ರಾಯಚೂರು: ಕಾಂಗ್ರೆಸ್ನ ನೂತನ ಜಿಲ್ಲಾಧ್ಯಕ್ಷರಾಗಿ ಬಸವರಾಜ ಪಾಟೀಲ್ ಇಟಗಿ ಪದಗ್ರಹಣ ಮಾಡಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅಧಿಕಾರ ವಹಿಸಿಕೊಂಡರು. ಸಮಾರಂಭಕ್ಕೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಿ.ಕುಮಾರ ನಾಯಕ, ಸಚಿವ ಎನ್.ಎಸ್.ಬೋಸರಾಜು ಹಾಗೂ ಅವರ ಬೆಂಬಲಿಗರು ಗೈರಾಗಿರುವುದು ಅಸಮಾಧಾನದ ಸುಳಿವು ನೀಡಿದೆ.
ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಜಿಲ್ಲಾಧ್ಯಕ್ಷರಾಗಿದ್ದ ಬಿ.ವಿ.ನಾಯಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಒಂದು ವರ್ಷದ ಬಳಿಕ ಹೈಕಮಾಂಡ್ ರಾಯಚೂರು ಜಿಲ್ಲಾಧ್ಯಕ್ಷರಾನ್ನಾಗಿ ಇಟಗಿ ಅವರನ್ನು ನೇಮಿಸಿದೆ.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನ ಹಿರಿಯ ಮುಖಂಡರಾದ ಕೆ.ಶಾಂತಪ್ಪ, ಯುವ ಮುಖಂಡ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಸೇರಿದಂತೆ ಕೆಲ ಮುಖಂಡರು ಆಕಾಂಕ್ಷಿಗಳಾಗಿದ್ದರು. ಜಿಲ್ಲಾ ಕಾಂಗ್ರೆಸ್ನಲ್ಲಿ ಎರಡು ಬಣಗಳಿದ್ದು, ಇದೀಗ ಒಂದು ಬಣ ಮೇಲುಗೈ ಸಾಧಿಸಿದಂತಾಗಿದೆ. ಈ ಆಯ್ಕೆಯಿಂದ ಮತ್ತೊಂದು ಬಣ ಅಸಮಾಧಾನಗೊಂಡಿದೆ. ಈ ಅಸಮಾಧಾನ ಶಮನ ಮಾಡಲು ಹೈಕಮಾಂಡ್ ಕೆ.ಶಾಂತಪ್ಪರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ.
ಇದನ್ನೂ ಓದಿ: ಎಸ್.ಟಿ.ಸೋಮಶೇಖರ್ ವಿರುದ್ಧ ವರಿಷ್ಠರು ಕ್ರಮ ಕೈಗೊಳ್ಳಲಿದ್ದಾರೆ: ಸುರೇಶ್ ಕುಮಾರ್ - S Suresh Kumar