ETV Bharat / state

ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಬಿಬಿಎಂಪಿ ಚಾಲನೆ - FOOD FOR STREET DOGS

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಪ್ರಾಯೋಗಿಕವಾಗಿ ಬೆಂಗಳೂರಲ್ಲಿ ಚಾಲನೆ ನೀಡಲಾಗಿದೆ.

ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಬಿಬಿಎಂಪಿ ಚಾಲನೆ
ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಬಿಬಿಎಂಪಿ ಚಾಲನೆ (ETV Bharat)
author img

By ETV Bharat Karnataka Team

Published : Oct 17, 2024, 5:13 PM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಯಶಸ್ವಿಯಾದರೆ ಎಲ್ಲಾ ಕಡೆ ಅನುಷ್ಠಾನಗೊಳಿಸಲಾಗುವುದು ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದರು.

ಬಿಬಿಎಂಪಿಯ ಪಶುಸಂಗೋಪನಾ ವಿಭಾಗದ ವತಿಯಿಂದ ಎಲ್ಲಾ ವಲಯಗಳ ಆಯ್ದ ಸ್ಥಳಗಳಲ್ಲಿ ಗುರುವಾರ ಶ್ವಾನ ಮಹೋತ್ಸವ (ಕುಕುರ್ ತಿಹಾರ್) ಆಚರಿಸಲಾಗುತ್ತಿದೆ. ಈ ಅಂಗವಾಗಿ ಪಾಲಿಕೆ ಕೇಂದ್ರ ಕಚೇರಿಯ ಡಾ.ರಾಜ್ ಕುಮಾರ್ ಗಾಜಿನ ಮನೆಯ ಬಳಿ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಸುರಳ್ಕರ್ ವಿಕಾಸ್ ಕಿಶೋರ್ ಮಾತನಾಡಿ, ಸಹಬಾಳ್ವೆ ಹಾಗೂ ಒನ್ ಹೆಲ್ತ್ ಭಾಗವಾಗಿ ಬೀದಿ ನಾಯಿಗಳಿಗೆ ಆಹಾರ ನೀಡುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು.

ಈ ಯೋಜನೆಯಡಿ ಪೌರಕಾರ್ಮಿಕರು, ಆರೋಗ್ಯ ಅಧಿಕಾರಿಗಳು, ಪಶುಸಂಗೋಪನೆ ಅಧಿಕಾರಿಗಳು, ಪ್ರಾಣಿ ಪ್ರಿಯರು, ಪ್ರಾಣಿ ಪಾಲಕರು ಮತ್ತು ಆಸಕ್ತ ನಾಗರಿಕರು ಒಟ್ಟಾಗಿ ಹೋಟೆಲ್, ರೆಸ್ಟೋರೆಂಟ್​​ಗಳಿಂದ ಬೀದಿ ನಾಯಿಗಳಿಗೆ ಆಹಾರ ನೀಡುವ ಕೆಲಸ ಮಾಡಲಿದ್ದಾರೆ. ನಾಯಿಗಳಿಗೆ ಆಹಾರ ದೊರಕದ ಪ್ರದೇಶಗಳಲ್ಲಿ ದಿನಕ್ಕೆ ಒಂದು ಬಾರಿ ಆಹಾರ ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಬಿಬಿಎಂಪಿ ಚಾಲನೆ
ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಬಿಬಿಎಂಪಿ ಚಾಲನೆ (ETV Bharat)

