ETV Bharat / state

ಬಿಜೆಪಿಗೆ ಹೀನಾಯ ಸೋಲುಣಿಸಿದ ಬೊಮ್ಮಾಯಿಗೆ ಹಾಗೆ ಹೇಳುವ ನೈತಿಕ ಹಕ್ಕಿಲ್ಲ: ಎಂ ಬಿ ಪಾಟೀಲ ತಿರುಗೇಟು - ಬೆಂಗಳೂರು

ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಬಸವರಾಜ ಬೊಮ್ಮಾಯಿ ಅವರಿಗೆ ಯಾವ ನೈತಿಕತೆ ಇದೆ ಎಂದು ಸಚಿವ ಎಂ ಬಿ ಪಾಟೀಲ್ ಪ್ರಶ್ನಿಸಿದ್ದಾರೆ.

ಸಚಿವ ಎಂ ಬಿ ಪಾಟೀಲ
ಸಚಿವ ಎಂ ಬಿ ಪಾಟೀಲ
author img

By ETV Bharat Karnataka Team

Published : Feb 2, 2024, 3:18 PM IST

ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಸಚಿವ ಎಂ. ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 135 ಸೀಟುಗಳು ಬಂದಿರುವುದರಲ್ಲಿ ಬೊಮ್ಮಾಯಿ ಅವರ ಕೊಡುಗೆಯೂ ಇದೆ. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬುದ್ಧಿವಂತರೊಬ್ಬರು ಆ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆಂದು ನಾವೂ ಖುಷಿಪಟ್ಟಿದ್ದೆವು. ಆದರೆ, ಅದನ್ನು ಉಳಿಸಿಕೊಳ್ಳಲು ಅವರಿಗೆ ಆಗಲಿಲ್ಲ ಎಂದು ಟೀಕಿಸಿದರು.

ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ ಕೆ ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ದಕ್ಷಿಣದ ರಾಜ್ಯಗಳಿಗೆ ಆದಾಯಕ್ಕೆ ತಕ್ಕ ಪ್ರತಿಫಲ ಸಿಗಲಿ ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರು ಹಾಗೆ ಹೇಳಿದ್ದಾರೆ; ಅದಕ್ಕೆ ಹೆಚ್ಚಿನ ಅರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ನಿನ್ನೆ ಮುಖ್ಯಮಂತ್ರಿ ಅವರು ಡಿನ್ನರ್ ಪಾರ್ಟಿ ಕರೆದ ಸಂದರ್ಭದಲ್ಲಿ, ಜಿಲ್ಲೆಗಳ ಉಸ್ತುವಾರಿ ಸಚಿವರೊಂದಿಗೆ ಬರಲಿರುವ ಲೋಕಸಭಾ ಚುನಾವಣೆಗೆ ಸಜ್ಜಾಗುವುದು, ಪಕ್ಷ ಸಂಘಟನೆ ಮತ್ತಿತರ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ ಎಂದು ಪಾಟೀಲ್ ತಿಳಿಸಿದ್ದಾರೆ.

ಕೆಪಿಎಸ್​ಸಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ನಡುವೆ ಜಟಾಪಟಿ ನಡೆಯುತ್ತಿದೆ. ಇದು ಸರ್ಕಾರದ ಗಮನಕ್ಕೆ ಬರಲಿಲ್ಲವೇ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಮುಖ್ಯಮಂತ್ರಿಗಳ ಗಮನಕ್ಕೆ ಬರಬೇಕು. ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಬಿಜೆಪಿಯಲ್ಲಿ 40 ಪರ್ಸೆಂಟ್ ಕಮಿಷನ್ ಇತ್ತು. ಈಗ ಕಾಂಗ್ರೆಸ್​ನಲ್ಲಿ ಅದಕ್ಕೂ ಮೀರಿ ಕಮಿಷನ್ ದಂಧೆ ಇದೆ ಎಂದು ಮಾಜಿ ಸಚಿವ ಗಂಡಸಿ ಶಿವರಾಮ್ ಆರೋಪಿಸಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಅದರ ಬಗ್ಗೆ ಗೊತ್ತಿಲ್ಲ. ಅದನ್ನು ತಿಳಿದುಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಾವೋಸ್‌ ಶೃಂಗಸಭೆಯಲ್ಲಿ 23 ಸಾವಿರ ಕೋಟಿಗೂ ಹೆಚ್ಚಿನ ಬಂಡವಾಳ ಆಕರ್ಷಿಸುವಲ್ಲಿ ಕರ್ನಾಟಕ ಸಫಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.