ಬೆಂಗಳೂರು: ಮಳೆ ಅವಾಂತರಗಳನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪೂರ್ವಸಿದ್ಧತಾ ಯೋಜನೆಗಳನ್ನು ರೂಪಿಸಿಕೊಳ್ಳುತ್ತಿದೆ. ರಾಜಧಾನಿಯಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮಳೆಗಾಲದ ಆರಂಭದಲ್ಲಿ ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗಿದ್ದವು. ನಗರದ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿ ಜನರು ಸಂಕಷ್ಟ ಅನುಭವಿಸಿದ್ದರು. 500ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದವು.
ರಾಜಕಾಲುವೆಗಳ ನೀರಿನ ಮಟ್ಟವನ್ನು ಗಮನಿಸಲು ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ. ಕೆ.ಆರ್.ವೃತ್ತ, ಶಿವಾನಂದ ಸರ್ಕಲ್ ಸಮೀಪದ ಅಂಡರ್ ಪಾಸ್ ಹಾಗೂ ಮೆಜೆಸ್ಟಿಕ್ ಸುತ್ತಮುತ್ತಲಿನ ಬಹುತೇಕ ಅಂಡರ್ ಪಾಸ್ಗಳಲ್ಲಿ ನೀರು ನಿಂತಿತ್ತು. ಇಂತಹ ಅಂಡರ್ ಪಾಸ್ಗಳನ್ನು ಗುರುತಿಸಿರುವ ಪಾಲಿಕೆ ದುರಸ್ತಿ ಕಾರ್ಯಕ್ಕೆ ಮುಂದಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮುಂಗಾರು ಅಬ್ಬರ; ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ - KARNATAKA RAIN FORECAST