ಚಿತ್ರದುರ್ಗ: ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾಮಗಾರಿ ಬಿಲ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಇವರು ಕಾಮಗಾರಿಯ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಡಳಿಯ ಕಚೇರಿಯಲ್ಲಿ ಸೋಮವಾರ 4 ಲಕ್ಷ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುತ್ತಿಗೆದಾರ ಸಿದ್ದನಗೌಡ ಬಳಿ ಅಧಿಕಾರಿ ಬಸವರಾಜಪ್ಪ ಲಂಚ ಸ್ವೀಕರಿಸುತ್ತಿದ್ದರು. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ: ಜೈಲಿನಿಂದಲೇ ಅತ್ತೆಗೆ ಕೊಲೆ ಬೆದರಿಕೆ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು - Death threats from prison