ETV Bharat / state

ಮನುಷ್ಯರ ಮೇಲೆ ದಾಳಿ ತಡೆಯಲು ಬಿಬಿಎಂಪಿಯಿಂದ ಸಕಲ ಸಿದ್ಧತೆ - STREET DOGS - STREET DOGS

ಬೆಂಗಳೂರು ನಗರದಲ್ಲಿ ಸಾರ್ವಜನಿಕರ ಮೇಲೆ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದು ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಇದರ ನಿಯಂತ್ರಣಕ್ಕೆ ಬಿಬಿಎಂಪಿ ಹೊಸ ಸಿದ್ಧತೆಯನ್ನು ನಡೆಸಿದೆ.

STREET DOGS
ಬೀದಿ ನಾಯಿಗಳು (IANS)
author img

By ETV Bharat Karnataka Team

Published : Sep 29, 2024, 6:02 PM IST

ಬೆಂಗಳೂರು : ನಗರದಲ್ಲಿ ಬೀದಿ ನಾಯಿಗಳು ಸಾರ್ವಜನಿಕರ ಮೇಲೆ ದಾಳಿ ಮಾಡುವ ಪ್ರಕರಣಗಳು ಹೆಚ್ಚಾಗಿದ್ದು, ಇದರ ನಿಯಂತ್ರಣಕ್ಕೆ ಬಿಬಿಎಂಪಿ ಹೊಸ ಸಿದ್ಧತೆ ನಡೆಸಿದೆ.

ಈ ಕುರಿತು ಬಿಬಿಎಂಪಿ ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಮಾತನಾಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಪಾಲಿಕೆಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ. ಈ ಮೂಲಕ ಬೀದಿ ನಾಯಿಗಳು ಮನುಷ್ಯರ ಮೇಲೆ ದಾಳಿ ನಡೆಸುವುದನ್ನು ನಿಯಂತ್ರಿಸಬಹುದು ಎಂದಿದ್ದಾರೆ.

ನಗರದಲ್ಲಿ ಅನೇಕ ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರವೂ ಸಹ ಸಿಗದಿರುವುದು ಪಾಲಿಕೆಯ ಗಮನಕ್ಕೆ ಬಂದಿದ್ದು, ಇದರಿಂದ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಬೀದಿ ನಾಯಿಗಳು ಸಾರ್ವಜನಿಕರಿಗೆ ಕಚ್ಚುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಬೇಕಿದೆ. ಆದ್ದರಿಂದ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡಲು ಪಾಲಿಕೆ ಪ್ರಾಣಿ ಪಾಲಕರು, ಪೌರಕಾರ್ಮಿಕರು, ಹೋಟೆಲ್ ಮಾಲೀಕರು, ಆರೋಗ್ಯ ವಿಭಾಗದ ಸಿಬ್ಬಂದಿ ಹಾಗೂ ಇತರ ಆಸಕ್ತರೊಂದಿಗೆ ಸಮನ್ವಯ ಸಾಧಿಸಿ ಇದನ್ನು ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಾಣಿಗಳಿಗೆ ಆಹಾರ ನೀಡುವ ಪ್ರಾಣಿ ಪ್ರಿಯರ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ನಂತರ ಪೌರ ಕಾರ್ಮಿಕರು ಮತ್ತು ಖಾಸಗಿ ಹೋಟೆಲ್ ಮಾಲೀಕರನ್ನು ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಿ ಆಹಾರ ನೀಡುವ ಸ್ಥಳಗಳನ್ನು ಗುರುತಿಸಿ, ಬೀದಿ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡಲಾಗುವುದು. ಅದಾದ ಬಳಿಕ ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಆಯ್ದ ಸ್ಥಳಗಳಲ್ಲಿ ಅನುಷ್ಠಾನಗೊಳಿಸಿ ಎಲ್ಲಾ ಪಾಲುದಾರರ ಪ್ರತಿಕ್ರಿಯೆಯನ್ನು ಸಂಗ್ರಹಿಸಲಾಗುವುದು. ಯೋಜನೆ ಯಶಸ್ವಿಯಾದಲ್ಲಿ ಪಾಲಿಕೆಯ ಎಲ್ಲಾ ವಾರ್ಡ್​ಗಳಲ್ಲಿ ಈ ಅಭಿಯಾನವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಮುದಾಯದ ಪ್ರಾಣಿಗಳಿಗೆ ಉತ್ತಮ ಸಹಾಯ ಮಾಡಲು ಕೇರ್‌ಟೇಕರ್‌ಗಳನ್ನು ಬಲಪಡಿಸುವುದರ ಜೊತೆಗೆ ಪ್ರಾಣಿಗಳ ಸಂರಕ್ಷಣೆ ಕಾರ್ಯಾಚರಣೆ ಹಾಗೂ ಶಸ್ತ್ರಚಿಕಿತ್ಸಾ ನಂತರದ ಆರೈಕೆ, ವೈದ್ಯಕೀಯ ಮೇಲ್ವಿಚಾರಣೆಗೆ ಅಗತ್ಯವಿರುವ ಸಂದರ್ಭಗಳಲ್ಲಿ ಪ್ರತ್ಯೇಕ ವಲಯಗಳಲ್ಲಿ ರಕ್ಷಣೆ ಮತ್ತು ಚೇತರಿಸಿಕೊಳ್ಳುವಿಕೆಯನ್ನು ಬೆಂಬಲಿಸುವ ಸಾಮರ್ಥ್ಯವನ್ನು ಪಾಲಿಕೆ ನಿರ್ಮಿಸುತ್ತಿದೆ. ಈ ಕುರಿತು ವಿವರವಾದ ಯೋಜನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ನಾಯಿಗಳಿಗೆ ಆಹಾರ ನೀಡುತ್ತಿರುವ ಪ್ರಾಣಿ ಪಾಲಕರು, ಪಾಲಿಕೆ ಪಶುಸಂಗೋಪನಾ ಇಲಾಖೆಯಿಂದ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಪಶುಸಂಗೋಪನೆ ವಿಭಾಗದ ಸಾಮಾಜಿಕ ಜಾಲತಾಣದ ಬಿಬಿಎಂಪಿ ಪಶು ಸಂಗೋಪನೆ ಪುಟಗಳಲ್ಲಿ ನೋಂದಣಿ ಮಾಡಿಕೊಳ್ಳುವ ಲಿಂಕ್‌ನ್ನು ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆಯನ್ನು ಯಶಸ್ವಿಗೊಳಿಸಲು ಪಾಲಿಕೆ ಜತೆ ಕೈಜೋಡಿಸುವಂತೆ ಮನವಿ ಮಾಡಿದರು.

