ETV Bharat / state

ನಾಳೆ ಸುವರ್ಣಸೌಧದಲ್ಲಿ 'ಅನುಭವ ಮಂಟಪ' ತೈಲವರ್ಣ ಚಿತ್ರ ಅನಾವರಣ: ಸ್ಪೀಕರ್ ಖಾದರ್ ಜೊತೆ 'ಈಟಿವಿ ಭಾರತ' ಚಿಟ್ ಚಾಟ್ - BELAGAVI WINTER SESSION

ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ ಅನುಭವ ಮಂಟಪದ ತೈಲವರ್ಣದ ಚಿತ್ರ ಅನಾವರಣಗೊಳ್ಳಲಿದೆ. ನಮ್ಮ ದೇಶದ ಇತಿಹಾಸ, ಸಂಸ್ಕೃತಿ ಬಿಂಬಿಸುವ ಉದ್ದೇಶ ಇದರ ಹಿಂದಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.

ಸ್ಪೀಕರ್ ಯು‌.ಟಿ.ಖಾದರ್ Belagavi Session
ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಜೊತೆ ಚಿಟ್‌ಚಾಟ್ (ETV Bharat)
author img

By ETV Bharat Karnataka Team

Published : Dec 8, 2024, 4:43 PM IST

Updated : Dec 8, 2024, 5:53 PM IST

ಬೆಳಗಾವಿ: "ಇಲ್ಲಿನ ಸುವರ್ಣಸೌಧದಲ್ಲಿ ಡಿ.9ರಿಂದ 19ರವರೆಗೆ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಯಶಸ್ಸಿಗೆ ಉತ್ತರ ಕರ್ನಾಟಕ ಜೊತೆಗೆ ಇಡೀ ರಾಜ್ಯದ ಜನರ ಆಶೀರ್ವಾದ ಮತ್ತು ಸಹಕಾರ ಅತ್ಯಗತ್ಯ. ಕಲಾಪಗಳು ಸೌಹಾರ್ದಯುತ ಮತ್ತು ಶಾಂತಿಯಿಂದ ನೆರವೇರುವ ವಿಶ್ವಾಸವಿದೆ" ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಈಟಿವಿ ಭಾರತ ಜೊತೆಗೆ ಮಾತನಾಡಿದ ಖಾದರ್, "ಅಧಿವೇಶನ ಯಶಸ್ವಿಯಾಗಿ ನಡೆದು, ಎಲ್ಲರಿಗೂ ಗೌರವ ತರುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳಿಗೆ ಊಟ, ವಸತಿ, ಸಾರಿಗೆ ಸೇರಿ ಎಲ್ಲ ರೀತಿಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಈ ಬಾರಿಯ ಅಧಿವೇಶನಕ್ಕೆ ಒಟ್ಟು 8,500 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ 6,000 ಪೊಲೀಸರು, 2,500 ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ‌" ಎಂದು ತಿಳಿಸಿದರು.

ಸ್ಪೀಕರ್ ಯು‌.ಟಿ.ಖಾದರ್ ಜೊತೆ 'ಈಟಿವಿ ಭಾರತ' ಚಿಟ್ ಚಾಟ್ (ETV Bharat)

ಅನುಭವ ಮಂಟಪದ ತೈಲವರ್ಣದ ಚಿತ್ರ ಅನಾವರಣ: "ಸುವರ್ಣಸೌಧದಲ್ಲಿ ನಾಳೆ ಅನಾವರಣವಾಗುತ್ತಿರುವ ಅನುಭವ ಮಂಟಪದ ತೈಲವರ್ಣದ ಚಿತ್ರ ಕೇವಲ ಚಿತ್ರವಲ್ಲ. ಇದಕ್ಕೆ ದೊಡ್ಡ ಇತಿಹಾಸ, ಪರಂಪರೆ ಇದೆ. 12ನೇ ಶತಮಾನದಲ್ಲಿ ಅಂದಿನ ಸಾಮಾಜಿಕ ಕಾಲಘಟ್ಟದಲ್ಲೇ ವಿಶ್ವಗುರು ಬಸವಣ್ಣನವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹುಟ್ಟು ಹಾಕಿದ್ದರು. ನಮ್ಮ ದೇಶದ ಇತಿಹಾಸ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಉದ್ದೇಶದಿಂದಾಗಿ ಇಂದಿನ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಸಂದೇಶ ನೀಡಲು ಭಾವಚಿತ್ರ ಅನಾವರಣಗೊಳಿಸಲಾಗುತ್ತಿದೆ" ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಡಿಸೆಂಬರ್ 9ರಂದು ಮೊದಲ ದಿನ ಬೆಳಗ್ಗೆ 11ರಿಂದ ಅಧಿವೇಶನ ವಿದ್ಯುಕ್ತವಾಗಿ ಆರಂಭವಾಗಲಿದೆ. ಇದಕ್ಕೂ ಮೊದಲು 10.30ಕ್ಕೆ ಐತಿಹಾಸಿಕ ಅನುಭವ ಮಂಟಪ ಸ್ಮರಣೆಯ ಬೃಹತ್ ತೈಲ ವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸುವರು. ವಿಧಾನ ಪರಿಷತ್‌ ಸಭಾಪತಿಗಳು, ಉಪ ಸಭಾಪತಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವು ಗಣ್ಯರು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಹೇಳಿದರು.

