ಬೆಳಗಾವಿ: ಭಾರತೀಯ ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಬೆಳಗಾವಿ ಜಿಲ್ಲೆಯ ಯೋಧ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ಇಂದು ನಡೆದಿದೆ.
ಮೂಡಲಗಿ ತಾಲೂಕಿನ ಕಲ್ಲೋಳಿಯ ಸುಭಾಷ ಖಾನಗೌಡ್ರ (24) ಮೃತಪಟ್ಟ ಯೋಧ. ಇವರು ಕಳೆದ ಐದು ವರ್ಷಗಳಿಂದ ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
![belagavi-based-navy-soldier-dies-after-bullet-injury](https://etvbharatimages.akamaized.net/etvbharat/prod-images/13-02-2025/bgm-yodha-death-news_13022025195851_1302f_1739456931_486.jpg)
2020ರಲ್ಲಿ ನೌಕಾಪಡೆಗೆ ನೇಮಕಾತಿ ಹೊಂದಿದ್ದ ಸುಭಾಷ ಅವರು ಕೇರಳದ ಕೊಚ್ಚಿಯಲ್ಲಿ ತರಬೇತಿ ಪಡೆದಿದ್ದರು. ನಂತರ ಅಂಡಮಾನ್ ಹಾಗೂ ಸದ್ಯ ಚೆನ್ನೈನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶುಕ್ರವಾರ ಕಲ್ಲೋಳಿ ಪಟ್ಟಣದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಜನಪ್ರಿಯ ರ‍್ಯಾಪರ್ ಆತ್ಮಹತ್ಯೆ; ಅಸಹಜ ಸಾವು ಪ್ರಕರಣ ದಾಖಲು