ಪ್ರಾಣಿ ಪಾಲಕರ ನೋಂದಣಿ ಕಡ್ಡಾಯವಾಗಿರುವುದಿಲ್ಲ: ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಪಾಲಕರ ನೋಂದಣಿಯು 2ನೇ ಅಕ್ಟೋಬರ್ 2024 ರಿಂದ ಪ್ರಾರಂಭವಾಗಲಿದ್ದು, 31ನೇ ಅಕ್ಟೋಬರ್ 2024ರ ವರೆಗೆ ನೋಂದಣಿಯಾಗಲು ಅವಕಾಶವಿರುತ್ತದೆ. ಪ್ರಾಣಿ ಪಾಲಕರ ನೋಂದಣಿ ಕಡ್ಡಾಯವಾಗಿರುವುದಿಲ್ಲ. ಈ ನೋಂದಣಿಯು ಅಭಿಯಾನವನ್ನು ಯೋಜಿಸಲು ಮತ್ತು ಅದನ್ನು ಸಮರ್ಥನೀಯವಾಗಿ ಡೇಟಾಬೇಸ್ ರಚಿಸುವ ದೃಷ್ಟಿಯಿಂದ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ ಎಂದರು.

ಬೀದಿ ನಾಯಿಗಳಿಗೆ ಆಹಾರ ನೀಡುವ ಅಭಿಯಾನದ ಮೂಲಕ, ನಾಗರೀಕರಲ್ಲಿ ಸಹಾನುಭೂತಿಯ ಅರ್ಥವನ್ನು ಹಾಗೂ ಪ್ರಾಣಿಗಳೊಂದಿಗಿನ ಸಹಬಾಳ್ವೆಯ ಅನುಕೂಲವನ್ನು ಮನವರಿಕೆ ಮಾಡಲು ಪಾಲಿಕೆ ಜೊತೆ ಕೈ ಜೋಡಿಸಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಸ್ಥಳೀಯರು ತಮ್ಮ ಪ್ರದೇಶದಲ್ಲಿ ಸಮುದಾಯದ ಪ್ರಾಣಿಗಳ ಆರೈಕೆಯ ಸಾಮಾಜಿಕ ಕಾಳಜಿಯ ಕಾರ್ಯವನ್ನು ಕೈಗೊಳ್ಳಲು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಪಶುಸಂಗೋಪನಾ ವಿಭಾಗದಿಂದ ಸಾಕಷ್ಟು ಉಪಕ್ರಮ: ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಪಾಲಿಕೆಯ ಪಶುಸಂಗೋಪನಾ ವಿಭಾಗದಿಂದ ಸಾಕಷ್ಟು ಉಪ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಾಗರೀಕರಿಗೆ ಅಗತ್ಯವಿರುವ ಯಾವುದೇ ಸಹಾಯಕ್ಕಾಗಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆಯಾದ 1533 ಗೆ ಸಂಪರ್ಕಿಸಬಹುದಾಗಿದೆ ಎಂದು ಸುರಳ್ಕರ್ ವಿಕಾಸ್ ಕಿಶೋರ್ ಹೇಳಿದ್ದಾರೆ.

ಇದನ್ನೂ ಓದಿ : ರಾಜಧಾನಿಯಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ: 8 ತಿಂಗಳಲ್ಲಿ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲು - Street dog bite cases

ETV Bharat Logo

Copyright © 2025 Ushodaya Enterprises Pvt. Ltd., All Rights Reserved.