ETV Bharat / state

ಗಣೇಶೋತ್ಸವ ಆಚರಣೆಗೆ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ ಅನುಮತಿ ಪತ್ರ: ಬಿಬಿಎಂಪಿ - Ganesha Festival

ಬಿಬಿಎಂಪಿ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಗಣೇಶ ಹಬ್ಬದ ಆಚರಣೆಗೆ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ ಅನುಮತಿ ಪತ್ರ ನೀಡಲಾಗುವುದು ಎಂದರು.

bbmp-chief-commissioner-tushar-girinath
ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (ETV Bharat)
author img

By ETV Bharat Karnataka Team

Published : Aug 21, 2024, 9:56 PM IST

ಬೆಂಗಳೂರು: ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ ಅನುಮತಿ ಪತ್ರವನ್ನು ಪಡೆಯಬಹುದಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಬುಧವಾರ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ನಡೆದ ಶಾಂತಿ ಸೌಹಾರ್ದತೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

BENGALURU
ಶಾಂತಿ ಸೌಹಾರ್ದತೆ ಸಭೆಯಲ್ಲಿ ಭಾಗವಹಿಸಿದ ಪೊಲೀಸರು (ETV Bharat)

ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪವಿಭಾಗ ಕಚೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

63 ಏಕಗವಾಕ್ಷಿ ಕೇಂದ್ರಗಳ ವಿಳಾಸ ಹಾಗೂ ಏಕಗವಾಕ್ಷಿ ಕೇಂದ್ರಗಳಲ್ಲಿರುವ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ. ಅದರ ಅನುಸಾರ ಗಣೇಶ ಮೂರ್ತಿಗಳನ್ನಿಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪಡೆಯಬಹುದು ಎಂದು ಹೇಳಿದರು.

ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ಗಣೇಶ ನಿಮಜ್ಜನಕ್ಕಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತದೆ. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದ್ದು, ಯಾರೂ ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು ಖರೀದಿಸದೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಲು ಆಗ್ರಹಿಸಿದರು.

ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ಹಲಸೂರು ಕೆರೆ ಸೇರಿದಂತೆ ಇನ್ನಿತರೆ ಪ್ರಮುಖ ಕೆರೆಗಳ ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಂಡು ಸರಿಯಾಗಿ ವಿಸರ್ಜನೆ ಮಾಡಲು ಅವಕಾಶ ಮಾಡಿಕೊಡಲಾಗುವುದು. ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.

ಗಣೇಶ ಮೂರ್ತಿಗಳ ನಿಮಜ್ಜನಕ್ಕೆ ಗುರುತಿಸಿರುವ ಕೆರೆಗಳ ಕಲ್ಯಾಣಿಗಳ ಬಳಿ ಭದ್ರತೆಯ ದೃಷ್ಠಿಯಿಂದ ಪೊಲೀಸ್ ವ್ಯವಸ್ಥೆಯ ಜೊತೆಗೆ ಬ್ಯಾರಿಕೇಡಿಂಗ್, ಸಿಸಿಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್​ಗಳ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದರು.

City Police Commissioner B. Dayanand
ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ (ETV Bharat)

ಈ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ, ಪ್ರತಿ ವರ್ಷದಂತೆ ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು. ಈಗಾಗಲೇ ಎಲ್ಲಾ ಕಡೆ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಈ ಬಾರಿ ಯಾವುದೇ ರೀತಿಯ ಅನಾನುಕೂಲವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಾಲಿಕೆ, ಪೊಲೀಸ್ ಇಲಾಖೆಯಿಂದ ಬರುವ ಸಲಹೆ, ಸೂಚನೆಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ಮೆರವಣಿಗೆ, ಮೆರವಣಿಗೆಯ ಮಾರ್ಗಕ್ಕೆ ಎಲ್ಲರೂ ಸಹಕಾರ ನೀಡಬೇಕು. ಹಬ್ಬದ ವೇಳೆ ಅನಾನುಕೂಲ, ಅಚಾತುರ್ಯ ನಡೆಯದಂತೆ ನೋಡಿಕೊಳ್ಳಲಾಗುವುದು. ಎಲ್ಲಿಯೂ ಸಂಚಾರ ದಟ್ಟಣೆಯಾಗದಂತೆ ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರಸ್ತೆಗಳ ನಡುವೆ ಗಣೇಶ ಮೂರ್ತಿಗಳನ್ನಿಡುವುದನ್ನು ನಿಯಂತ್ರಿಸಿ ಸೂಕ್ತವಾದ ಜಾಗವನ್ನು ಗುರುತಿಸಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು. ಇದರಿಂದ ನಾಗರೀಕರಿಗೆ ಅನುಕೂಲವಾಗಲಿದೆ. ಕಾನೂನು ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಧಕ್ಕೆಯಾಗದಂತೆ ಸಂಭ್ರಮದಿಂದ, ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸೋಣ ಎಂದು‌ ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್, ರಮಣ ಗುಪ್ತಾ, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್, ಬೆಸ್ಕಾಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಇತರ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಗಣೇಶ ಪ್ರತಿಷ್ಠಾನದ ಆಯೋಜಕರು, ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗಣೇಶ ಪ್ರತಿಷ್ಠಾನದ ಆಯೋಜಕರಿಂದ ಸಭೆಯಲ್ಲಿ ಬಂದಂತಹ ಪ್ರಮುಖ ಸಲಹೆಗಳು:

