ ಮತ್ತು ಪಕ್ಕದಲ್ಲಿ ತಾತ್ಕಾಲಿಕ ಔಟ್‌ಪೋಸ್ಟ್ ಅಳವಡಿಸಬೇಕಾಗಿದೆ. ರಾಮಕೃಷ್ಣ ಆಶ್ರಮ ವೃತ್ತದಿಂದ ಹನುಮಂತನಗರ, ಕತ್ರಿಗುಪ್ಪೆ, ಬ್ಯಾಂಕ್ ಕಾಲೋನಿ, ಗಿರಿನಗರ, ಆವಲಹಳ್ಳಿ, ವಿದ್ಯಾಪೀಠ ವೃತ್ತ ಮುಂತಾಂದ ಸ್ಥಳಗಳಿಗೆ ಹೋಗುವ ಸಾರಿಗೆ ಬಸ್ಸುಗಳ ಮಾರ್ಗ ಬದಲಾವಣೆ ಮಾಡಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸ್ ಇಲಾಖೆಯವರು ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಿದ್ದಾರೆ. ಬೆಳಗ್ಗೆ 9 ರಿಂದ ರಾತ್ರಿ 11.30ರವರೆಗೆ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಸಾರ್ವಜನಿಕರ ಸುರಕ್ಷಿತ ದೃಷ್ಟಿಯಿಂದ ನಿಗಾವಹಿಸಲು ಪ್ರಮುಖ ಸ್ಥಳಗಳಲ್ಲಿ 12 ಕಾವಲು ಗೋಪುರಗಳನ್ನು ನಿರ್ಮಾಣ ಮಾಡಲಾಗುತ್ತದೆ ಮತ್ತು ವಾಹನಗಳ ಪಾರ್ಕಿಂಗ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಖರ್ಚು ಕಡಿಮೆ, ಸ್ವಂತ ಉದ್ಯಮಕ್ಕೆ 'ಬೇಕಿಂಗ್​​'​ ಬೆಸ್ಟ್​: ಜಿಕೆವಿಕೆ ಕೃಷಿ ಮೇಳದಲ್ಲಿ ಗಮನ ಸೆಳೆದ ಬೇಕಿಂಗ್ ಪ್ರಪಂಚ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.