ETV Bharat / state

ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ಫಲಿತಾಂಶ ಪ್ರಕಟ: ವಿಟಿಯು ವಿಶಿಷ್ಟ ದಾಖಲೆ - VTU Result Record

author img

By ETV Bharat Karnataka Team

Published : May 30, 2024, 10:54 PM IST

ಇಂಜಿನಿಯರ್ ಪರೀಕ್ಷೆಗಳು ಮುಗಿದ 3 ಗಂಟೆಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸಿದೆ.

ವಿಟಿಯು
ವಿಟಿಯು (ETV Bharat)

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆ ಮಾಡಿದೆ. ಪರೀಕ್ಷೆ ಮುಗಿದ ಕೇವಲ ಮೂರು ಗಂಟೆಗಳಲ್ಲೇ ಫಲಿತಾಂಶ ಪ್ರಕಟಿಸಿ ಹೊಸ ದಾಖಲೆ ಬರೆದಿದೆ.

ಯುಟಿಯು ಅಡಿ ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ಕೇವಲ ಮೂರೇ ಗಂಟೆಗಳಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಣೆ ಮಾಡಿ ಗಮನ ಸೆಳೆದಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ, ಫಲಿತಾಂಶವನ್ನು ಬೇಗ ಪ್ರಕಟಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳ ವಿಭಾಗದಲ್ಲಿ ಉದ್ಯೋಗ ಹಾಗೂ ಉನ್ನತ ಶಿಕ್ಷಣದ ವಿದ್ಯಾಭ್ಯಾಸ ಮತ್ತು ಮುಂದಿನ ಭವಿಷ್ಯಕ್ಕೆ ತುಂಬಾ ಅನುಕೂಲವಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿಟಿಯು ಆಡಳಿತ, ಶೈಕ್ಷಣಿಕ, ಪರೀಕ್ಷೆ, ಸಂಶೋಧಾನಾ ವಿಭಾಗದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ತಂದು ಈ ರೀತಿ ವಿನೂತನ ಪ್ರಯೋಗ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ಫಲಿತಾಂಶ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲ ಇಂಜಿನಿಯರಿಂಗ್ ಮಹಾವಿದ್ಯಾಲಯಗಳ ಅಂತಿಮ ಸೆಮಿಸ್ಟರ್​​ನಲ್ಲಿ 42,323 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕೊನೆಯ ಪರೀಕ್ಷೆ ಇಂದು ಮೇ 30 ಗುರುವಾರ ಸಂಜೆ 5.30ಕ್ಕೆ ಮುಗಿಯಿತು. ಪರೀಕ್ಷೆ ಮುಗಿದ ಕೇವಲ ಮೂರು ಗಂಟೆ ಒಳಗಾಗಿ ಅಂದರೆ ರಾತ್ರಿ 8.30ಕ್ಕೆ ವಿಟಿಯು ಫಲಿತಾಂಶವನ್ನು ಪ್ರಕಟಣೆ ಮಾಡಿದೆ. ಜೊತೆಗೆ ವಾಟ್ಸಾಪ್ ಮೂಲಕ ಫಲಿತಾಂಶವನ್ನು ನೇರವಾಗಿ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡಿದೆ.

ಎಲ್ಲ ಸೆಮಿಸ್ಟರ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ಪದವಿಯನ್ನು ಯಶಸ್ವಿಯಾಗಿ ಮುಗಿಸಿದ ವಿದ್ಯಾರ್ಥಿಗಳು ಪ್ರೋವಿಜನಲ್ ಡಿಗ್ರಿ ಸರ್ಟಿಫಿಕೇಟ್ (ಪಿಡಿಸಿ) ಗಳನ್ನು ಜೂನ್ 3 ಸೋಮವಾರದಿಂದ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ ಎಂದು ವಿಟಿಯು ಕುಲಪತಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ: ಮತ್ತೆ ವಿದ್ಯಾರ್ಥಿನಿಯರೇ ಮೇಲುಗೈ - Second PUC Result

ETV Bharat Logo

Copyright © 2024 Ushodaya Enterprises Pvt. Ltd., All Rights Reserved.