ಪಾಲಿಕೆಯ 8 ವಲಯಗಳಲ್ಲಿ ಗುರುತಿಸಿರುವ ಆಹಾರ ನೀಡುವ ಸ್ಥಳಗಳಲ್ಲಿಯೇ ಪ್ರತಿನಿತ್ಯ ಬೀದಿ ನಾಯಿಗಳಿಗೆ ಆಹಾರ ನೀಡಲಾಗುವುದು. ಸ್ಥಳದಲ್ಲಿ ಬೌಲ್, ನೀರು ಹಾಗೂ ಆಹಾರ ನೀಡುವ ಸ್ಥಳ ಎಂಬ ನಾಮಫಲಕದ ವ್ಯವಸ್ಥೆ ಮಾಡಲಾಗಿರುತ್ತದೆ. ಒಂದು ತಿಂಗಳ ಕಾಲ ಇದನ್ನು ಪ್ರಾಯೋಗಿಕವಾಗಿ ಪರಿಶೀಲಿಸಲಾಗುವುದು. ಈ ವೇಳೆ ಸಾರ್ವಜನಿಕರ ಸ್ಪಂದನೆ, ಆಹಾರ ನೀಡುವ ಸ್ಥಳ, ಸಮಯ, ಸ್ಥಳೀಯ ಪ್ರದೇಶಗಳಲ್ಲಿ ಬರುವ ಸಲಹೆ - ಸೂಚನೆಗಳು ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಲಾಗುವುದು. ಏನಾದರು ನ್ಯೂನ್ಯತೆಗಳಿದ್ದರೆ ಅದನ್ನು ಸರಿಪಡಿಸಿಕೊಂಡು ಪಾಲಿಕೆಯ ಎಲ್ಲಾ ಕಡೆ ಅನುಷ್ಠಾನಕ್ಕೆ ತರಲು ಸೂಕ್ತ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಪಾಲಿಕೆ ವ್ಯಾಪ್ತಿಯ ಸ್ಥಳೀಯ ಹೋಟೆಲ್ ಮತ್ತು ರೆಸ್ಟೋರೆಂಟ್​ಳಲ್ಲಿ ಉಳಿಯುವ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವ ಕುರಿತು ಮಾಲೀಕರ ಜೊತೆ ಚರ್ಚಿಸಲಾಗಿದ್ದು, ಅದಕ್ಕೆ ಉತ್ತಮ ರೀತಿಯಲ್ಲಿ ಸ್ಪಂದನೆ ಸಿಕ್ಕಿದೆ. ಆರೋಗ್ಯಕರ ಆಹಾರವನ್ನು ಒದಗಿಸಲು ಆಯಾ ಪ್ರದೇಶಗಳಲ್ಲಿನ ಹೋಟೆಲ್​​ಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

2.70 ಲಕ್ಷಕ್ಕೂ ಹೆಚ್ಚು ಬೀದಿ ನಾಯಿ: ಪಾಲಿಕೆ ವ್ಯಾಪ್ತಿಯಲ್ಲಿ 2.70 ಲಕ್ಷಕ್ಕೂ ಹೆಚ್ಚು ಬೀದಿ ನಾಯಿಗಳಿವೆ. ಬೀದಿ ನಾಯಿಗಳ ದಾಳಿಯನ್ನು ತಡೆಯಬೇಕಿದೆ. ಈ ಬಗ್ಗೆ ಪಶು ವೈದ್ಯರು, ಪರಿಣಿತ ತಜ್ಞರು, ಪ್ರಾಣಿ ಪ್ರಿಯ ಸ್ವಯಂಸೇವಕರು ಬಳಿ ಚರ್ಚೆ ನಡೆಸಿದಾಗ ಬೀದಿ ನಾಯಿಗಳಿಗೆ ಆಹಾರ ಸರಿಯಾಗಿ ಸಿಗದಿರುವ ಪರಿಣಾಮ ಕಚ್ಚುವ ಹಾಗೂ ಉದ್ರೇಕಗೊಳ್ಳುವ ಘಟನೆಗಳು ನಡೆಯುತ್ತಿವೆ ಎಂಬುದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಬೀದಿ ನಾಯಿಗಳಿಗೆ ಆಹಾರ ಸಿಗುವಂತಾಗಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಾಲಿಕೆಯ ಪಶಸುಸಂಗೋಪನಾವಿಭಾಗದಿಂದ ಒಟ್ಟು 8 ಕಡೆ ಶ್ವಾನ ಮಹೋತ್ಸವ ಆಚರಿಸುವ ಮೂಲಕ ಬೀದಿ ಬದಿ ನಾಯಿಗಳಿಗೆ ಆಹಾರ ಸಿಗುವಂತೆ ಮಾಡಲಾಗಿದೆ. ಸಮುದಾಯದ ನಾಯಿಗಳಿಗೆ ಆಹಾರ ನೀಡಲು ಪಾಲಿಕೆ ಜೊತೆ ಕೈ ಜೋಡಿಸಲು ಸ್ಥಳೀಯ ನಿವಾಸಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಲಾಗುತ್ತಿದೆ. ಪ್ರಾಣಿ ಕಲ್ಯಾಣ ಯೋಜನೆಗಳಲ್ಲಿ ಭಾಗಿಯಾಗುವ ಸಲುವಾಗಿ ನೋಂದಣಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಪೈಕಿ 200ಕ್ಕೂ ಹೆಚ್ಚು ಜನರು ನೋಂದಣಿ ಮಾಡಿಕೊಂಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಶೀಘ್ರ ಸಹಬಾಳ್ವೆ ಚಾಂಪಿಯನ್ ಲೊಕ್ಯಾಲಿಟೀಸ್ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಈ ವೇಳೆ ಪಶುಸಂಗೋಪನಾ ವಿಭಾಗದ ಜಂಟಿ ನಿರ್ದೇಶಕ ಡಾ.ಚಂದ್ರಯ್ಯ, ಸಹಾಯಕ ನಿರ್ದೇಶಕ ಡಾ.ಮಲ್ಲಪ್ಪ ಬಜಂತ್ರಿ, ಸಹವರ್ತೀನ್, ವಾಟರ್ ಫಾರ್ ವಾಯ್ಸ್ ಲೆಸ್ ಎನ್.ಜಿ.ಒ ಸಂಸ್ಥೆಯ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬಿಬಿಎಂಪಿಯಿಂದ ಆಹಾರ ನೀಡುವ ಸ್ಥಳಗಳ ವಿವರ:

