ಮಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಹೊರಬಿದ್ದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿ ರಾಜ್ಯಕ್ಕೆ 2ನೇ ಸ್ಥಾನ ಪಡೆದುಕೊಂಡಿದ್ದಾರೆ.
ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. 625ಕ್ಕೆ 624 ಅಂಕ ಪಡೆದಿದ್ದಾರೆ. ಚಿನ್ಮಯ್ ತಂದೆ ಗಣೇಶ ರಾಮಚಂದ್ರ ಭಟ್ ಉಪನ್ಯಾಸಕರಾಗಿದ್ದು, ತಾಯಿ ಮಾಲಿನಿ ಹೆಗ್ಡೆ ಸರಕಾರಿ ಶಾಲೆಯ ಶಿಕ್ಷಕರು.
SSLC- ಕರಾವಳಿ ಜಿಲ್ಲೆಗಳ ಸಾಧನೆ: ಈ ಬಾರಿಯ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆ ಶೇ.92.12 ಫಲಿತಾಂಶ ಪಡೆದು ದ್ವಿತೀಯ ಸ್ಥಾನದಲ್ಲಿದೆ. ಕಳೆದ ವರ್ಷ ಉಡುಪಿ 14 ಮತ್ತು ದಕ್ಷಿಣ ಕನ್ನಡ ಜಿಲ್ಲೆ 17ನೇ ಸ್ಥಾನದಲ್ಲಿತ್ತು.
ಕೆಲವು ವರ್ಷಗಳ ಹಿಂದೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಸ್ಥಾನ ಪಡೆಯುತ್ತಿದ್ದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಇತ್ತೀಚಿನ ವರ್ಷಗಳಲ್ಲಿ ಆ ರೀತಿಯ ಸಾಧನೆ ಕಂಡುಬರುತ್ತಿರಲಿಲ್ಲ. ಪಿಯುಸಿ ಫಲಿತಾಂಶದಲ್ಲಿ ಪ್ರಥಮ, ದ್ವಿತೀಯ ಸ್ಥಾನವನ್ನು ಉಳಿಸಿಕೊಳ್ಳುತ್ತಿರುವ ಕರಾವಳಿ ಜಿಲ್ಲೆಗಳು ಈ ಬಾರಿ ಎಸ್ಎಸ್ಎಲ್ಸಿಯಲ್ಲೂ ಪ್ರಥಮ, ದ್ವಿತೀಯ ಸ್ಥಾನ ಪಡೆದು ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದಿವೆ.
ಇದನ್ನೂ ಓದಿ: 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿನಿ; ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಫಸ್ಟ್ - SSLC RESULT