ETV Bharat / state

ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾದ ಬೆಳಗಾವಿ ಎಸ್ಪಿ 'ಫೋನ್ ಇನ್ ಕಾರ್ಯಕ್ರಮ'

author img

By ETV Bharat Karnataka Team

Published : Feb 13, 2024, 5:14 PM IST

Updated : Feb 13, 2024, 7:52 PM IST

ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇಂದು 20ನೇ ಫೋನ್​ ಇನ್​ ಕಾರ್ಯಕ್ರಮ ನಡೆಯಿತು.

ಬೆಳಗಾವಿ ಫೋನ್ ಇನ್ ಕಾರ್ಯಕ್ರಮ
ಬೆಳಗಾವಿ ಫೋನ್ ಇನ್ ಕಾರ್ಯಕ್ರಮ
ಬೆಳಗಾವಿ ಎಸ್ಪಿ 'ಫೋನ್ ಇನ್ ಕಾರ್ಯಕ್ರಮ'

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಸಾರಾಯಿ ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರಿಗೆ ಕರೆ ಮಾಡಿ ಮನವಿ ಮಾಡಿದರು. ಮಂಗಳವಾರ ಎಸ್ಪಿ ಕಚೇರಿಯಲ್ಲಿ ನಡೆಸಿದ 20ನೇ ಫೋನ್ ಇನ್​ ಕಾರ್ಯಕ್ರಮದಲ್ಲಿ ಜಿಲ್ಲೆಯ‌ ವಿವಿಧೆಡೆಯಿಂದ ಜನರು ಕರೆ ಮಾಡಿ‌ ದೂರುಗಳನ್ನು ನೀಡಿದರು.

ಅಥಣಿಯ ವ್ಯಕ್ತಿಯೊಬ್ಬರು ಕರೆ ಮಾಡಿ, "ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶೌಚಾಲಯದ ವ್ಯವಸ್ಥೆ ಸರಿ ಇಲ್ಲ. ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಗೋಕಾಕ-ಅಥಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳು ಸಾಗಾಟ ಮಾಡುತ್ತಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ" ಎಂದು ತಿಳಿಸಿದರು.

ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ವ್ಯಕ್ತಿಯೊಬ್ಬರು, "ಜ.23ರಂದು ಆನ್‌ಲೈನ್​ನಲ್ಲಿ ಮೋಸ ಹೋಗಿ 58 ಲಕ್ಷ ರೂ. ಕಳೆದುಕೊಂಡಿದ್ದೇನೆ. ಈಗಾಗಲೇ ದೂರು ನೀಡಲಾಗಿದೆ. ಇಲ್ಲಿಯವರೆಗೂ ಹಣ ಪತ್ತೆಯಾಗಿಲ್ಲ. ನಮ್ಮ ಹಣ ಯಾವಾಗ ಸಿಗುತ್ತದೆ" ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಎಸ್ಪಿ, "ಆನ್​ಲೈನ್​ನಲ್ಲಿ ಹಣ ಕಳೆದುಕೊಂಡ ತಕ್ಷಣ ಪೊಲೀಸರಿಗೆ ದೂರು ನೀಡಬೇಕೆಂದು ಈಗಾಗಲೇ ಜಿಲ್ಲಾ ಪೊಲೀಸರು ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದಾರೆ. ನೀವು ಹಣ ಕಳೆದುಕೊಂಡು 8 ದಿನದ ಮೇಲೆ ದೂರು ನೀಡಿದ್ದೀರಿ. ಆನ್​ಲೈನ್​ನಲ್ಲಿ ಕಳೆದುಕೊಂಡ ಹಣ ಬೇರೆ ಬೇರೆ ಕಡೆ ವರ್ಗಾವಣೆಯಾಗಿರುತ್ತದೆ. ಆದಷ್ಟು ಬೇಗ ಪೊಲೀಸರು ಹಣ ಮರಳಿ ಕೊಡಿಸುವ ಪ್ರಯತ್ನ ಮಾಡುತ್ತಾರೆ" ಎಂದು ಭರವಸೆ ಕೊಟ್ಟರು.

ಆಸ್ತಿ ‌ವಿವಾದ, ಸಂಚಾರ ಸಮಸ್ಯೆ, ಶಾಲೆಯ‌ ಮುಂಭಾಗದಲ್ಲಿ ಅಕ್ರಮ ತಂಬಾಕು ವಸ್ತುಗಳ ಮಾರಾಟ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಸಾರ್ವಜನಿಕರು ದೂರು ಹೇಳಿಕೊಂಡರು. ಫೋನ್ ಕರೆಗಳನ್ನು ಸ್ವೀಕರಿಸಿ ದೂರುದಾರರಿಗೆ ಸ್ಪಂದಿಸಿ ಕ್ರಮ ಜರುಗಿಸುವ ಭರವಸೆಯನ್ನು ಎಸ್ಪಿ ನೀಡಿದ್ದಾರೆ

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಸ್ಪಿ ಡಾ.ಭೀಮಾಶಂಕರ ಗುಳೇದ, "ಬೆಳಗಾವಿ ದೊಡ್ಡ ಜಿಲ್ಲೆ. ಜಿಲ್ಲಾ ಕೇಂದ್ರಕ್ಕೆ ಬರಲು ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಹಾಗಾಗಿ, ಫೋನ್​ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು 26 ಫೋನ್ ಕರೆಗಳು ಬಂದಿವೆ. ಇದರಲ್ಲಿ 9 ಅಕ್ರಮ ಸಾರಾಯಿ ಮಾರಾಟಕ್ಕೆ ಸಂಬಂಧಿಸಿದವು. ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇನ್ನು 4 ಬೆಳಗಾವಿ ನಗರ, 2 ಬೇರೆ ಇಲಾಖೆ ಕರೆಗಳು ಬಂದಿದ್ದು, ಇವುಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗುವುದು" ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ವಿ.ಬಸರಗಿ, ಪೊಲೀಸ್ ಸಿಬ್ಬಂದಿಗಳಾದ ಶ್ರೀಶೈಲ್ ಬಿರಾದಾರ, ಸುರೇಶ ಬೇಡಗುಂಬಳ, ಲಕ್ಷ್ಮೀ ಬಿರಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಳಗಾವಿ ಜಿಲ್ಲೆ ವಿಭಜನೆಗೆ ಮುಂದಾದ ಸರ್ಕಾರ: ವರದಿ‌ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ

Last Updated : Feb 13, 2024, 7:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.