ಬೆಂಗಳೂರು: ಭಾರೀ ಗಾತ್ರದ ಫ್ಲೆಕ್ಸ್ ಮುರಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಈ ಘಟನೆ ನಡೆದ ಸ್ಥಳ ನಮ್ಮ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸ್ಪಷ್ಟನೆ ನೀಡಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತೆರವುಗೊಳಿಸಲಾಗುತ್ತಿದೆ. ಜೊತೆಗೆ, ಎಫ್ಐಆರ್ ದಾಖಲಿಸಿ, ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ವಿಜಯಪುರ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಚಹಾ ಕುಡಿಯಲು ಹೋಗಿ ಕಾರ್ಮಿಕರು ಬಚಾವ್ - Boiler Blast