ETV Bharat / state

ಡೆಂಘೀ ಭೀತಿ: ಸಮಗ್ರ ಮೈಕ್ರೋ ಪ್ಲಾನ್ ಮೂಲಕ ರೋಗ ನಿಯಂತ್ರಣಕ್ಕೆ ಬಿಬಿಎಂಪಿ ಒತ್ತು - Dengue Threat - DENGUE THREAT

ಸಮಗ್ರ ಮೈಕ್ರೋ ಪ್ಲಾನ್ ಮೂಲಕ ಡೆಂಘೀ ನಿಯಂತ್ರಣಕ್ಕೆ ಸೂಚನೆ ನೀಡಿರುವ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ರೋಗ ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದಿದ್ದಾರೆ.

DENGUE THREAT
ಜಾಗೃತಿ ಮೂಡಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು (ETV Bharat)
author img

By ETV Bharat Karnataka Team

Published : Jun 29, 2024, 7:34 AM IST

ಬೆಂಗಳೂರು: ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು ಅದರ ಪ್ರಕಾರವೇ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

BBMP CHIEF COMMISSIONER TUSHAR GIRINATH VISITING HOME ON ACCOUNT OF DENGUE DRY DAY
ಜಾಗೃತಿ ಮೂಡಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು (ETV Bharat)

ಪಾಲಿಕೆ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ವಲಯವಾರು ಡ್ರೈ ಡೇ ನಡೆಸಲಾಗುತ್ತಿದ್ದು, ಅದರ ಅಂಗವಾಗಿ ಪೂರ್ವ ವಲಯ ಸಿವಿ ರಾಮನ್ ನಗರದ ಜಿಎಂ ಪಾಳ್ಯ ಹಾಗೂ ನ್ಯೂ ತಿಪ್ಪಸಂದ್ರ ವ್ಯಾಪ್ತಿಯಲ್ಲಿ ಮನೆ-ಮನೆಗೆ ಭೇಟಿ ನೀಡಿ ನಾಗರಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಈಡೀಸ್ ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ರೋಗ ಹರಡುತ್ತದೆ. ಆದ್ದರಿಂದ ನೀರಿನ ಸಂಪ್, ಡ್ರಮ್, ಕೊಳಾಯಿ ಬಳಿ, ಹೂವಿನ ಕುಂಡ ಸೇರಿದಂತೆ ಇನ್ನಿತರ ಕಡೆ ಪರಿಶೀಲಿಸಿ ವಾರಕ್ಕೊಮ್ಮೆ ಎಲ್ಲ ಕಡೆ ನೀರನ್ನು ಹೊರ ಹಾಕಿ ಒಣಗಿಸಿ ಮತ್ತೆ ಶುದ್ಧ ನೀರು ಸಂಗ್ರಹಿಸಕೊಳ್ಳಬೇಕು. ವಾರಕ್ಕಿಂತ ಹೆಚ್ಚು ದಿನಗಳು ಒಂದೇ ನೀರು ಸಂಗ್ರಹವಾಗಿದ್ದರೆ ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳು ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ವಾರಕ್ಕೊಮ್ಮೆ ತಪ್ಪದೇ ಹಳೆ ನೀರು ತೆಗೆದು ಹೊಸ ನೀರು ತುಂಬಿಸಿಕೊಳ್ಳಲು ನಾಗರಿಕರಲ್ಲಿ ಮನವಿ ಮಾಡಿದರು.

ಡೆಂಘೀ ಹರಡುವ ಬಗ್ಗೆ ಆಶಾ ಕಾರ್ಯಕರ್ತೆಯರು ಮನೆ-ಮನೆ ಭೇಟಿ ನೀಡುವ ವೇಳೆ ಬಿತ್ತಿಪತ್ರಗಳನ್ನು ವಿತರಿಸಿದರೆ ಲಾರ್ವಾ ಉತ್ಪತ್ತಿಯಾಗುವುದನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಜೊತೆ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರಿಸಿರುವ ಕಡೆ ಔಷಧ ಸಿಂಪಡಣೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಾಣವನ್ನು ನಿಯಂತ್ರಿಸ ಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಡೆಂಘೀ ತಡೆಗಟ್ಟುವ ಸಲುವಾಗಿ ವಲಯವಾರು ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿರುವ ಬಗ್ಗೆ ಸಮಗ್ರ ವರದಿಯನ್ನು ಫ್ರಿಸ್ಮ್-ಹೆಚ್ ತಂತ್ರಾಂಶದಲ್ಲಿ ಆಯಾ ದಿನವೇ ನಮೂದಿಸಬೇಕು ಎಂದು ಸೂಚಿಸಿದರು.

ಧ್ವನಿವರ್ಧಕಗಳ ಮೂಲಕ ಜಾಗೃತಿ: ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಿರುವ ಪ್ರದೇಶದಲ್ಲಿ ಆಟೋಗಳ ಮೂಲಕ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಡೆಂಘೀ ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮುಖ್ಯ ಆರೋಗ್ಯಾಧಿಕಾರಿ ಡಾ. ಸೈಯದ್ ಸಿರಾಜುದ್ದೀನ್ ಮದನಿ, ವಲಯ ಆರೋಗ್ಯಾಧಿಕಾರಿ ಡಾ. ಭಾಗ್ಯಲಕ್ಷ್ಮೀ, ಆರೋಗ್ಯ ವೈದ್ಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಲಯ ಆಯುಕ್ತರ ನೇತೃತ್ವದಲ್ಲಿ ಡ್ರೈ ಡೇ ಕಾರ್ಯಾಚರಣೆ: ಶುಕ್ರವಾರ ಪಾಲಿಕೆ ವ್ಯಾಪ್ತಿಯ ಎಂಟೂ ವಲಯಗಳಲ್ಲಿ ವಲಯ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಡ್ರೈ ಡೇ ಕಾರ್ಯಾಚರಣೆಯ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಕೂಡಾ ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಡ್ರೈ ಡೇ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಯಲಹಂಕ ವಲಯ ವಲಯ ಆಯುಕ್ತರು ಶಾಲೆಗೆ ಭೇಟಿ ನೀಡಿ, ನಿಮ್ಮ ಮನೆಯಲ್ಲಿ ವಾರಕ್ಕೊಮ್ಮೆ ನೀರು ಸ್ವಚ್ಛಮಾಡುವ, ಮನೆಗಳ ಸುತ್ತಲು ನೀರು ನಿಲ್ಲದಂತೆ ನೋಡಿಕೊಳ್ಳುವ, ಅಕ್ಕ- ಪಕ್ಕದ ಮನೆಯವರಿಗೆ ಡೆಂಘೀ ಹರಡುವಿಕೆಯ ಬಗ್ಗೆ ತಿಳುವಳಿಕೆ ಮೂಡಿಸಲು ವಿದ್ಯಾರ್ಥಿಗಳಿಗೆ ತಿಳಿ ಹೇಳಲಾಯಿತು.

ಇದನ್ನೂ ಓದಿ: ಡೆಂಘಿ, ಚಿಕನ್ ಗುನ್ಯಾಕ್ಕೆ ನಲುಗಿದ ದಾವಣಗೆರೆ: ಈ ಸುರಕ್ಷಿತ ಕ್ರಮಗಳನ್ನು ಪಾಲಿಸಿ - Dengue Chikungunya Cases

ETV Bharat Logo

Copyright © 2025 Ushodaya Enterprises Pvt. Ltd., All Rights Reserved.