ETV Bharat / state

ವಕ್ಫ್​ ಆಸ್ತಿ ಕುರಿತು ವಿವಾದಾತ್ಮಕ ಹೇಳಿಕೆ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಬೊಮ್ಮಾಯಿ

ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಂಸದ ಬಸವರಾಜ ಬೊಮ್ಮಾಯಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಬಸವರಾಜ ಬೊಮ್ಮಾಯಿ, ಹೈಕೋರ್ಟ್
ಬಸವರಾಜ ಬೊಮ್ಮಾಯಿ, ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 13, 2024, 6:07 AM IST

ಬೆಂಗಳೂರು: ವಕ್ಫ್​ ಆಸ್ತಿ ವಿವಾದದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಂಸದ ಬಸವರಾಜ ಬೊಮ್ಮಾಯಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಸಂಬಂಧ ನ.16ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೀಡಿರುವ ನೋಟಿಸ್ ರದ್ದುಪಡಿಸಬೇಕು ಎಂದೂ ಸಹ ಅವರು ಕೋರಿದ್ದಾರೆ. ಈ ಅರ್ಜಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.

ವಕ್ಫ್ ಆಸ್ತಿ ವಿಚಾರವಾಗಿ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕ ಅರವಿಂದ್ ಬೆಲ್ಲದ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮತ್ತಿತರರು ನ.4ರಂದು ಸವಣೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಕಾನ್ಸ್‌ಟೇಬಲ್ ಮಂಜುನಾಥ ಮಣ್ಣಿಯವರ್ ಸವಣೂರು ಠಾಣಾಧಿಕಾರಿಗೆ ದೂರು ನೀಡಿದ್ದರು.

ಸವಣೂರಿನಲ್ಲಿ ನಿಂತು ಎಲ್ಲೇ ಕಲ್ಲೆಸೆದರೂ ಅದು ಬಿದ್ದ ಜಾಗ ವಕ್ಫ್ ಆಸ್ತಿ ಎನ್ನುವಂತಾಗಿದೆ. ಭೋವಿ ಸಮಾಜದವರಿಗೆ ಮನೆ ನಿರ್ಮಾಣಕ್ಕೆ ಮೂರು ವರ್ಷಗಳ ಹಿಂದೆಯೇ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ಆ ಜಾಗವನ್ನೂ ವಕ್ಫ್ ಆಸ್ತಿ ಎನ್ನುತ್ತಾರೆ ಎಂದು ಬೊಮ್ಮಾಯಿ ಹೇಳಿರುವುದಾಗಿ ದೂರು ದಾಖಲಿಸಲಾಗಿದೆ.

ಸಿ.ಟಿ.ರವಿ, ನಮಗೆ ಸಂವಿಧಾನ ದೊಡ್ಡದೋ ಅಥವಾ ಶರಿಯಾ ಕಾನೂನು ದೊಡ್ಡದೋ?, ರೈತರ ಜಮೀನು, ದೇವಸ್ಥಾನ, ಕೆರೆಗಳ ಜಾಗವನ್ನು ವಕ್ಫ್ ಹೆಸರಿನಲ್ಲಿ ನೋಂದಾಯಿಸುತ್ತಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರ ಶರಿಯಾ ಕಾನೂನು ಇಲ್ಲಿ ನಡೆಯಲ್ಲ ಎಂದು ಹೇಳಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಅನ್ವಯ ಎಲ್ಲರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 196(1)(Z) ಅಡಿ ಪ್ರಕರಣ ದಾಖಲಿಸಲಾಗಿದೆ. ಬಿಎನ್‌ಎಸ್‌ಎಸ್ ಸೆಕ್ಷನ್ 35 (3) ಅಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಕರಿಯಾ ಎಂದಿದ್ದಕ್ಕೆ ವರ್ಣಭೇದ ಅಂತ ದೂರು ಕೊಡಲು ಹೇಳಿ: ಡಿಕೆ ಶಿವಕುಮಾರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.