ಶಾಸಕರ ಹಾಜರಾತಿ ವಿಚಾರ: ಬೆಳಗಾವಿ ಅಧಿವೇಶನದಲ್ಲಿ ಶಾಸಕರ ಹಾಜರಾತಿ ಕಡಿಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, "ಈ ಭಾಗದ ಜನರ ಭಾವನೆ ಮತ್ತು ಬೇಡಿಕೆಗಳಿಗೆ ಆದ್ಯತೆ ಕೊಡುತ್ತೇವೆ. ಈ ಸಲ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ‌ ಎನ್ನುವ ವಿಶ್ವಾಸವಿದೆ" ಎಂದರು.

ಅಧಿವೇಶನಕ್ಕೆ ₹25 ಕೋಟಿ ಖರ್ಚು: ಅಧಿವೇಶನಕ್ಕೆ ಅಂದಾಜು 25 ಕೋಟಿ ರೂ. ಖರ್ಚಾಗಲಿದೆ.‌ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ವಿಧಾನಸಭೆ ಸದಸ್ಯರಿಗೆ ಪ್ರಮಾಣವಚನ ಬೋಧನೆ ನಡೆಯಲಿದೆ. ಮಧ್ಯಾಹ್ನ ಬಿಎಸ್‌ಸಿ (ಕಲಾಪ ಸಲಹಾ ಸಮಿತಿ) ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ಅಧಿವೇಶನದ ರೂಪುರೇಷೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದರು.

ಸುವರ್ಣಸೌಧದಲ್ಲಿ ಯು.ಟಿ.ಖಾದರ್
ಸುವರ್ಣಸೌಧದಲ್ಲಿ ಯು.ಟಿ.ಖಾದರ್ (ETV Bharat)

5 ವಿಧೇಯಕಗಳ ಮೇಲೆ ಚರ್ಚೆ: ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ. ಎರಡು ಆಧ್ಯಾದೇಶದ‌ ಬದಲಿ ವಿಧೇಯಕಗಳನ್ನು ಪರ್ಯಾಲೋಚನೆಗೆ ತೆಗೆದುಕೊಳ್ಳಲಾಗುವುದು. ಅಧಿವೇಶನದಲ್ಲಿ 9 ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಪಡಿಸಲಾಗಿದೆ. ಗಮನ ಸೆಳೆಯುವ ಸೂಚನೆಗಳು, ಶೂನ್ಯ ವೇಳೆ, ನಿಲುವಳಿ ಸೂಚನೆ ನಡೆಸಲಾಗುವುದು. ಈವರೆಗೆ 3004 ಪ್ರಶ್ನೆಗಳು, 205 ಗಮನ ಸೆಳೆಯುವ ಸೂಚನೆಗಳು, 96 ನಿಯಮ 351ರ ಸೂಚನೆಗಳನ್ನು ಸ್ವೀಕರಿಸಲಾಗಿದೆ. ಜೊತೆಗೆ, 3 ಖಾಸಗಿ ವಿಧೇಯಕಗಳನ್ನೂ ಸಹ ಸ್ವೀಕರಿಸಲಾಗಿದೆ ಎಂದು ಯು.ಟಿ.ಖಾದರ್ ಹೇಳಿದರು.