  • ಗಣಪತಿ ವಿಸರ್ಜನೆ ಮಾಡಲು ಸೂಕ್ತವಾದ ಸ್ಥಳ ನಿಗಧಿಪಡಿಸಿ, ನಿಮಜ್ಜನಕ್ಕೆ ಅವಕಾಶ ಮಾಡಿಕೊಡಲು ಮನವಿ.
  • ಸೂಕ್ಷ್ಮ ಪ್ರದೇಶಗಳಲ್ಲಿ ಸರಿಯಾದ ಪೊಲೀಸ್ ಭದ್ರತೆ ನೀಡಲು ಮನವಿ.
  • ಧಾರ್ಮಿಕ ಆಚರಣೆಗಳು ನಡೆಸುವಾಗ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮನವಿ
  • ಪಿಒಪಿ ಗಣೇಶ ಮೂರ್ತಿಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು.
  • ಏಕ ಗವಾಕ್ಷಿ ಪದ್ದತಿಯನ್ನು ಸರಿಯಾಗಿ ಜಾರಿಗೊಳಿಸಬೇಕು.
  • ಗಣೇಶ ನಿಮಜ್ಜನದ ಮೆರವಣಿಗೆಯ ವೇಳೆ ಸಂಚಾರದಟ್ಟಣೆಯಾಗದಂತೆ ಕ್ರಮವಹಿಸಲು ಮನವಿ.
  • ಗಣೇಶ ನಿಮಜ್ಜನದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿಕೊಡಲು ಮನವಿ.
  • ಗಣೇಶ ಪ್ರತಿಷ್ಠಾಪನೆಯ ಸ್ಥಳದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಲು ಅನುಮತಿ ನೀಡಲು ಮನವಿ.
  • ಮೊಬೈಲ್ ಟ್ಯಾಂಕರ್‌ಗಳನ್ನು ಹೆಚ್ಚಾಗಿ ನಿಯೋಜನೆ ಮಾಡಲು ಮನವಿ.
  • ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಬೆಸ್ಕಾಂ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಂಡು ಯಾವುದೇ ವಿದ್ಯುತ್ ಅವಘಡ ನಡೆಯದಂತೆ ನೋಡಿಕೊಳ್ಳಬೇಕು.
  • ಹೆಚ್ಚು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು.
  • ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡುವ ವೇಳೆ ಸಾಕಷ್ಟು ಗಣೇಶ ಮೂರ್ತಿಗಳನ್ನು ರಸ್ತೆ ಬದಿಯೇ ಇಟ್ಟು ಹೋಗುತ್ತಾರೆ. ಅದನ್ನು ತಪ್ಪಿಸಬೇಕು.
  • ಮೆರವಣಿಗೆ ಹೋಗುವ ರಸ್ತೆಗಳನ್ನು ಸರಿಯಾಗಿ ದುರಸ್ತಿಪಡಿಸಿಕೊಡಲು ಮನವಿ.

ಇದನ್ನೂ ಓದಿ: ಕಾರವಾರದಲ್ಲಿ ಮಾಘ ಚತುರ್ಥಿ ಸಂಭ್ರಮ: ಚತುರ್ಥಿಯಂತೆ ಗಣಪತಿ ಪ್ರತಿಷ್ಠಾಪಿಸಿ ಸಂಭ್ರಮಾಚರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.