ETV Bharat / state

ಬೇಲೆಕೇರಿ ಅದಿರು ನಾಪತ್ತೆ ಕೇಸ್: ಶಿಕ್ಷೆ ರದ್ದು ಕೋರಿದ ಮಧ್ಯಂತರ ಮನವಿ ಕುರಿತು ದಿನಾಂತ್ಯಕ್ಕೆ ಹೈಕೋರ್ಟ್‌ ಆದೇಶ - BELEKERI ORE DISAPPEARANCE CASE

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ಆರೋಪಿಗಳಿಗೆ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದು ಕೋರಿ ಮೆಸರ್ಸ್ ಶ್ರೀ ಲಕ್ಷ್ಮಿ ವೆಂಕಟೇಶ್ವರ ಮಿನರಲ್ಸ್ ಪಾಲುದಾರ ಖಾರದಪುಡಿ ಮಹೇಶ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Karnataka High Court
ಕರ್ನಾಟಕ ಹೈಕೋರ್ಟ್​ (ETV Bharat)
author img

By ETV Bharat Karnataka Team

Published : Nov 13, 2024, 2:16 PM IST

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ವಶಪಡಿಸಿಕೊಂಡು ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ನಾಪತ್ತೆ ಮತ್ತು ರಫ್ತು ಮಾಡಿದ ಪ್ರಕರಣದಲ್ಲಿ ಶಿಕ್ಷೆ ರದ್ದು ಕೋರಿ ಆರೋಪಿಗಳು ಸಲ್ಲಿಸಿರುವ ಅರ್ಜಿಯಲ್ಲಿ ಶಿಕ್ಷೆ ಅಮಾನತಿನಲ್ಲಿಡಬೇಕು ಎಂದು ಕೋರಿರುವ ಮಧ್ಯಂತರ ಅರ್ಜಿಯ ಸಂಬಂಧ ದಿನಾಂತ್ಯಕ್ಕೆ ಆದೇಶ ಹೊರಡಿಸುವುದಾಗಿ ಹೈಕೋರ್ಟ್ ತಿಳಿಸಿದೆ.

ಅರೋಪಿಗಳಿಗೆ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದು ಕೋರಿ ಮೆಸರ್ಸ್ ಶ್ರೀ ಲಕ್ಷ್ಮಿ ವೆಂಕಟೇಶ್ವರ ಮಿನರಲ್ಸ್ ಪಾಲುದಾರ ಖಾರಪುಡಿ ಮಹೇಶ್, ಮೆಸರ್ಸ್ ಲಾಲ್ ಮಹಲ್ ಲಿಮಿಟೆಡ್ ಮತ್ತು ಅದರ ಮಾಲೀಕ ಪ್ರೇಮ್ ಚಂದ್ ಗರ್ಗ್, ಮೆಸರ್ಸ್ ಸ್ವಸ್ಥಿಕ್ ಸ್ಟೀಲ್ ಪ್ರೇವೇಟ್ ಲಿಮಿಟೆಡ್, ಮೆಸರ್ಸ್ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರವೇಟ್ ಲಿಮಿಟೆಡ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಎಲ್ಲ ಪಕ್ಷಗಾರರ ವಾದ ಆಲಿಸಿ ಇಂದು ದಿನಾಂತ್ಯಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿತು.

ವಿಚಾರಣೆ ವೇಳೆ ಆಶಾಪುರಂ ಮೈನ್‌ಚೆಮ್‌ನ ಚೇತನ್ ಶಾ ಪರ ವಾದ ಮಂಡಿಸಿದ ವಕೀಲರು, ಅರ್ಜಿದಾರರ ಎಲ್ಲ ರೀತಿಯ ರಾಯಧನ ಪಾವತಿ ಮಾಡಿದ್ದಾರೆ. ಜೊತೆಗೆ ತೆರಿಗೆಯನ್ನೂ ಪಾವತಿ ಮಾಡಿದ್ದಾರೆ. ಆದರೂ ಅರ್ಜಿದಾರರನ್ನು ಆರೋಪಿಯನ್ನಾಗಿಸಿ ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.

ಖಾರದಪುಡಿ ಮಹೇಶ್ ಮತ್ತು ಸತೀಶ್ ಸೈಲ್ ಪರ ವಕೀಲರು, ಪ್ರಕರಣದ ವಿಚಾರಣಾ ಹಂತದಲ್ಲಿ ಶಿಕ್ಷೆಯನ್ನು ಅಮಾನತ್ತಿನಲ್ಲಿಡಬೇಕು ಎಂದು ಸುಪ್ರೀಂ ಕೋರ್ಟ್ ಹಲವು ಪ್ರಕರಣಗಳಲ್ಲಿ ತಿಳಿಸಿದೆ. ಈ ನಿಟ್ಟಿನಲ್ಲಿ ಶಿಕ್ಷೆ ಅಮಾನತಿನಲ್ಲಿಡಬೇಕು ಎಂದು ಕೋರಿದರು.

ಅಲ್ಲದೇ, ಅದಿರು ಖರೀದಿಸಿರುವ ಸಂಬಂಧ ಮಾರಾಟ ಮಾಡಿರುವವರಿಗೆ ಹಣವನ್ನು ಬ್ಯಾಂಕ್ ಮೂಲಕವೇ ಪಾವತಿ ಮಾಡಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ದಾಖಲೆಗಳನ್ನು ಪೀಠಕ್ಕೆ ಸಲ್ಲಿಸಲಾಗಿದೆ. ಆದರೆ, ದೊಡ್ಡ ಮೊತ್ತದ ದಂಡ ವಿಧಿಸಲಾಗಿದೆ. ಅಷ್ಟು ಮೊತ್ತವನ್ನು ಹೇಗೆ ಪಾವತಿ ಮಾಡುವುದು ಎಂದು ಪ್ರಶ್ನಿಸಿದರು.

ಸಿಬಿಐ ಪರವಾಗಿ ವಾದ ಮಂಡಿಸಿದ ವಕೀಲರು, ಅರ್ಜಿದಾರರ ವಿರುದ್ಧದ ವಿವಿಧ ಆರೋಪಗಳಿಗೆ ಕನಿಷ್ಠ 49 ವರ್ಷಗಳ ಕಾಲ ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದರೆ, ಏಕಕಾಲಕ್ಕೆ ಶಿಕ್ಷೆ ಅನುಭವಿಸಬೇಕು ಎಂದು ವಿಚಾರಣಾ ನ್ಯಾಯಾಲಯ ಗರಿಷ್ಠ ಏಳು ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದೆ. ಹೀಗಾಗಿ ದಂಡ ಪಾವತಿಯಿಂದ ವಿನಾಯಿತಿ ನೀಡಬಾರದು ಎಂದು ಪೀಠಕ್ಕೆ ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ, ಶಿಕ್ಷೆ ಅಮಾನತಿನಲ್ಲಿಡುವುದು ಮತ್ತು ಜಾಮೀನು ನೀಡುವ ಸಂಬಂಧ ದಿನಾಂತ್ಯಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ: ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.