ಕಲಾಪದಲ್ಲಿ ಲಿಖಿತ ಪ್ರಶ್ನೆಗಳಿಗೆ ಉತ್ತರ ಪಡೆಯುವ ಪ್ರಕ್ರಿಯೆ ಸೇರಿದಂತೆ ನಾನಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧದ ವಿಧಾನಸಭೆಯ ಮೊಗಸಾಲೆಯಲ್ಲಿ ಇರುವ ಮಾದರಿಯಲ್ಲಿಯೇ ಬೆಳಗಾವಿಯ ಸುವರ್ಣಸೌಧದಲ್ಲಿ ಈ ಬಾರಿ ಹೊಸದಾಗಿ ಸಭಾಧ್ಯಕ್ಷರ ಪೀಠ ಸಿದ್ಧಪಡಿಸಲಾಗಿದೆ ಎಂದರು.

ಸುವರ್ಣಸೌಧಕ್ಕೆ ಬರುವವರಿಗೆ ಅನುಕೂಲವಾಗಲು ಮುಖ್ಯದ್ವಾರದಿಂದ ಸೌಧದ ಕಟ್ಟಡದವರೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಕಲಾಪ ವೀಕ್ಷಣೆಗೆ ಆಗಮಿಸುವ ವಿದ್ಯಾರ್ಥಿಗಳು, ಶಿಕ್ಷಕರ ಮಾಹಿತಿಗಾಗಿ ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿನ ಛಾಯಾಚಿತ್ರಗಳ ಪ್ರದರ್ಶನಕ್ಕೆ ವ್ಯವಸ್ಥೆಯಾಗಿದೆ. ಇದಕ್ಕಾಗಿ ಮಹಾತ್ಮ ಗಾಂಧೀಜಿಯವರ ಅಪರೂಪದ ಭಾವಚಿತ್ರಗಳನ್ನು ಸಂಗ್ರಹಿಸಿ ಸುವರ್ಣಸೌಧದ ಆಯಾ ಕಡೆಗಳಲ್ಲಿ ಹಾಕಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಸೇರಿ ಮತ್ತಿತರರು ಇದ್ದರು.

ವಿಜ್ಞಾನ ಪಾರ್ಕ್ ವೀಕ್ಷಿಸಿದ ಯು.ಟಿ.ಖಾದರ್
ವಿಜ್ಞಾನ ಪಾರ್ಕ್ ವೀಕ್ಷಿಸಿದ ಯು.ಟಿ.ಖಾದರ್ (ETV Bharat)

ವಿಜ್ಞಾನ ಪಾರ್ಕ್​​ಗೆ ಮೆಚ್ಚುಗೆ: ಇದಾದ ಬಳಿಕ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಕ್ಕಳಿಗೆ ಕಲಿಕೆ ಜೊತೆ ವಿಜ್ಞಾನದ ಕುರಿತು ಮಾಹಿತಿ ನೀಡುವ ವಿಜ್ಞಾನ ‌ಪಾರ್ಕ್ ಕಾಮಗಾರಿಗಳನ್ನು ಸಭಾಧ್ಯಕ್ಷ ಯು.ಟಿ.ಖಾದರ್ ವೀಕ್ಷಿಸಿದರು. ಮಕ್ಕಳಿಗೆ ಆಟದ ಜೊತೆ ವಿಜ್ಞಾನದ‌ ಪಾಠ ಹೇಳುವ ಕಾರ್ಯದ ಕುರಿತು ಮೆಚ್ಚುಗೆ‌ ವ್ಯಕ್ತಪಡಿಸಿದರು. ಕಾಮಗಾರಿಗಳ‌ ಕುರಿತು ಜಿ.ಪಂ.ಸಿಇಒ ರಾಹುಲ ಶಿಂಧೆ ಮಾಹಿತಿ ನೀಡಿದರು.

ಇದನ್ನೂ ಓದಿ: ನಾಳೆಯಿಂದ ಬೆಳಗಾವಿ ಅಧಿವೇಶನ: ಒಳಜಗಳದಿಂದ ನಲುಗಿದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸರ್ಕಾರದ ವಿರುದ್ಧ ಮುಗಿಬೀಳುವುದೇ?

Last Updated : Dec 8, 2024, 5:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.