ETV Bharat / state

ಬೆಳಗಾವಿ ಯೋಧನ ಅಂತ್ಯಕ್ರಿಯೆ; ಮೊಳಗಿದ ರವಿ ಅಮರ್ ರಹೇ ಘೋಷಣೆ - SOLDIER RAVI TALAVARA FUNERAL

ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಬೆಳಗಾವಿ ಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

SOLDIER RAVI TALAVARA FUNERAL
ಯೋಧ ರವಿ ತಳವಾರ ಅಂತಿಮ ಯಾತ್ರೆ (ETV Bharat)
author img

By ETV Bharat Karnataka Team

Published : Jan 12, 2025, 6:40 AM IST

ಬೆಳಗಾವಿ: ನಾಗಾಲ್ಯಾಂಡ್​​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಜಿಲ್ಲೆಯ ಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಸಾವಿರಾರು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಯೋಧ ರವಿ ತಳವಾರ (35) ಅವರ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮಕ್ಕೆ ಆಗಮಿಸಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಭಾರತ್ ಮಾತಾ ಕೀ ಜೈ, ರವಿ ಅಮರ್ ರಹೇ ಘೋಷಣೆಗಳು ಮೊಳಗಿದವು. ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ರವಿ ತಳವಾರ ಅವರ ಅಂತ್ಯಕ್ರಿಯೆ ನೆರವೇರಿತು.

ಎರಡು ದಿನಗಳ ಹಿಂದೆ ರಸ್ತೆ ಮಾರ್ಗವಾಗಿ ಹೊರಟಿದ್ದ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ರವಿ ಸೇರಿ ಮೂವರು ಯೋಧರು ಮೃತರಾಗಿದ್ದರು. ರವಿ ತಳವಾರ ಅವರು ನಾಗಾಲ್ಯಾಂಡ್ ರೈಫಲ್ಸ್‌ನಲ್ಲಿ ಕಳೆದ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು‌.

ಇದನ್ನೂ ಓದಿ: ಎಕೆ 56 ಗನ್, ಮದ್ದುಗುಂಡು ಸೇರಿ ಶರಣಾದ 6 ನಕ್ಸಲರ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಪೊಲೀಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.