  • ಪೂರ್ವ ವಲಯ: ಪಾಲಿಕೆ ಕೇಂದ್ರ ಕಚೇರಿ, ಎನ್.ಆರ್ ಚೌಕ, ಹಡ್ಸನ್ ವೃತ್ತ
  • ಮಹದೇವಪುರ ವಲಯ: ಸದಾಮಂಗಲ ರಸ್ತೆಯ ಗ್ರಾಮದೇವತೆ ದೇವಸ್ಥಾನ, ಹೂಡಿ
  • ಬೊಮ್ಮನಹಳ್ಳಿ ವಲಯ: ಗುಬ್ಬಲಾಲ ಮುಖ್ಯ ರಸ್ತೆ, ಕೋಣನಕುಂಟೆ, ಸುಬ್ರಹ್ಮಣ್ಯಪುರ, ವಸಂತಪುರದ ಆಯ್ದ ಸ್ಥಳಗಳು
  • ಆರ್.ಆರ್ ನಗರ ವಲಯ: ಬಿಸಿಎಂಸಿ ಲೇಔಟ್, ಆರ್.ಆರ್ ನಗರ
  • ದಾಸರಹಳ್ಳಿ ವಲಯ: ಬಾಗಲಗುಂಟೆ, ಮಂಜುನಾಥ ನಗರ ಮುಖ್ಯ ರಸ್ತೆ
  • ದಕ್ಷಿಣ ವಲಯ: ಸಿದ್ದಾಪುರ ವಾರ್ಡ್ ಗುಟ್ಟೆಪಾಳ್ಯ
  • ಯಲಹಂಕ ವಲಯ: ಟೆಲಿಕಾಂ ಲೇಔಟ್ ಜಕ್ಕೂರೂ
  • ಪಶ್ಚಿಮ ವಲಯ: ಗಾಯತ್ರಿನಗರದ ಬಹು ಸ್ಥಳಗಳು

ಇದನ್ನೂ ಓದಿ: ಭಾರತದಲ್ಲಿ ವಿದೇಶಿಗರು ಹುಡುಕುವ ಟಾಪ್ 10 ಪ್ರವಾಸಿ ತಾಣಗಳಿವು!: ಇದರಲ್ಲಿವೆ ಕರ್ನಾಟಕದ 3 ಸ್ಥಳಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.