ETV Bharat / state

ಬೆಳಗಾವಿ: 200 ಪೊಲೀಸ​ರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆ ಮೇಲೆ ದಾಳಿ, 5700 ಲೀಟರ್ ಕಳ್ಳಭಟ್ಟಿ ಜಪ್ತಿ - ಪೊಲೀಸರ ಕಾರ್ಯಾಚರಣೆ

200 ಜನ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ ನಡೆಸಿ, 5700 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ.

ಕಳ್ಳಭಟ್ಟಿ ಸಾರಾಯಿ ಅಡ್ಡೆ ಮೇಲೆ ಪೊಲೀಸರ ಭರ್ಜರಿ ದಾಳಿ

author img

By ETV Bharat Karnataka Team

Published : Feb 24, 2024, 3:30 PM IST

ಕಳ್ಳಭಟ್ಟಿ ಸಾರಾಯಿ ಅಡ್ಡೆ ಮೇಲೆ ಪೊಲೀಸರ ಭರ್ಜರಿ ದಾಳಿ

ಬೆಳಗಾವಿ: ಕಳ್ಳಭಟ್ಟಿ ಸಾರಾಯಿ ಅಡ್ಡೆ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 5 ಸಾವಿರ ಲೀಟರ್​ಗೂ ಹೆಚ್ಚು ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಈ ಕಳ್ಳಭಟ್ಟಿ ಸಾರಾಯಿ ಅಡ್ಡೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ಕೈಗೊಂಡಿದ್ದರು.

ಡಿಸಿಪಿ ರೋಹನ್ ಜಗದೀಶ್​ ನೇತೃತ್ವದಲ್ಲಿ 200 ಜನ ಪೊಲೀಸ್ ಸಿಬ್ಬಂದಿಯ ತಂಡದಿಂದ ಕಾರ್ಯಾಚರಣೆ ನಡೆದಿದ್ದು, ಕಳ್ಳಭಟ್ಟಿ ಸಂಗ್ರಹಿಸಿದ್ದ ಮನೆಯ ಮೇಲೆ ದಾಳಿ ಮಾಡಲಾಗಿದೆ. ಪೊಲೀಸರು ಬರುತ್ತಿದ್ದಂತೆ ಸ್ಥಳದಿಂದ ಆರೋಪಿಗಳು ಕಾಲ್ಕಿತ್ತಿದ್ದಾರೆ. ದಾಳಿ ವೇಳೆ 200 ಲೀಟರ್ ಕಳ್ಳಭಟ್ಟಿ ಇರುವ 26 ಬ್ಯಾರಲ್, 30 ಲೀಟರ್ ಕಳ್ಳಭಟ್ಟಿ ಇರುವ 17 ಬ್ಯಾರಲ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದಾಜು 12 ಲಕ್ಷ ರೂ. ಮೌಲ್ಯದ ಕಳ್ಳಭಟ್ಟಿ ಸಾರಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಳಿ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ, "ಒಟ್ಟು 5700 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದಿದ್ದೇವೆ. ಕೆಲವು ಮನೆಗಳ ಮೇಲೂ ದಾಳಿ ಮಾಡಿ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ. ಒಂದು ವಾರದ ಹಿಂದೆ ಬಂದ ಮಾಹಿತಿ ಆಧರಿಸಿ ಇಂದು ಕಾರ್ಯಾಚರಣೆ ನಡೆಸಿದ್ದೇವೆ. ಪೊಲೀಸರು ಬಂದ ತಕ್ಷಣ ಎಲ್ಲರೂ ಓಡಿ ಹೋಗಿದ್ದಾರೆ. ಒಬ್ಬ ಆರೋಪಿ ಮಾತ್ರ ಸಿಕ್ಕಿ ಬಿದ್ದಿದ್ದಾನೆ. ಕೆಲವು ದಿನಗಳಿಂದ ಇಲ್ಲಿ ಕಳ್ಳಭಟ್ಟಿ ಸಾರಾಯಿ ದಂಧೆ ನಡೆಯುತ್ತಿದೆ. ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ" ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಣ ಭೀಕರ ದುರಂತ: ಗಂಗಾ ಸ್ನಾನಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿ, 7 ಮಕ್ಕಳು ಸೇರಿ 15 ಜನರ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.